AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup: ಭಾರತವನ್ನು ದುಃಸ್ವಪ್ನದಂತೆ ಕಾಡಿದ ಪಾಕ್ ವಿರುದ್ಧದ ಸೋಲು ಯಾವುದು ಗೊತ್ತಾ?

India vs Pakistan T20 World Cup: ಟಿ20 ವಿಶ್ವಕಪ್‌ನಲ್ಲಿ ಭಾರತದ ವಿರುದ್ಧ ಪಾಕಿಸ್ತಾನದ ಮೊದಲ ಐತಿಹಾಸಿಕ ಗೆಲುವು 2021ರಲ್ಲಿ ದುಬೈನಲ್ಲಿ ಧಕ್ಕಿತು. ಆ ಪಂದ್ಯದಲ್ಲಿ, ಪಾಕಿಸ್ತಾನ ಭಾರತವನ್ನು 10 ವಿಕೆಟ್‌ಗಳಿಂದ ಸೋಲಿಸಿತು. ಮೊಹಮ್ಮದ್ ರಿಜ್ವಾನ್ ಮತ್ತು ಬಾಬರ್ ಆಜಮ್ ಅಜೇಯ ಅರ್ಧಶತಕಗಳನ್ನು ಗಳಿಸಿ ತಂಡಕ್ಕೆ ಜಯ ತಂದುಕೊಟ್ಟರು. ಈ ಗೆಲುವು ಟಿ20 ವಿಶ್ವಕಪ್ ಇತಿಹಾಸದಲ್ಲಿ ಪಾಕಿಸ್ತಾನಕ್ಕೆ ಭಾರತದ ವಿರುದ್ಧ ಲಭಿಸಿದ ಮೊದಲ ಗೆಲುವಾಗಿದೆ.

ಪೃಥ್ವಿಶಂಕರ
|

Updated on: Feb 13, 2026 | 4:51 PM

Share
ಭಾರತ ಮತ್ತು ಪಾಕಿಸ್ತಾನ ಇಲ್ಲಿಯವರೆಗೆ 8 ಪಂದ್ಯಗಳಲ್ಲಿ ಪರಸ್ಪರ ಮುಖಾಮುಖಿಯಾಗಿವೆ. ಇದರಲ್ಲಿ ಭಾರತ 7 ಪಂದ್ಯಗಳನ್ನು ಗೆದ್ದಿದ್ದರೆ, ಪಾಕಿಸ್ತಾನ ಒಂದು ಪಂದ್ಯವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಇದರಲ್ಲಿ, ಟಿ20 ವಿಶ್ವಕಪ್ ಇತಿಹಾಸದಲ್ಲಿ ಪಾಕಿಸ್ತಾನ ಭಾರತವನ್ನು ಒಮ್ಮೆ ಮಾತ್ರ ಸೋಲಿಸಿದೆ. ಆ ಪಂದ್ಯ ಯಾವಾಗ ಮತ್ತು ಎಲ್ಲಿ ನಡೆಯಿತು ಎಂಬುದರ ವಿವರ ಇಲ್ಲಿದೆ.

1 / 7
ಅಕ್ಟೋಬರ್ 24, 2021 ರಂದು ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್‌ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಪರಸ್ಪರ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಪಾಕಿಸ್ತಾನ ಭಾರತವನ್ನು 10 ವಿಕೆಟ್​ಗಳಿಂದ ಸೋಲಿಸಿತ್ತು. ಇದು ಟಿ20 ವಿಶ್ವಕಪ್ ಇತಿಹಾಸದಲ್ಲಿ ಭಾರತದ ವಿರುದ್ಧ ಪಾಕಿಸ್ತಾನದ ಮೊದಲ ಗೆಲುವಾಗಿದೆ.

2 / 7
ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ 151 ರನ್ ಕಲೆಹಾಕಿತು. ತಂಡದ ಪರ ಕೆಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಆದರೆ ಮೊದಲ ಓವರ್‌ನ 4 ನೇ ಎಸೆತದಲ್ಲಿ ಯಾವುದೇ ರನ್ ಗಳಿಸದೆ ರೋಹಿತ್ ಶರ್ಮಾ ಔಟಾದರು.

