IND vs SA: 7 ಬೌಂಡರಿ, 10 ಸಿಕ್ಸರ್..! ಸ್ಫೋಟಕ ಶತಕ ಸಿಡಿಸಿ ದಾಖಲೆಗಳ ಸರಮಾಲೆ ಕಟ್ಟಿದ ಸಂಜು

Sanju Samson fastest T20 century: ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಅವರ ಅದ್ಭುತ ಶತಕದಿಂದ ಭಾರತ 203 ರನ್‌ಗಳ ಬೃಹತ್ ಮೊತ್ತವನ್ನು ಗಳಿಸಿತು. ಕೇವಲ 47 ಎಸೆತಗಳಲ್ಲಿ ಶತಕ ಪೂರ್ಣಗೊಳಿಸಿದ ಸಂಜು, ಟಿ20ಯಲ್ಲಿ ಸತತ ಎರಡನೇ ಶತಕ ಸಿಡಿಸಿದ ಮೊದಲ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ. ಅವರು ಹಲವು ದಾಖಲೆಗಳನ್ನು ನಿರ್ಮಿಸಿ, ವಿಕೆಟ್ ಕೀಪರ್ ಆಗಿ 50+ ರನ್ ಗಳಿಸಿದ ಭಾರತೀಯ ಆಟಗಾರರ ಪಟ್ಟಿಯಲ್ಲಿ ಮುಂಚೂಣಿಯಲ್ಲಿದ್ದಾರೆ.

ಪೃಥ್ವಿಶಂಕರ
|

Updated on:Nov 08, 2024 | 10:44 PM

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 4 ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯವು ಡರ್ಬನ್‌ನ ಕಿಂಗ್ಸ್‌ಮೀಡ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 203 ರನ್​ಗಳ ಬೃಹತ್ ಟಾರ್ಗೆಟ್ ನೀಡಿದೆ. ತಂಡ ಇಷ್ಟು ರನ್ ಕಲೆಹಾಕುವಲ್ಲಿ ಪ್ರಮುಖ ಪಾತ್ರವಹಿಸಿದ ಆರಂಭಿಕ ಬ್ಯಾಟ್ಸ್​ಮನ್ ಸಂಜು ಸ್ಯಾಮ್ಸನ್ ಸಿಡಿಲಬ್ಬರದ ಶತಕ ಸಿಡಿಸಿ ಮಿಂಚಿದ್ದಾರೆ.

1 / 9
ಭಾರತ ಟಿ20 ತಂಡದಲ್ಲಿ ಆರಂಭಿಕನಾಗಿ ಕಣಕ್ಕಿಳಿಯುತ್ತಿರುವ ಸಂಜು ಸ್ಯಾಮ್ಸನ್‌, ಮ್ಯಾನೇಜ್‌ಮೆಂಟ್‌ನ ನಂಬಿಕೆಗೆ ತಕ್ಕಂತೆ ಆಡುತ್ತಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಈ ಪಂದ್ಯದಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ ಸ್ಫೋಟಕ ಶತಕ  ಸಿಡಿಸಿದ ಸಂಜು ಸ್ಯಾಮ್ಸನ್‌ ಹಲವು ದಾಖಲೆಗಳನ್ನು ನಿರ್ಮಿಸಿದಲ್ಲದೆ, ಹಲವರ ದಾಖಲೆಯನ್ನು ಪುಡಿಗಟ್ಟಿದ್ದಾರೆ.

2 / 9
ಈ ಪಂದ್ಯದಲ್ಲಿ ಕೇವಲ 27 ಎಸೆತಗಳಲ್ಲಿ 50 ರನ್ ಪೂರೈಸಿದ ಸಂಜು, ಆ ನಂತರ ಕೇವಲ 47 ಎಸೆತಗಳಲ್ಲಿ ಶತಕ ಪೂರೈಸಿದರು. ಅಂತಿಮವಾಗಿ ಅವರು 50 ಎಸೆತಗಳಲ್ಲಿ ಒಟ್ಟು 107 ರನ್ ಗಳಿಸಿ ಔಟಾದರು. ಈ ವೇಳೆ ಸಂಜು 7 ಬೌಂಡರಿ ಹಾಗೂ 10 ಸಿಕ್ಸರ್ ಸಹ ಬಾರಿಸಿದರು. ಇದು ಸಂಜು ಸ್ಯಾಮ್ಸನ್ ಅವರ ಟಿ20 ವೃತ್ತಿಜೀವನದ ಸತತ ಎರಡನೇ ಶತಕವಾಗಿರುವುದು ಇಲ್ಲಿ ವಿಶೇಷ.

