India vs Pakistan: ಬಾಬರ್ ದಾಖಲೆ ಮುರಿಯುವವರು ಯಾರು? ವಿರಾಟ್ ಕೊಹ್ಲಿ ಅಥವಾ ರೋಹಿತ್ ಶರ್ಮಾ

|

Updated on: Jun 09, 2024 | 11:54 AM

India vs Pakistan: ಟಿ20 ವಿಶ್ವಕಪ್​ನ 19ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ನ್ಯೂಯಾರ್ಕ್​ನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಸೋತರೆ ಪಾಕಿಸ್ತಾನ್ ಟಿ20 ವಿಶ್ವಕಪ್​ನಿಂದ ಹೊರಬೀಳುವುದು ಬಹುತೇಕ ಖಚಿತವಾಗಲಿದೆ. ಏಕೆಂದರೆ ಕಳೆದ ಪಂದ್ಯದಲ್ಲಿ ಯುಎಸ್​ಎ ತಂಡ ಪಾಕ್ ವಿರುದ್ಧ ಗೆದ್ದು ಬೀಗಿತ್ತು. ಹೀಗಾಗಿ ಈ ಪಂದ್ಯವು ಪಾಕ್ ಪಾಲಿಗೆ ನಿರ್ಣಾಯಕ.

1 / 6
T20 World Cup 2024: ಟಿ20 ವಿಶ್ವಕಪ್​ನಲ್ಲಿ ಇಂದು ಭಾರತ ಮತ್ತು ಪಾಕಿಸ್ತಾನ್ (IND vs PAK) ತಂಡಗಳು ಕಣಕ್ಕಿಳಿಯಲಿದೆ. ನ್ಯೂಯಾರ್ಕ್​ನ ನಸ್ಸೌ ಕೌಂಟಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ವಿರಾಟ್ ಕೊಹ್ಲಿ (Virat Kohli) ಹಾಗೂ ರೋಹಿತ್ ಶರ್ಮಾ (Rohit Sharma) ವಿಶ್ವ ದಾಖಲೆಯನ್ನು ಬರೆಯಹುದು. ಅದು ಸಹ ಬಾಬರ್ ಆಝಂ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

2 / 6
ಅಂದರೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆ ಬಾಬರ್ ಆಝಂ ಹೆಸರಿನಲ್ಲಿದೆ. 113 ಟಿ20 ಇನಿಂಗ್ಸ್ ಆಡಿರುವ ಬಾಬರ್ ಇದುವರೆಗೆ 4067 ರನ್ ಕಲೆಹಾಕಿದ್ದಾರೆ. ಈ ವೇಳೆ 3 ಶತಕ ಹಾಗೂ 36 ಅರ್ಧಶತಕಗಳನ್ನು ಬಾರಿಸಿದ್ದಾರೆ.

3 / 6
ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ವಿರಾಟ್ ಕೊಹ್ಲಿ. ಕಿಂಗ್ ಕೊಹ್ಲಿ 110 ಟಿ20 ಇನಿಂಗ್ಸ್​ಗಳಿಂದ ಒಟ್ಟು 4038 ರನ್ ಕಲೆಹಾಕಿದ್ದಾರೆ. ಈ ವೇಳೆ ಒಂದು ಶತಕ ಮತ್ತು 37 ಅರ್ಧಶತಕಗಳನ್ನು ಬಾರಿಸಿದ್ದಾರೆ.

4 / 6
ಹಾಗೆಯೇ ಈ ಪಟ್ಟಿಯಲ್ಲಿ ತೃತೀಯ ಸ್ಥಾನದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಇದ್ದಾರೆ. 144 ಟಿ20 ಇನಿಂಗ್ಸ್ ಆಡಿರುವ ಹಿಟ್​ಮ್ಯಾನ್ 5 ಶತಕ ಹಾಗೂ 30 ಅರ್ಧಶತಕಗಳೊಂದಿಗೆ ಒಟ್ಟು 4026 ರನ್ ಕಲೆಹಾಕಿದ್ದಾರೆ.

5 / 6
ಅಂದರೆ ಇಲ್ಲಿ ಬಾಬರ್ ಆಝಂ ಹೆಸರಿನಲ್ಲಿರುವ ವಿಶ್ವ ದಾಖಲೆಯನ್ನು ಮುರಿಯಲು ವಿರಾಟ್ ಕೊಹ್ಲಿಗೆ ಬೇಕಿರುವುದು ಕೇವಲ 30 ರನ್​ಗಳು ಮಾತ್ರ. ಹಾಗೆಯೇ ರೋಹಿತ್ ಶರ್ಮಾ 41 ರನ್ ಬಾರಿಸಿದರೂ ಈ ವಿಶ್ವ ದಾಖಲೆಯನ್ನು ಮುರಿಯಬಹುದು.

6 / 6
ಹೀಗಾಗಿ ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾಗೆ ಬಾಬರ್ ಆಝಂ ಅವರ ವಿಶ್ವ ದಾಖಲೆಯನ್ನು ಮುರಿಯುವುದನ್ನು ಎದುರು ನೋಡಬಹುದು. ಆದರೆ ಇವರಿಬ್ಬರಲ್ಲಿ ಯಾರು ಈ ವಿಶ್ವ ದಾಖಲೆಯ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲಿದ್ದಾರೆ ಎಂಬುದೇ ಈಗ ಕುತೂಹಲ.