India vs Pakistan: ಟೀಮ್ ಇಂಡಿಯಾಗೆ ಬಿಗ್ ಶಾಕ್: ಪ್ರಮುಖ ಆಟಗಾರನಿಗೆ ಗಾಯ..!

|

Updated on: Jun 08, 2024 | 12:14 PM

T20 World Cup 2024: ಭಾನುವಾರ (ಜೂ.9) ನಡೆಯಲಿರುವ ಟಿ20 ವಿಶ್ವಕಪ್​ನ 19ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ನ್ಯೂಯಾರ್ಕ್​ನ ನಸ್ಸೌ ಕೌಂಟಿ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಇಡೀ ವಿಶ್ವದ ಕ್ರಿಕೆಟ್ ಪ್ರೇಮಿಗಳು ಕಾತುರದಿಂದ ಕಾಯುತ್ತಿದ್ದಾರೆ. ಆದರೆ ಈ ಪಂದ್ಯಕ್ಕೂ ಮುನ್ನ ಭಾರತ ತಂಡದ ಪ್ರಮುಖ ಆಟಗಾರ ಗಾಯಗೊ0ಂಡಿದ್ದಾರೆ.

1 / 6
T20 World Cup 2024: ಭಾರತ ಮತ್ತು ಪಾಕಿಸ್ತಾನ್ (India vs Pakistan) ನಡುವಣ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾಗೆ ಆಘಾತ ಎದುರಾಗಿದೆ. ಭಾರತ ತಂಡದ ನಾಯಕ ರೋಹಿತ್ ಶರ್ಮಾ (Rohit Sharma) ಮತ್ತೆ ಗಾಯಗೊಂಡಿದ್ದಾರೆ. ಐರ್ಲೆಂಡ್ ವಿರುದ್ಧದ ಪಂದ್ಯದ ವೇಳೆ ಭುಜಕ್ಕೆ ಗಾಯ ಮಾಡಿಕೊಂಡಿದ್ದ ಹಿಟ್​ಮ್ಯಾನ್  ಸಂಪೂರ್ಣವಾಗಿ ಚೇತರಿಸಿಕೊಂಡಿದ್ದರು.

2 / 6
ಅದರಂತೆ ಶುಕ್ರವಾರ ಅಭ್ಯಾಸಕ್ಕೆ ಇಳಿದಿದ್ದರು. ಇದೇ ವೇಳೆ ನೆಟ್ಸ್​​ನಲ್ಲಿ ಬ್ಯಾಟಿಂಗ್ ಪ್ರಾಕ್ಟೀಸ್ ಮಾಡಿದ್ದ ರೋಹಿತ್ ಶರ್ಮಾಶ ಅವರ ಹೆಬ್ಬೆರಳಿಗೆ ಗಾಯವಾಗಿದ್ದು, ಇದರಿಂದಾಗಿ ಅಭ್ಯಾಸ ನಿಲ್ಲಿಸಿ ತ್ವರಿತವಾಗಿ ವೈದ್ಯಕೀಯ ಚಿಕಿತ್ಸೆ ಪಡೆಯಲು ತೆರಳಿದ್ದಾರೆ.

3 / 6
ಈ ಗಾಯದ ಸುದ್ದಿ ಬೆನ್ನಲ್ಲೇ ರೋಹಿತ್ ಶರ್ಮಾ ಪಾಕಿಸ್ತಾನ್ ವಿರುದ್ಧದ ಪಂದ್ಯಕ್ಕೆ ಅಲಭ್ಯರಾಗಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ಭಾರತ ಮತ್ತು ಪಾಕ್ ನಡುವಣ ಪಂದ್ಯವು ಭಾನುವಾರ ನಡೆಯಲಿದ್ದು, ಅದಕ್ಕೂ ಮುನ್ನ ಹಿಟ್​ಮ್ಯಾನ್ ಸಂಪೂರ್ಣವಾಗಿ ಚೇತರಿಸಿಕೊಳ್ಳಬೇಕಿದೆ.

4 / 6
ಸದ್ಯದ ಮಾಹಿತಿ ಪ್ರಕಾರ, ರೋಹಿತ್ ಶರ್ಮಾ ಅವರ ಹೆಬ್ಬೆರಳಿಗೆ ಗಂಭೀರ ಗಾಯವಾಗಿಲ್ಲ. ಇದಾಗ್ಯೂ ಬೆರಳು ಸ್ವಲ್ಪ ಊದಿಕೊಂಡಿದೆ ಎಂದು ತಿಳಿದು ಬಂದಿದೆ. ಆದರೆ ಪಾಕ್ ವಿರುದ್ಧದ ಪಂದ್ಯದ ವೇಳೆಗೆ ಈ ಗಾಯದ ನೋವು ಸಂಪೂರ್ಣವಾಗಿ ಕ್ಷೀಣಿಸಿದರೆ ಮಾತ್ರ ಅವರು ಕಣಕ್ಕಿಳಿಯಲಿದ್ದಾರೆ.

5 / 6
ಹೀಗಾಗಿ ನ್ಯೂಯಾರ್ಕ್​ನ ನಸ್ಸೌ ಕೌಂಟಿ ಸ್ಟೇಡಿಯಂನಲ್ಲಿ ಭಾನುವಾರ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ್ ನಡುವಣ ಹೈವೊಲ್ಟೇಜ್ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಕಣಕ್ಕಿಳಿಯಲಿದ್ದಾರಾ ಅಥವಾ ಉಪನಾಯಕ ಹಾರ್ದಿಕ್ ಪಾಂಡ್ಯ ಭಾರತ ತಂಡವನ್ನು ಮುನ್ನಡೆಸಲಿದ್ದಾರಾ ಎಂಬುದನ್ನು ಕಾದು ನೋಡಬೇಕಿದೆ.

6 / 6
ಭಾರತ ಟಿ20​ ವಿಶ್ವಕಪ್ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ.||| ಮೀಸಲು ಆಟಗಾರರು: ಶುಭ್​ಮನ್ ಗಿಲ್, ಅವೇಶ್ ಖಾನ್, ರಿಂಕು ಸಿಂಗ್, ಖಲೀಲ್ ಅಹ್ಮದ್.

Published On - 12:11 pm, Sat, 8 June 24