IND vs SA: ಅಭಿಷೇಕ್ ಮತ್ತೆ ಫೇಲ್; ಟೀಂ ಇಂಡಿಯಾದಿಂದ ಶೀಘ್ರದಲ್ಲೇ ಗೇಟ್​ಪಾಸ್

Abhishek Sharma: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ಸರಣಿಯಲ್ಲಿ ಅಭಿಷೇಕ್ ಶರ್ಮಾ ಅವರ ಬ್ಯಾಟಿಂಗ್ ಪ್ರದರ್ಶನ ನಿರಾಶಾದಾಯಕವಾಗಿದೆ. ಎರಡೂ ಪಂದ್ಯಗಳಲ್ಲಿ ಅವರು ಕಡಿಮೆ ರನ್ ಗಳಿಸಿದ್ದು, ತಂಡದ ಆರಂಭಿಕ ಬ್ಯಾಟ್ಸ್‌ಮನ್ ಆಗಿ ಅವರ ಸ್ಥಾನದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.ಜಿಂಬಾಬ್ವೆ ವಿರುದ್ಧ ಶತಕ ಬಾರಿಸಿದ್ದರೂ, ನಂತರದ ಪಂದ್ಯಗಳಲ್ಲಿ ನಿರಂತರವಾಗಿ ವಿಫಲರಾಗಿದ್ದಾರೆ. ಇದರಿಂದಾಗಿ ಅವರನ್ನು ತಂಡದಿಂದ ಕೈಬಿಡುವ ಸಾಧ್ಯತೆ ಹೆಚ್ಚಾಗಿದೆ.

ಪೃಥ್ವಿಶಂಕರ
|

Updated on: Nov 10, 2024 | 8:52 PM

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಾಲ್ಕು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯ ಇಂದು ನಡೆಯುತ್ತಿದೆ. ಈ ಪಂದ್ಯದಲ್ಲಿ ಭಾರತ ತಂಡಕ್ಕೆ ಉತ್ತಮ ಆರಂಭ ಸಿಕ್ಕಿಲ್ಲ. ಪವರ್​ ಪ್ಲೇನಲ್ಲೇ ತಂಡ ಪ್ರಮುಖ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಅದರಲ್ಲೂ ತಂಡದ ಆರಂಭಿಕರಿಬ್ಬರೂ ಬೇಗನೇ ಪೆವಿಲಿಯನ್ ಸೇರಿಕೊಂಡರು. ಈ ವೇಳೆ ಸಂಜು ಸ್ಯಾಮ್ಸನ್ ಖಾತೆ ತೆರೆಯದೆ ಔಟಾದರೆ, ಅಭಿಷೇಕ್ ಶರ್ಮಾ ಮತ್ತೊಮ್ಮೆ ವಿಫಲರಾದರು.

1 / 5
ಗೇಕೆಬರ್ಹಾದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಅಭಿಷೇಕ್ ಅವರ ಬ್ಯಾಟ್ ಮತ್ತೊಮ್ಮೆ ಮೌನಕ್ಕೆ ಶರಣಾಗಿದೆ. ವಾಸ್ತವವಾಗಿ ಅಭಿಷೇಕ್ ಶರ್ಮಾ ಕಳೆದ ಕೆಲವು ಪಂದ್ಯಗಳಿಂದ ಯಾವುದೇ ಉತ್ತಮ ಇನ್ನಿಂಗ್ಸ್ ಆಡಿಲ್ಲ. ಹೀಗಾಗಿ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಅಭಿಷೇಕ್ ಶರ್ಮಾ ಅವರಿಂದ ಉತ್ತಮ ಇನ್ನಿಂಗ್ಸ್ ನಿರೀಕ್ಷಿಸಲಾಗಿತ್ತು. ಆದರೆ ಇದೀಗ ಆಡಿರುವ ಎರಡೂ ಪಂದ್ಯಗಳಲ್ಲಿ ಅಭಿಷೇಕ್ ರನ್ ಗಳಿಸುವಲ್ಲಿ ವಿಫಲರಾಗಿದ್ದಾರೆ.

