- Kannada News Photo gallery Cricket photos India vs Pakistan: Virat Kohli And Rohit Sharma Can Break Record
India vs Pakistan: ಬಾಬರ್ ದಾಖಲೆ ಮುರಿಯುವವರು ಯಾರು? ವಿರಾಟ್ ಕೊಹ್ಲಿ ಅಥವಾ ರೋಹಿತ್ ಶರ್ಮಾ
India vs Pakistan: ಟಿ20 ವಿಶ್ವಕಪ್ನ 19ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ನ್ಯೂಯಾರ್ಕ್ನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಸೋತರೆ ಪಾಕಿಸ್ತಾನ್ ಟಿ20 ವಿಶ್ವಕಪ್ನಿಂದ ಹೊರಬೀಳುವುದು ಬಹುತೇಕ ಖಚಿತವಾಗಲಿದೆ. ಏಕೆಂದರೆ ಕಳೆದ ಪಂದ್ಯದಲ್ಲಿ ಯುಎಸ್ಎ ತಂಡ ಪಾಕ್ ವಿರುದ್ಧ ಗೆದ್ದು ಬೀಗಿತ್ತು. ಹೀಗಾಗಿ ಈ ಪಂದ್ಯವು ಪಾಕ್ ಪಾಲಿಗೆ ನಿರ್ಣಾಯಕ.
Updated on: Jun 09, 2024 | 11:54 AM

T20 World Cup 2024: ಟಿ20 ವಿಶ್ವಕಪ್ನಲ್ಲಿ ಇಂದು ಭಾರತ ಮತ್ತು ಪಾಕಿಸ್ತಾನ್ (IND vs PAK) ತಂಡಗಳು ಕಣಕ್ಕಿಳಿಯಲಿದೆ. ನ್ಯೂಯಾರ್ಕ್ನ ನಸ್ಸೌ ಕೌಂಟಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ವಿರಾಟ್ ಕೊಹ್ಲಿ (Virat Kohli) ಹಾಗೂ ರೋಹಿತ್ ಶರ್ಮಾ (Rohit Sharma) ವಿಶ್ವ ದಾಖಲೆಯನ್ನು ಬರೆಯಹುದು. ಅದು ಸಹ ಬಾಬರ್ ಆಝಂ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

ಅಂದರೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆ ಬಾಬರ್ ಆಝಂ ಹೆಸರಿನಲ್ಲಿದೆ. 113 ಟಿ20 ಇನಿಂಗ್ಸ್ ಆಡಿರುವ ಬಾಬರ್ ಇದುವರೆಗೆ 4067 ರನ್ ಕಲೆಹಾಕಿದ್ದಾರೆ. ಈ ವೇಳೆ 3 ಶತಕ ಹಾಗೂ 36 ಅರ್ಧಶತಕಗಳನ್ನು ಬಾರಿಸಿದ್ದಾರೆ.

ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ವಿರಾಟ್ ಕೊಹ್ಲಿ. ಕಿಂಗ್ ಕೊಹ್ಲಿ 110 ಟಿ20 ಇನಿಂಗ್ಸ್ಗಳಿಂದ ಒಟ್ಟು 4038 ರನ್ ಕಲೆಹಾಕಿದ್ದಾರೆ. ಈ ವೇಳೆ ಒಂದು ಶತಕ ಮತ್ತು 37 ಅರ್ಧಶತಕಗಳನ್ನು ಬಾರಿಸಿದ್ದಾರೆ.

ಹಾಗೆಯೇ ಈ ಪಟ್ಟಿಯಲ್ಲಿ ತೃತೀಯ ಸ್ಥಾನದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಇದ್ದಾರೆ. 144 ಟಿ20 ಇನಿಂಗ್ಸ್ ಆಡಿರುವ ಹಿಟ್ಮ್ಯಾನ್ 5 ಶತಕ ಹಾಗೂ 30 ಅರ್ಧಶತಕಗಳೊಂದಿಗೆ ಒಟ್ಟು 4026 ರನ್ ಕಲೆಹಾಕಿದ್ದಾರೆ.

ಅಂದರೆ ಇಲ್ಲಿ ಬಾಬರ್ ಆಝಂ ಹೆಸರಿನಲ್ಲಿರುವ ವಿಶ್ವ ದಾಖಲೆಯನ್ನು ಮುರಿಯಲು ವಿರಾಟ್ ಕೊಹ್ಲಿಗೆ ಬೇಕಿರುವುದು ಕೇವಲ 30 ರನ್ಗಳು ಮಾತ್ರ. ಹಾಗೆಯೇ ರೋಹಿತ್ ಶರ್ಮಾ 41 ರನ್ ಬಾರಿಸಿದರೂ ಈ ವಿಶ್ವ ದಾಖಲೆಯನ್ನು ಮುರಿಯಬಹುದು.

ಹೀಗಾಗಿ ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾಗೆ ಬಾಬರ್ ಆಝಂ ಅವರ ವಿಶ್ವ ದಾಖಲೆಯನ್ನು ಮುರಿಯುವುದನ್ನು ಎದುರು ನೋಡಬಹುದು. ಆದರೆ ಇವರಿಬ್ಬರಲ್ಲಿ ಯಾರು ಈ ವಿಶ್ವ ದಾಖಲೆಯ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲಿದ್ದಾರೆ ಎಂಬುದೇ ಈಗ ಕುತೂಹಲ.



