3 / 7
ಕೆಎಲ್ ರಾಹುಲ್ ಕೂಡ 3 ನೇ ಓವರ್‌ನಲ್ಲಿ 8 ಎಸೆತಗಳಲ್ಲಿ 3 ರನ್ ಗಳಿಸಿ ಔಟಾದರು. ನಂತರ, ಬಂದ ಸೂರ್ಯಕುಮಾರ್ ಯಾದವ್ ಕೂಡ ಕೇವಲ 8 ಎಸೆತಗಳಲ್ಲಿ ಒಂದು ಸಿಕ್ಸರ್ ಮತ್ತು ಒಂದು ಬೌಂಡರಿಯೊಂದಿಗೆ 11 ರನ್ ಗಳಿಸಿ ಔಟಾದರು. ಹೀಗಾಗಿ ಭಾರತ ಪವರ್‌ಪ್ಲೇನಲ್ಲಿ 3 ವಿಕೆಟ್‌ಗಳಿಗೆ 36 ರನ್ ಗಳಿಸಿತು. ಇದರ ನಂತರ, ಕೊಹ್ಲಿಯೊಂದಿಗೆ ಕೈಜೋಡಿಸಿದ ರಿಷಭ್ ಪಂತ್ ತಂಡದ ಇನ್ನಿಂಗ್ಸ್ ನಿಭಾಯಿಸಿದರು.  ಇವರಿಬ್ಬರ ನಡುವೆ 50 ರನ್​ಗಳ ಜೊತೆಯಾಟ ನಡೆಯಿತು.

4 / 7
ಈ ಹಂತದಲ್ಲಿ 39 ರನ್‌ಗಳಿಸಿದ್ದ ರಿಷಭ್ ಪಂತ್ ಔಟಾದರೆ, ಏಕಾಂಗಿ ಹೋರಾಟ ನಡೆಸಿದ ವಿರಾಟ್ ಕೊಹ್ಲಿ 57 ರನ್ ಗಳಿಸಿ ಔಟಾದರು. ಕೊಹ್ಲಿ 49 ಎಸೆತಗಳಲ್ಲಿ ಐದು ಬೌಂಡರಿ ಮತ್ತು ಒಂದು ಸಿಕ್ಸರ್ ನೆರವಿನಿಂದ 57 ರನ್ ಗಳಿಸಿದರು. ಇದರಿಂದಾಗಿ ಭಾರತ ತಂಡ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 151 ರನ್ ಗಳಿಸಿತು.

5 / 7
ಗೆಲ್ಲಲು 152 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಪಾಕಿಸ್ತಾನ ಪರ ನಾಯಕ ಬಾಬರ್ ಆಝಂ ಮತ್ತು ಮೊಹಮ್ಮದ್ ರಿಜ್ವಾನ್ ಇನ್ನಿಂಗ್ಸ್ ಆರಂಭಿಸಿದರು. ಈ ಆರಂಭಿಕ ಜೋಡಿ ಮೊದಲ 6 ಓವರ್‌ಗಳಲ್ಲಿ ಯಾವುದೇ ವಿಕೆಟ್ ಕಳೆದುಕೊಳ್ಳದೆ 43 ರನ್ ಗಳಿಸಿತು. ವರುಣ್ ಚಕ್ರವರ್ತಿ ಎಸೆದ 13 ನೇ ಓವರ್‌ನ ನಾಲ್ಕನೇ ಎಸೆತದಲ್ಲಿ ಬಾಬರ್ ಸಿಕ್ಸರ್ ಬಾರಿಸುವ ಮೂಲಕ ಅರ್ಧಶತಕ ಪೂರೈಸಿದರೆ, ರಿಜ್ವಾನ್ 15 ನೇ ಓವರ್‌ನ ಎರಡನೇ ಎಸೆತದಲ್ಲಿ ಬುಮ್ರಾ ಎಸೆತದಲ್ಲಿ ಬೌಂಡರಿ ಬಾರಿಸುವ ಮೂಲಕ ಅರ್ಧಶತಕ ಪೂರೈಸಿದರು.

6 / 7
ಭಾರತೀಯ ಬೌಲರ್‌ಗಳು ಇಬ್ಬರ ವಿಕೆಟ್‌ಗಳನ್ನು ಕಬಳಿಸಲು ಹೆಣಗಾಡಿದರು. ಕೊನೆಯಲ್ಲಿ, ಪಾಕಿಸ್ತಾನ 17.5 ಓವರ್‌ಗಳಲ್ಲಿ ವಿಕೆಟ್ ಕಳೆದುಕೊಳ್ಳದೆ 152 ರನ್‌ಗಳ ಗುರಿಯನ್ನು ಬೆನ್ನಟ್ಟಿ ಜಯ ಸಾಧಿಸಿತು. ಮೊಹಮ್ಮದ್ ರಿಜ್ವಾನ್ 55 ಎಸೆತಗಳಲ್ಲಿ 6 ಬೌಂಡರಿ ಮತ್ತು 3 ಸಿಕ್ಸರ್‌ಗಳ ಸಹಾಯದಿಂದ 79 ರನ್ ಗಳಿಸಿದರೆ, ನಾಯಕ ಬಾಬರ್ ಆಝಂ 52 ಎಸೆತಗಳಲ್ಲಿ 6 ಬೌಂಡರಿ ಮತ್ತು 2 ಸಿಕ್ಸರ್‌ಗಳ ಸಹಾಯದಿಂದ 68 ರನ್ ಗಳಿಸಿ ಅಜೇಯರಾಗಿ ಉಳಿದರು.

7 / 7
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ

ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ

ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್

ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ

ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ

ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್

ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ

40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?

ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ

ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