- Kannada News Photo gallery Cricket photos India vs Pakistan Team India all set for AsiaCup 2022 Rohit Kohli practicing for first match
IND vs PAK: ಪಾಕ್ ವಿರುದ್ಧದ ಕದನಕ್ಕೆ ಭಾರತ ಭರ್ಜರಿ ಅಭ್ಯಾಸ: ಫೋಟೋ ನೋಡಿ
Asia Cup 2022: ಹದಿನೈದನೆ ಆವೃತ್ತಿಯ ಏಷ್ಯಾಕಪ್ ಟೂರ್ನಿಗೆ ಶನಿವಾರ ಚಾಲನೆ ಸಿಕ್ಕಿದೆ. ಇಂದು ಎರಡನೇ ಪಂದ್ಯ ನಡೆಯಲಿದ್ದು, ಇಡೀ ವಿಶ್ವವೇ ತುದಿಗಾಲಿನಲ್ಲಿ ನಿಂತು ಕಾಯುತ್ತಿರುವ ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವೆ ಮುಖಾಮುಖಿ ಆಗಲಿದೆ.
Updated on: Aug 28, 2022 | 8:16 AM

ಹದಿನೈದನೆ ಆವೃತ್ತಿಯ ಏಷ್ಯಾಕಪ್ ಟೂರ್ನಿಗೆ ಶನಿವಾರ ಚಾಲನೆ ಸಿಕ್ಕಿದೆ. ಇಂದು ಎರಡನೇ ಪಂದ್ಯ ನಡೆಯಲಿದ್ದು, ಇಡೀ ವಿಶ್ವವೇ ತುದಿಗಾಲಿನಲ್ಲಿ ನಿಂತು ಕಾಯುತ್ತಿರುವ ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವೆ ಮುಖಾಮುಖಿ ಆಗಲಿದೆ. ಇದಕ್ಕಾಗಿ ಟೀಮ್ ಇಂಡಿಯಾ ಆಟಗಾರರು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ.

ಕಳೆದ ವರ್ಷ ನಡೆದ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಭಾರತ, ಪಾಕಿಸ್ತಾನದೆದುರು ಸೋತಿತ್ತು. ಹೀಗಾಗಿ ಟೀಮ್ ಇಂಡಿಯಾಕ್ಕೆ ಇದೊಂದು ಸೇಡಿನ ಪಂದ್ಯ ಎಂದುಕೂಡ ಹೇಳಬಹುದು.

ಸಾಕಷ್ಟು ವಿಶ್ರಾಂತಿಯ ಬಳಿಕ ಭಾರತ ತಂಡ ಕೂಡಿಕೊಂಡಿರುವ ವಿರಾಟ್ ಕೊಹ್ಲಿಗೆ ಈ ಟೂರ್ನಿ ಮಹತ್ವದ್ದಾಗಿದೆ. ಈಗಾಗಲೇ ಫಾರ್ಮ್ ಸಮಸ್ಯೆ ಎದುರಿಸುತ್ತಿರುವ ಕೊಹ್ಲಿ ಉತ್ತಮ ಪ್ರದರ್ಶನ ನೀಡಬೇಕಾದ ಒತ್ತಡದಲ್ಲಿದ್ದಾರೆ. ಇದಕ್ಕಾಗಿ ಭರ್ಜರಿ ಅಭ್ಯಾಸದಲ್ಲಿ ಕೂಡ ನಿರತರಾಗಿದ್ದಾರೆ.

ಉಳಿದಂತೆ ಪ್ಲೇಯಿಂಗ್ ಇಲೆವೆನ್ನಲ್ಲಿ ಸೂರ್ಯಕುಮಾರ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್, ಕಾರ್ತಿಕ್, ಭುವನೇಶ್ವರ್, ಚಹಲ್ಗೆ ಸ್ಥಾನ ಖಚಿತವಾಗಿದೆ.

ಅಭ್ಯಾಸದಲ್ಲಿ ನಿರತರಾಗಿರುವ ದಿನೇಶ್ ಕಾರ್ತಿಕ್

ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದ ಪಿಚ್ ಸಮಯೋಜಿತವಾಗಿದೆ. ಹೊಸ ಚೆಂಡಿನಲ್ಲಿ ವೇಗಿಗಳು ಲಾಭ ಪಡೆದುಕೊಳ್ಳಬಹುದಾಗಿದೆ. ಆದರೆ, ಈ ಪಿಚ್‌ನಲ್ಲಿ ವಿಕೆಟ್‌ಗಳನ್ನು ಉಳಿಸಿಕೊಳ್ಳುವುದು ಬಹುಮುಖ್ಯ ಸಂಗತಿಯಾಗಿದೆ.

ಭಾರತ ಹಾಗೂ ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆಯಿಲ್ಲ. ಹೀಗಾಗಿ ಪಂದ್ಯ ನಿರಾತಂಕವಾಗಿ ಸಾಗಲಿದೆ. ದಿನವಿಡೀ ಶುಭ್ರ ವಾತಾವರಣದಿಂದ ಕೂಡಿರಲಿದ್ದು ತಾಪಮಾನ 28-30 ಡಿಗ್ರಿ ಸೆಲ್ಸಿಯಸ್‌ನಷ್ಟು ಇರಲಿದೆ. ಇನ್ನು ಪಂದ್ಯದ ಆರಂಭದ ಬಳಿಕ ಗಾಳಿಯ ವೇಗದ ಪ್ರಮಾಣ ಕೂಡ ಕಡಿಮೆಯಾಗಲಿದೆ.

ಟಾಸ್ ಕೂಡ ಈ ಪಂದ್ಯದಲ್ಲಿ ಬಹುಮುಖ್ಯ ಪಾತ್ರವಹಿಸಲಿದ್ದು, ಟಾಸ್ ಗೆದ್ದ ತಂಡ ಬೌಲಿಂಗ್ ಆಯ್ಕೆ ಮಾಡಿಕೊಳ್ಳುವುದು ಉತ್ತಮ. ಯಾಕೆಂದರೆ ಇಲ್ಲಿ ಚೇಸಿಂಗ್ ಮಾಡಿದ ತಂಡ ಹೆಚ್ಚು ಗೆದ್ದ ಇತಿಹಾಸವಿದೆ.