2 / 5
ಮೊದಲ ಪಂದ್ಯದಲ್ಲಿ ಬೇಗನೇ ಪೆವಿಲಿಯನ್‌ ಸೇರಿಕೊಂಡಿದ್ದ ಅಭಿಷೇಕ್, ಇದೀಗ ಎರಡನೇ ಪಂದ್ಯದಲ್ಲೂ ನಾಲ್ಕು ರನ್ ಗಳಿಸಿ ಔಟಾದರು. ಇನಿಂಗ್ಸ್‌ನ ಎರಡನೇ ಓವರ್‌ನಲ್ಲಿ ಜೆರಾಲ್ಡ್ ಕೋಟ್ಜಿ ಎಸೆತದಲ್ಲಿ ಮಾರ್ಕೊ ಯಾನ್ಸೆನ್​ಗೆ ಕ್ಯಾಚಿತ್ತು ಔಟಾದರು. ಇದಕ್ಕೂ ಮುನ್ನ ಡರ್ಬನ್‌ನಲ್ಲಿ ನಡೆದ ಪಂದ್ಯದಲ್ಲಿ ಅವರು ಏಳು ರನ್ ಗಳಿಸಲಷ್ಟೇ ಶಕ್ತರಾಗಿದ್ದರು. ಇದೀಗ ಅಭಿಷೇಕ್​ರನ್ನು ತಂಡದಿಂದ ಕೈಬಿಡಬೇಕು ಎಂಬ ಕೂಗು ಜೋರಾಗಿದೆ.

3 / 5
ಈ ವರ್ಷದ ಜುಲೈನಲ್ಲಿ ಜಿಂಬಾಬ್ವೆ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಅಭಿಷೇಕ್ ಅವರು ಶತಕದ ನಂತರ ಯಾವುದೇ ದೊಡ್ಡ ಇನ್ನಿಂಗ್ಸ್ ಆಡಲಿಲ್ಲ. ಮೊದಲ ಪಂದ್ಯದಲ್ಲಿ ಶೂನ್ಯಕ್ಕೆ ಔಟಾದ ಬಳಿಕ ಎರಡನೇ ಟಿ20ಯಲ್ಲಿ ಬಲಿಷ್ಠ ಬ್ಯಾಟಿಂಗ್ ಪ್ರದರ್ಶಿಸಿ 47 ಎಸೆತಗಳಲ್ಲಿ ಏಳು ಬೌಂಡರಿ ಹಾಗೂ ಎಂಟು ಸಿಕ್ಸರ್‌ಗಳ ನೆರವಿನಿಂದ 100 ರನ್ ಗಳಿಸಿದ್ದರು. ಭಾರತ ಪರ ಇದು ಅವರ ಮೊದಲ ಶತಕವಾಗಿತ್ತು. ಈ ಇನ್ನಿಂಗ್ಸ್‌ ನಂತರ, ಅವರ ಬ್ಯಾಟ್‌ನಿಂದ ರನ್ ಗಳಿಸುವುದನ್ನು ಬಿಟ್ಟು, ಅವರು ವಿಕೆಟ್‌ನಲ್ಲಿ ಉಳಿಯಲು ಸಹ ಕಷ್ಟಪಡಬೇಕಾಗಿದೆ.

4 / 5
ಇತ್ತೀಚೆಗೆ ನಡೆದ ಬಾಂಗ್ಲಾದೇಶ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಲ್ಲಿಯೂ ಸಹ ಅಭಿಷೇಕ್ ರನ್ ಬರ ಎದುರಿಸಿದ್ದರು . ಈ ಪ್ರವಾಸದಲ್ಲಿ ಅವರು ಕೇವಲ 35 ರನ್ ಗಳಿಸಲಷ್ಟೇ ಶಕ್ತರಾಗಿದ್ದರು. ಆದಾಗ್ಯೂ ಅವರನ್ನು ಆರಂಭಿಕರಾಗಿ ಕಣಕ್ಕಿಳಿಸಲಾಗುತ್ತಿದೆ. ಆದರೆ ಆಫ್ರಿಕಾ ವಿರುದ್ಧ ಆಡಿರುವ ಎರಡು ಪಂದ್ಯಗಳಲ್ಲಿ ರನ್ ಗಳಿಸಲು ವಿಫಲರಾಗಿರುವ ಅಭಿಷೇಕ್​ರನ್ನು ಮುಂದಿನ ಪಂದ್ಯದಿಂದ ಕೈಬಿಡುವ ಸಾಧ್ಯತೆಗಳು ಹೆಚ್ಚಿವೆ.

5 / 5
Follow us
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು

ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್

ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ

ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್

'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್

ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ

ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ

ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್

ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