- Kannada News Photo gallery Cricket photos India vs South Africa 1st T20I Arshdeep Singh Deepak Chahar swings to lead South Africa to a big win for India
IND vs SA: ಭಾರತ- ದಕ್ಷಿಣ ಆಫ್ರಿಕಾ ಮೊದಲ ಟಿ20 ಪಂದ್ಯದ ಕೆಲ ರೋಚಕ ಕ್ಷಣಗಳು
ತಿರುವನಂತಪುರಂನ ಗ್ರೀನ್ಫೀಲ್ಡ್ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ (India vs South Africa) ಭರ್ಜರಿ ಗೆಲುವು ಸಾಧಿಸಿದೆ.
Updated on:Sep 29, 2022 | 11:34 AM

ತಿರುವನಂತಪುರಂನ ಗ್ರೀನ್ಫೀಲ್ಡ್ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ (India vs South Africa) ಭರ್ಜರಿ ಗೆಲುವು ಸಾಧಿಸಿದೆ.

ಅರ್ಶ್ದೀಪ್ ಸಿಂಗ್, ದೀಪಕ್ ಚಹರ್ ಹಾಗೂ ಹರ್ಷಲ್ ಪಟೇಲ್ ಮಾರಕ ಬೌಲಿಂಗ್ ಹಾಗೂ ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್ ಆಕರ್ಷಕ ಅರ್ಧಶತಕದ ನೆರವಿನಿಂದ ಟೀಮ್ ಇಂಡಿಯಾ 8 ವಿಕೆಟ್ಗಳಿಂದ ಗೆದ್ದು ಬೀಗಿದೆ. ಈ ಮೂಲಕ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ಗೆ ಇಳಿದ ದಕ್ಷಿಣ ಆಫ್ರಿಕಾ ಭಾರತದ ಬೌಲಿಂಗ್ ದಾಳಿಗೆ ಅಕ್ಷರಶಃ ನೆಲಕಚ್ಚಿ ಹೋಯಿತು. ಕೇವಲ 9 ರನ್ಗೆ 5 ವಿಕೆಟ್ ಕಳೆದುಕೊಂಡು ಭಾರೀ ಸಂಕಷ್ಟಕ್ಕೆ ಸಿಲುಕಿತ್ತು.

ಆಫ್ರಿಕಾ 20 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 106 ರನ್ ಗಳಿಸಿತು. ಭಾರತ ಅರ್ಶ್ದೀಪ್ ಸಿಂಗ್ 3 ವಿಕೆಟ್ ಕಿತ್ತರೆ, ದೀಪಕ್ ಚಹರ್, ಹರ್ಷಲ್ ಪಟೇಲ್ ಹಾಗೂ ಅಕ್ಷರ್ ಪಟೇಲ್ 1 ವಿಕೆಟ್ ಪಡೆದರು.

ಸುಲಭ ಟಾರ್ಗೆಟ್ ಬೆನ್ನಟ್ಟಿದ ಭಾರತ ನಿಧಾನಗತಿಯ ಆರಂಭ ಪಡೆದುಕೊಳ್ಳುವ ಜೊತೆ ಮುಖ್ಯ ಎರಡು ವಿಕೆಟ್ಗಳನ್ನು ಕೂಡ ಕಳೆದುಕೊಂಡಿತು. ನಾಯಕ ರೋಹಿತ್ ಶರ್ಮಾ ಖಾತೆ ತೆರೆಯುವ ಮುನ್ನವೇ ಔಟಾದರು. ವಿರಾಟ್ ಕೊಹ್ಲಿ ಕೂಡ 3 ರನ್ಗೆ ಸುಸ್ತಾದರು.

ಬಳಿಕ ಕ್ರೀಸ್ ಹಂಚಿಕೊಂಡ ಕೆ ಎಲ್ ರಾಹುಲ್ ಹಾಗೂ ಸೂರ್ಯಕುಮಾರ್ ಯಾದವ್ ಹರಿಣಗಳ ಮೇಲೆ ಸವಾರಿ ಮಾಡಿದರು. 4 ಸಿಕ್ಸರ್, 2 ಬೌಂಡರಿ ಬಾರಿಸಿದ ರಾಹುಲ್ ಔಟಾಗದೇ 51 ರನ್ ಗಳಿಸಿದರು. ಭರ್ಜರಿ ಫಾರ್ಮ್ನಲ್ಲಿರುವ ಸೂರ್ಯಕುಮಾರ್ ಯಾದವ್ 3 ಸಿಕ್ಸರ್, 5 ಬೌಂಡರಿ ಸಮೇತ 50 ರನ್ ಬಾರಿಸಿದರು. ಇವರ ಬ್ಯಾಟಿಂಗ್ ನೆರವಿನಿಂದ ಭಾರತ 16.4 ಓವರ್ನಲ್ಲಿ 2 ವಿಕೆಟ್ ನಷ್ಟಕ್ಕೆ 110 ರನ್ ಗಳಿಸಿ ಜಯ ಸಾಧಿಸಿತು.

ಹರ್ಷಲ್ ಪಟೇಲ್ ಕೂಡ ದಕ್ಷಿಣ ಆಫ್ರಿಕಾದ 2 ಮುಖ್ಯ ವಿಕೆಟ್ ಕಿತ್ತು ಮಿಂಚಿದರು.
Published On - 11:34 am, Thu, 29 September 22




