IND vs PAK: ಭಾರತ- ಪಾಕ್ ಕದನದಲ್ಲಿ ಅಧಿಕ ರನ್ ಬಾರಿಸಿದ ಸಕ್ರಿಯ ಬ್ಯಾಟರ್ ಯಾರು ಗೊತ್ತಾ?

|

Updated on: Feb 22, 2025 | 7:51 PM

India vs Pakistan: ಪಾಕಿಸ್ತಾನ ವಿರುದ್ಧ ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು ರನ್‌ಗಳನ್ನು (2526) ಗಳಿಸಿದ ದಾಖಲೆ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿದೆ. ಆದರೆ ಅವರು ಈಗ ಕ್ರಿಕೆಟ್​ನಿಂದ ನಿವೃತ್ತರಾಗಿದ್ದಾರೆ. ಪ್ರಸ್ತುತ ಭಾರತೀಯ ಕ್ರಿಕೆಟಿಗರಲ್ಲಿ, ನಾಯಕ ರೋಹಿತ್ ಶರ್ಮಾ ನೆರೆಯ ದೇಶದ ವಿರುದ್ಧ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಹೊಂದಿದ್ದಾರೆ.

1 / 6
ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಕದನಕ್ಕೆ ವೇದಿಕೆ ಸಜ್ಜಾಗಿದೆ. ದುಬೈನ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಮುಖಾಮುಖಿಯಾಗಲು ಉಭಯ ತಂಡಗಳು ಸಜ್ಜಾಗಿವೆ. ಈ ಪಂದ್ಯವನ್ನು ನೋಡಲು ಕೋಟ್ಯಾಂತರ ಅಭಿಮಾನಿಗಳು ಕಾದು ಕುಳಿತಿದ್ದಾರೆ. ಆದರೆ ಅದಕ್ಕೂ ಮುನ್ನ ಉಭಯ ತಂಡಗಳ ಏಕದಿನ ಮುಖಾಮುಖಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಸಕ್ರಿಯ ಆಟಗಾರರನ್ನು ನೋಡೋಣ.

2 / 6
ಪಾಕಿಸ್ತಾನ ವಿರುದ್ಧ ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು ರನ್‌ಗಳನ್ನು (2526) ಗಳಿಸಿದ ದಾಖಲೆ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿದೆ. ಆದರೆ ಅವರು ಈಗ ಕ್ರಿಕೆಟ್​ನಿಂದ ನಿವೃತ್ತರಾಗಿದ್ದಾರೆ. ಪ್ರಸ್ತುತ ಭಾರತೀಯ ಕ್ರಿಕೆಟಿಗರಲ್ಲಿ, ನಾಯಕ ರೋಹಿತ್ ಶರ್ಮಾ ನೆರೆಯ ದೇಶದ ವಿರುದ್ಧ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಹೊಂದಿದ್ದಾರೆ.

3 / 6
ಪಾಕಿಸ್ತಾನ ವಿರುದ್ಧ ಇದುವರೆಗೆ  19 ಪಂದ್ಯಗಳನ್ನಾಡಿರುವ ರೋಹಿತ್ ಶರ್ಮಾ 51.35 ರ ಸರಾಸರಿಯಲ್ಲಿ 873 ರನ್ ಗಳಿಸಿದ್ದಾರೆ. ಇದರಲ್ಲಿ ಎರಡು ಶತಕಗಳು ಮತ್ತು ಎಂಟು ಅರ್ಧಶತಕಗಳು ಸೇರಿವೆ. ಇದೀಗ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲೂ ರೋಹಿತ್ ಪಾಕ್ ವಿರುದ್ಧ ತಮ್ಮ ಭರ್ಜರಿ ಫಾರ್ಮ್​ ಮುಂದುವರೆಸಲಿ.

4 / 6
ಇನ್ನು ವಿರಾಟ್ ಕೊಹ್ಲಿ ಬಗ್ಗೆ ಹೇಳುವುದಾದರೆ, ಪಾಕಿಸ್ತಾನ ವಿರುದ್ಧ 16 ಏಕದಿನ ಪಂದ್ಯಗಳನ್ನಾಡಿರುವ ವಿರಾಟ್ ಕೊಹ್ಲಿ 52.15 ರ ಸರಾಸರಿಯಲ್ಲಿ 678 ರನ್ ಗಳಿಸಿದ್ದಾರೆ. ಇದರಲ್ಲಿ ಮೂರು ಶತಕಗಳು ಮತ್ತು ಎರಡು ಅರ್ಧಶತಕಗಳನ್ನು ಸೇರಿವೆ. ಈ ಮಾದರಿಯಲ್ಲಿ ಅವರ ಅತ್ಯಧಿಕ ಸ್ಕೋರ್ 183 ರನ್‌ಗಳಾಗಿವೆ.

5 / 6
ಇನ್ನು ಪಾಕಿಸ್ತಾನದ ಬಗ್ಗೆ ಹೇಳುವುದಾದರೆ, ಪಾಕ್ ತಂಡದ ಮಾಜಿ ನಾಯಕ ಬಾಬರ್ ಆಝಂ ಎಂಟು ಪಂದ್ಯಗಳಲ್ಲಿ ಕೇವಲ 218 ರನ್ ಗಳಿಸಿದ್ದಾರೆ. ಈ ಅವಧಿಯಲ್ಲಿ, ಅವರ ಬ್ಯಾಟ್‌ನಿಂದ ಕೇವಲ ಒಂದು ಅರ್ಧಶತಕ ಮಾತ್ರ ಮೂಡಿ ಬಂದಿದೆ. ಇದರಲ್ಲಿ 50 ರನ್‌ಗಳು ಅವರ ಅತ್ಯಧಿಕ ಸ್ಕೋರ್ ಆಗಿದೆ.

6 / 6
ದುಬೈ ಮೈದಾನದಲ್ಲಿ ಭಾರತ ತಂಡದ ಪ್ರದರ್ಶನ ಇಲ್ಲಿಯವರೆಗೆ ಅತ್ಯುತ್ತಮವಾಗಿದೆ. ಇಲ್ಲಿ ಆಡಿದ 7 ಏಕದಿನ ಪಂದ್ಯಗಳಲ್ಲಿ ಭಾರತ 6 ರಲ್ಲಿ ಗೆದ್ದಿದ್ದರೆ, ಒಂದು ಪಂದ್ಯ ಟೈ ಆಗಿದೆ. ಈ ತಂಡವು ಈ ಮೈದಾನದಲ್ಲಿ ಪಾಕಿಸ್ತಾನದ ವಿರುದ್ಧ ಎರಡು ಪಂದ್ಯಗಳನ್ನು ಆಡಿದ್ದು, ಎರಡರಲ್ಲೂ ಗೆಲ್ಲುವಲ್ಲಿ ಯಶಸ್ವಿಯಾಗಿದೆ.