India vs south africa: ಟೀಮ್ ಇಂಡಿಯಾದಲ್ಲಿ ದ್ರಾವಿಡ್ ಇರುವುದೇ ದಕ್ಷಿಣ ಆಫ್ರಿಕಾದ ದೊಡ್ಡ ಚಿಂತೆ

India vs south africa: ಈ ಬಾರಿ ಟೀಮ್ ಇಂಡಿಯಾ ಹೊಸ ಇತಿಹಾಸ ಬರೆಯಲಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ. ಅದರಲ್ಲೂ 15 ವರ್ಷಗಳ ಹಿಂದೆ ರಾಹುಲ್ ದ್ರಾವಿಡ್ ಮೊಟ್ಟ ಮೊದಲ ಗೆಲುವು ತಂದುಕೊಟ್ಟ ಸೆಂಚುರಿಯನ್ ಮೈದಾನದ ಮೂಲಕವೇ ಈ ಬಾರಿ ಟೀಮ್ ಇಂಡಿಯಾ ಟೆಸ್ಟ್ ಸರಣಿಯನ್ನು ಆರಂಭಿಸುತ್ತಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Dec 20, 2021 | 6:31 PM

ಭಾರತ-ದಕ್ಷಿಣ ಆಫ್ರಿಕಾ ನಡುವಣ ಟೆಸ್ಟ್ ಸರಣಿ ಡಿಸೆಂಬರ್ 26 ರಿಂದ ಶುರುವಾಗಲಿದೆ. ಮೂರು ಪಂದ್ಯಗಳ ಈ ಸರಣಿಯನ್ನು ಟೀಮ್ ಇಂಡಿಯಾ ಗೆದ್ದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ. ಏಕೆಂದರೆ ಭಾರತ ತಂಡವು ಇದುವರೆಗೆ ದಕ್ಷಿಣ ಆಫ್ರಿಕಾದಲ್ಲಿ ಟೆಸ್ಟ್ ಸರಣಿ ಗೆದ್ದಿಲ್ಲ.

1 / 6
ಹರಿಣರ ನಾಡಲ್ಲಿ ಟೀಮ್ ಇಂಡಿಯಾ ಈವರೆಗೆ 20 ಟೆಸ್ಟ್ ಪಂದ್ಯಗಳನ್ನು ಆಡಿದೆ. ಅದರಲ್ಲಿ ಗೆದ್ದಿರುವುದು ಕೇವಲ ಮೂರು ಪಂದ್ಯಗಳಲ್ಲಿ ಮಾತ್ರ. ಇನ್ನು ಕಳೆದ ಬಾರಿ 2018 ರಲ್ಲಿ ಭಾರತ ತಂಡವು ದಕ್ಷಿಣ ಆಫ್ರಿಕಾ ವಿರುದ್ದ 1-2 ಅಂತರದಿಂದ ಸರಣಿ ಸೋತಿತ್ತು. ಇದೀಗ ಮತ್ತೊಮ್ಮೆ ರಾಹುಲ್ ದ್ರಾವಿಡ್ ನೇತೃತ್ವದಲ್ಲಿ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾದಲ್ಲಿ ಸರಣಿ ಆಡಲು ಸಜ್ಜಾಗಿದೆ.

2 / 6
ಆದರೆ ಈ ಬಾರಿ ರಾಹುಲ್ ದ್ರಾವಿಡ್ ಅವರ ಮುಂದಾಳತ್ವದಲ್ಲಿ ಟೀಮ್ ಇಂಡಿಯಾ ಟೆಸ್ಟ್ ಆಡುತ್ತಿರುವುದು ದಕ್ಷಿಣ ಆಫ್ರಿಕಾ ತಂಡದ ಚಿಂತೆಯನ್ನು ಹೆಚ್ಚಿಸಿದೆ. ಏಕೆಂದರೆ ಟೆಸ್ಟ್​ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ವಿರುದ್ದ ಪಾರುಪತ್ಯ ಮೆರೆದಿದ್ದ ದಕ್ಷಿಣ ಆಫ್ರಿಕಾಗೆ ಮೊದಲ ಸೋಲು ತೋರಿಸಿದ್ದೇ ರಾಹುಲ್ ದ್ರಾವಿಡ್.

