ಅತ್ಯಧಿಕ ರನ್, ಹೀನಾಯ ಸೋಲು: ಸೌತ್ ಆಫ್ರಿಕಾದಲ್ಲಿ ಟೀಮ್ ಇಂಡಿಯಾ ದರ್ಬಾರ್

India vs South africa: ಸೌತ್ ಆಫ್ರಿಕಾ ವಿರುದ್ಧದ ನಾಲ್ಕನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 135 ರನ್​ಗಳ ಅಮೋಘ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ 4 ಪಂದ್ಯಗಳ ಟಿ20 ಸರಣಿಯನ್ನು ಭಾರತ ತಂಡ 3-1 ಅಂತರದಿಂದ ಗೆದ್ದುಕೊಂಡಿದೆ.

ಝಾಹಿರ್ ಯೂಸುಫ್
|

Updated on: Nov 16, 2024 | 7:23 AM

ಟಿ20 ಕ್ರಿಕೆಟ್​ನ ಬಲಿಷ್ಠ ಪಡೆ ಸೌತ್ ಆಫ್ರಿಕಾ ತಂಡವನ್ನು ಟೀಮ್ ಇಂಡಿಯಾ ಸೌತ್ ಆಫ್ರಿಕಾದಲ್ಲೇ ಮಕಾಡೆ ಮಲಗಿಸಿದೆ. ಅದು ಕೂಡ ಅತ್ಯಧಿಕ ರನ್ ಕಲೆಹಾಕಿ, ಅತ್ಯಂತ ಹೀನಾಯವಾಗಿ ಸೋಲಿಸುವ ಮೂಲಕ ಎಂಬುದು ವಿಶೇಷ.

1 / 8
ಜೋಹಾನ್ಸ್​ಬರ್ಗ್​ನ ವಾಂಡರರ್ಸ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ಬ್ಯಾಟ್ ಬೀಸಿದ ಸಂಜು ಸ್ಯಾಮ್ಸನ್ ಹಾಗೂ ಅಭಿಷೇಕ್ ಶರ್ಮಾ ಟೀಮ್ ಇಂಡಿಯಾಗೆ ಸ್ಪೋಟಕ ಆರಂಭ ಒದಗಿಸಿದ್ದರು.

2 / 8
ಮೊದಲ ವಿಕೆಟ್‌ಗೆ 73 ರನ್ ಗಳ ಜೊತೆಯಾಟವಾಡಿ ಅಭಿಷೇಕ್ ಶರ್ಮಾ (36) ಔಟಾದರು. ಆ ಬಳಿಕ ಶುರುವಾಗಿದ್ದೇ ಸ್ಯಾಮ್ಸನ್ - ತಿಲಕ್ ವರ್ಮಾ ಅಬ್ಬರ. ಈ ಜೋಡಿಯು 2ನೇ ವಿಕೆಟ್‌ಗೆ 210 ರನ್​ಗಳ ಜೊತೆಯಾಟವಾಡಿದರು.

3 / 8
ಇದರ ನಡುವೆ ಸಂಜು ಸ್ಯಾಮ್ಸನ್ 56 ಎಸೆತಗಳಲ್ಲಿ ಅಜೇಯ 106 ರನ್ ಬಾರಿಸಿದರೆ, ತಿಲಕ್ ವರ್ಮಾ 47 ಎಸೆತಗಳಲ್ಲಿ ಅಜೇಯ 120 ರನ್ ಸಿಡಿಸಿದರು. ಈ ಮೂಲಕ ಟೀಮ್ ಇಂಡಿಯಾ 20 ಓವರ್‌ಗಳಲ್ಲಿ 1 ವಿಕೆಟ್ ನಷ್ಟದೊಂದಿಗೆ 283 ರನ್ ಕಲೆಹಾಕಿತು.

4 / 8
ಈ 283 ರನ್​ಗಳೊಂದಿಗೆ ಸೌತ್ ಆಫ್ರಿಕಾದಲ್ಲಿ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ಟೀಮ್ ಇಂಡಿಯಾ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಶ್ರೀಲಂಕಾ ತಂಡದ ಹೆಸರಿನಲ್ಲಿತ್ತು. 2007ರ ಟಿ20 ವಿಶ್ವಕಪ್​ನಲ್ಲಿ ಜೋಹಾನ್ಸ್​ಬರ್ಗ್​ನಲ್ಲಿ ಶ್ರೀಲಂಕಾ ತಂಡವು ಕೀನ್ಯಾ ವಿರುದ್ಧ 260 ರನ್ ಬಾರಿಸಿ ಈ ದಾಖಲೆ ನಿರ್ಮಿಸಿದ್ದರು. ಇದೀಗ 283 ರನ್ ಸಿಡಿಸಿ ಟೀಮ್ ಇಂಡಿಯಾ ಸೌತ್ ಆಫ್ರಿಕಾದಲ್ಲಿ ಹೊಸ ಇತಿಹಾಸ ನಿರ್ಮಿಸಿದೆ.

