

ಉಭಯ ತಂಡಗಳು ಇದುವರೆಗೆ ಟಿ20 ವಿಶ್ವಕಪ್ನಲ್ಲಿ ಐದು ಬಾರಿ ಮುಖಾಮುಖಿಯಾಗಿದ್ದು, ಈ ಐದೂ ಪಂದ್ಯಗಳಲ್ಲೂ ಭಾರತವೇ ಗೆದ್ದಿದೆ. ಇದಾಗ್ಯೂ ದುಬೈ ಇಂಟರ್ನ್ಯಾಷನಲ್ ಮೈದಾನದಲ್ಲಿ ಇದೇ ಮೊದಲ ಬಾರಿಗೆ ಪಾಕ್ ವಿರುದ್ದ ಸೆಣಸಾಡುತ್ತಿರುವುದು ವಿಶೇಷ.

India-Pakistan

ಇನ್ನು ಆಲ್ರೌಂಡರ್ಗಳಾಗಿ ಹಾರ್ದಿಕ್ ಪಾಂಡ್ಯ ಹಾಗೂ ರವೀಂದ್ರ ಜಡೇಜಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಅದೇ ರೀತಿ ಸ್ಪಿನ್ನರ್ ಆಗಿ ವರುಣ್ ಚಕ್ರವರ್ತಿ ತಂಡದಲ್ಲಿದ್ದು, ವೇಗಿಗಳಾ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಹಾಗೂ ಭುವನೇಶ್ವರ್ ಕುಮಾರ್ ಕಣಕ್ಕಿಳಿಯಲಿದ್ದಾರೆ. ಉಭಯ ತಂಡಗಳು ಹೀಗಿವೆ:

ಟೀಮ್ ಇಂಡಿಯಾ: ಕೆಎಲ್ ರಾಹುಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ (ನಾಯಕ), ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ವರುಣ್ ಚಕ್ರವರ್ತಿ, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ

ಪಾಕಿಸ್ತಾನ್ ತಂಡ: ಬಾಜರ್ ಆಜಂ (ನಾಯಕ), ಮೊಹಮ್ಮದ್ ರಿಜ್ವಾನ್, ಫಖರ್ ಝಮಾನ್, ಮೊಹಮ್ಮದ್ ಹಫೀಪ್, ಶೊಯೇಬ್ ಮಲಿಕ್, ಆಸಿಫ್ ಅಲಿ, ಇಮಾದ್ ವಾಸಿಂ, ಶಾದಾಬ್ ಖಾನ್, ಹಸನ್ ಅಲಿ, ಶಾಹಿನ್ ಅಫ್ರಿದಿ, ಹಾರಿಸ್ ರೌಫ್.
Published On - 7:07 pm, Sun, 24 October 21