3 / 6
ಹೌದು, ಡಿಸೆಂಬರ್ 2006 ರಲ್ಲಿ ನಡೆದ ಸೆಂಚುರಿಯನ್​ನಲ್ಲಿನ ಟೆಸ್ಟ್ ಪಂದ್ಯದಲ್ಲಿ ಭಾರತವು ದಕ್ಷಿಣ ಆಫ್ರಿಕಾವನ್ನು 123 ರನ್‌ಗಳಿಂದ ಸೋಲಿಸಿತು. ಇದು ದಕ್ಷಿಣ ಆಫ್ರಿಕಾದಲ್ಲಿ ಭಾರತ ಕ್ರಿಕೆಟ್ ತಂಡದ ಮೊದಲ ಟೆಸ್ಟ್ ಗೆಲುವು ಎಂಬುದು ವಿಶೇಷ. ಆ ಸಮಯದಲ್ಲಿ ಭಾರತ ಟೆಸ್ಟ್ ತಂಡದ ನಾಯಕ ರಾಹುಲ್ ದ್ರಾವಿಡ್. ಇದೀಗ ಅವರೇ ಟೀಮ್ ಇಂಡಿಯಾದ ಕೋಚ್ ಆಗಿ ಕಾಣಿಸಿಕೊಂಡಿದ್ದಾರೆ. ಹೀಗಾಗಿಯೇ ಈ ಹಿಂದಿಗಿಂತ ಈ ಬಾರಿ ಭಾರತ ತಂಡದ ಬಲಿಷ್ಠವಾಗಿ ಕಾಣಿಸಿಕೊಳ್ಳುತ್ತಿದೆ.

4 / 6
ಏಕೆಂದರೆ 15 ವರ್ಷಗಳ ಹಿಂದೆ ರಣತಂತ್ರ ಹೆಣೆದಿದ್ದ ಅದೇ ರಾಹುಲ್ ದ್ರಾವಿಡ್ ಇದೀಗ ಇಡೀ ತಂಡದ ಉಸ್ತುವಾರಿಯನ್ನು ವಹಿಸಿಕೊಂಡಿದ್ದಾರೆ. ಅಲ್ಲದೆ ಈ ಬಾರಿ ಗೆದ್ದೇ ಗೆಲ್ಲುತ್ತೇವೆ ಎಂಬ ವಿಶ್ವಾಸವನ್ನೂ ಕೂಡ ಮೂಡಿಸಿದ್ದಾರೆ. ಏಕೆಂದರೆ ಟೀಮ್ ಇಂಡಿಯಾ ಅಂಡರ್-19 ಮತ್ತು ಭಾರತ-ಎ ತಂಡಗಳಲ್ಲಿ ರಾಹುಲ್ ದ್ರಾವಿಡ್ ಅವರ ಗರಡಿಯಲ್ಲಿ ಪಳಗಿದ ಆಟಗಾರರೇ ಈಗ ಟೀಮ್ ಇಂಡಿಯಾದಲ್ಲಿದೆ. ಹೀಗಾಗಿ ಆಟಗಾರರು ಹಾಗೂ ಕೋಚ್ ನಡುವೆ ಈ ಹಿಂದಿಗಿಂತಲೂ ಉತ್ತಮ ಹೊಂದಾಣಿಕೆ ಕಂಡು ಬರುತ್ತಿದೆ.

5 / 6
ಹೀಗಾಗಿ ಈ ಬಾರಿ ಟೀಮ್ ಇಂಡಿಯಾ ಹೊಸ ಇತಿಹಾಸ ಬರೆಯಲಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ. ಅದರಲ್ಲೂ 15 ವರ್ಷಗಳ ಹಿಂದೆ ರಾಹುಲ್ ದ್ರಾವಿಡ್ ಮೊಟ್ಟ ಮೊದಲ ಗೆಲುವು ತಂದುಕೊಟ್ಟ ಸೆಂಚುರಿಯನ್ ಮೈದಾನದ ಮೂಲಕವೇ ಈ ಬಾರಿ ಟೀಮ್ ಇಂಡಿಯಾ ಟೆಸ್ಟ್ ಸರಣಿಯನ್ನು ಆರಂಭಿಸುತ್ತಿದೆ. ಹೀಗಾಗಿ ಮೊದಲ ಪಂದ್ಯವೇ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

6 / 6
Follow us
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ

ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ

ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ

ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್

ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು

ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ

ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ

ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?

ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್