5 / 8
ಇನ್ನು ಟೀಮ್ ಇಂಡಿಯಾ ನೀಡಿದ 283 ರನ್​ಗಳ ಕಠಿಣ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡವು 18.2 ಓವರ್​ಗಳಲ್ಲಿ 148 ರನ್​ಗಳಿಗೆ ಆಲೌಟ್ ಆದರು. ಈ ಮೂಲಕ ಭಾರತ ತಂಡವು 135 ರನ್​ಗಳ ಅಮೋಘ ಗೆಲುವು ದಾಖಲಿಸಿದೆ.

6 / 8
ವಿಶೇಷ ಎಂದರೆ ಇದು ಸೌತ್ ಆಫ್ರಿಕಾದಲ್ಲಿ ಸೌತ್ ಆಫ್ರಿಕಾ ತಂಡದ ಅತ್ಯಂತ ಹೀನಾಯ ಸೋಲು. ಇದಕ್ಕೂ ಮುನ್ನ 2023 ರಲ್ಲಿ ಡರ್ಬನ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ 111 ರನ್​ಗಳಿಗೆ ಪರಾಜಯಗೊಂಡಿದ್ದು ಅತ್ಯಂತ ಹೀನಾಯ ಸೋಲಾಗಿತ್ತು. ಇದೀಗ ಭಾರತದ ವಿರುದ್ಧ 135 ರನ್​ಗಳಿಂದ ಸೋಲುವ ಮೂಲಕ ಭಾರೀ ಮುಖಭಂಗಕ್ಕೆ ಒಳಗಾಗಿದೆ.

7 / 8
ಅಂದರೆ ಜೋಹಾರ್ನ್ಸ್​ಬರ್ಗ್​ನಲ್ಲಿ ನಡೆದ ನಾಲ್ಕನೇ ಟಿ20 ಪಂದ್ಯದ ಮೂಲಕ ಸೌತ್ ಆಫ್ರಿಕಾ ವಿರುದ್ಧ ಅತ್ಯಧಿಕ ರನ್ ಕಲೆಹಾಕಿದ ತಂಡವೆಂಬ ದಾಖಲೆಯನ್ನು ಟೀಮ್ ಇಂಡಿಯಾ ಬರೆದಿದೆ. ಅದರ ಜೊತೆಗೆ ತವರಿನಲ್ಲಿ ಸೌತ್ ಆಫ್ರಿಕಾ ತಂಡವನ್ನು ಅತ್ಯಂತ ಹೀನಾಯವಾಗಿ ಸೋಲಿಸಿದ ಹಿರಿಮೆ ಕೂಡ ಭಾರತ ತಂಡದ ಪಾಲಾಗಿದೆ.

8 / 8
Follow us
ಒಂದೇ ಬೈಕ್​ನಲ್ಲಿ 8 ಜನ, ಜೊತೆಗೊಂದು ಹಾಸಿಗೆ; ಪೊಲೀಸರೇ ಕಂಗಾಲು!

ಕಾಡುಹಂದಿಗಳ ಕಾಟದಿಂದ ಪಾರಾಗಲು ಬೀಸಿದ್ದ ಬಲೆಗೆ ಸಿಕ್ಕಿಬಿದ್ದ ಹೆಬ್ಬಾವು

ಮೋಕ್ಷಿತಾ ಜೊತೆ ಮನಸ್ಸಿನ ಮಾತು ವಿನಿಮಯ ಮಾಡಿಕೊಂಡ ತ್ರಿವಿಕ್ರಮ್

ಕುರುಬ ಸಮುದಾಯ ಪ್ರಾಬಲ್ಯದ ಕ್ಷೇತ್ರಗಳಲ್ಲಿ ಸಿದ್ದರಾಮಯ್ಯ ಮತಯಾಚನೆ

ಶೃಂಗಾರದ ಹೊಂಗೆ ಮರ: ಭವ್ಯಾ, ತ್ರಿವಿಕ್ರಮ್ ಡ್ಯಾನ್ಸ್ ನೋಡಿ ನಾಚಿದ ಮನೆ ಮಂದಿ

ಬ್ರ್ಯಾಂಡ್ ಬೆಂಗಳೂರು ಅಂದರೇನು ಅಂತ ಜನಕ್ಕೆ ಈಗ ಅರ್ಥವಾಗುತ್ತಿದೆ!

ಇಂದಿನಿಂದ ಶಬರಿಮಲೆ ಮಂಡಲಪೂಜೆ ಪ್ರಾರಂಭ; ದರ್ಶನಕ್ಕೆ ಜನಸಾಗರ

ಮಾಜಿ ಪ್ರಧಾನಿ ಒಬ್ಬ ಡಿಸಿಎಂ ಬಗ್ಗೆ ರೌಡಿ ಅಂತೆಲ್ಲ ಮಾತಾಡೋದು ಸರಿಯಲ್ಲ:ಶಾಸಕ

ದೇವರ ವಿಗ್ರಹ ವಿರೂಪಗೊಳಿಸಿ ವಿಕೃತಿ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಒಬ್ಬ ಬೌಲರ್ ಮುಂದೆ ಶರಣಾದ ಇಡೀ ಕೇರಳ ತಂಡ
ಒಬ್ಬ ಬೌಲರ್ ಮುಂದೆ ಶರಣಾದ ಇಡೀ ಕೇರಳ ತಂಡ