3 / 9
ಈ ಶತಕದೊಂದಿಗೆ ತಮ್ಮ ಟಿ20 ವೃತ್ತಿಜೀವನದಲ್ಲಿ 3ನೇ ಬಾರಿಗೆ 50 ಕ್ಕೂ ಅಧಿಕ ರನ್ ಕಲೆಹಾಕಿದ ಭಾರತದ ವಿಕೆಟ್‌ಕೀಪರ್‌ಗಳ ಪಟ್ಟಿಯಲ್ಲಿ ಎಂಎಸ್‌ ಧೋನಿ ಅವರನ್ನು ಹಿಂದಿಕ್ಕಿದ್ದಾರೆ. ವಾಸ್ತವವಾಗಿ, ವಿಕೆಟ್ ಕೀಪರ್ ಆಗಿ, ಧೋನಿ ಟಿ20ಯಲ್ಲಿ ಎರಡು ಬಾರಿ ಮಾತ್ರ 50+ ಗಳಿಸಿದ್ದರು. ಇದೀಗ ಸಂಜು ಸ್ಯಾಮ್ಸನ್ ವಿಕೆಟ್‌ಕೀಪರ್ ಆಗಿ ಮೂರು ಬಾರಿ ಈ ಸಾಧನೆ ಮಾಡಿದ್ದಾರೆ.

4 / 9
ಇದರ ಜೊತೆಗೆ ಭಾರತದ ಪರ ವಿಕೆಟ್‌ಕೀಪರ್ ಆಗಿ ಟಿ20ಯಲ್ಲಿ ಅತಿ ಹೆಚ್ಚು ಬಾರಿ 50+ ಸ್ಕೋರ್ ಗಳಿಸಿದ ವಿಷಯದಲ್ಲಿ ಸಂಜು ಸ್ಯಾಮ್ಸನ್ ಈಗ ಇಶಾನ್ ಕಿಶನ್ ಅವರೊಂದಿಗೆ ಜಂಟಿಯಾಗಿ ಮೊದಲ ಸ್ಥಾನವನ್ನು ತಲುಪಿದ್ದಾರೆ. ಇಶಾನ್ ಕಿಶನ್ ವಿಕೆಟ್ ಕೀಪರ್ ಆಗಿ ಭಾರತದ ಪರ ಟಿ20ಯಲ್ಲಿ ಮೂರು ಬಾರಿ 50ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ.

5 / 9
ಉಳಿದಂತೆ ಕೆಎಲ್ ರಾಹುಲ್, ರಿಷಬ್ ಪಂತ್ ಮತ್ತು ಧೋನಿ ತಲಾ 2 ಬಾರಿ ಈ ಸಾಧನೆ ಮಾಡಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ, ಸಂಜು ಸ್ಯಾಮ್ಸನ್ ಈ ಸರಣಿಯಲ್ಲಿ ಈ ವಿಶೇಷ ಪಟ್ಟಿಯಲ್ಲಿರುವ ಎಲ್ಲಾ ಭಾರತೀಯ ವಿಕೆಟ್‌ಕೀಪರ್‌ಗಳನ್ನು ಹಿಂದಿಕ್ಕುವ ಅವಕಾಶವನ್ನು ಹೊಂದಿದ್ದಾರೆ.

6 / 9
ದಕ್ಷಿಣ ಆಫ್ರಿಕಾದಲ್ಲಿ ಟಿ20ಯಲ್ಲಿ 50 ರನ್ ಗಳಿಸಿದ ಭಾರತದ ಎರಡನೇ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್. ಇದಕ್ಕೂ ಮುನ್ನ 2018ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಧೋನಿ ಈ ಸಾಧನೆ ಮಾಡಿದ್ದರು. ಅಂದರೆ, 6 ವರ್ಷಗಳ ನಂತರ, ದಕ್ಷಿಣ ಆಫ್ರಿಕಾದಲ್ಲಿ ಟಿ20 ಮಾದರಿಯಲ್ಲಿ ಭಾರತದ ವಿಕೆಟ್ ಕೀಪರ್ ಅರ್ಧಶತಕ ಗಳಿಸಿದ್ದಾರೆ.

7 / 9
ಈ ಸ್ಫೋಟಕ ಶತಕದೊಂದಿಗೆ ಸಂಜು ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಸತತ ಎರಡು ಪಂದ್ಯಗಳಲ್ಲಿ ಶತಕ ಸಿಡಿಸಿದ ಭಾರತದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ. ಅವರಿಗಿಂತ ಹಿಂದೆ ಬೇರೆ ಯಾರೂ ಈ ಸಾಧನೆ ಮಾಡಿರಲಿಲ್ಲ.

8 / 9
ಇದಲ್ಲದೇ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20ಯಲ್ಲಿ ಅತಿ ವೇಗದ ಶತಕ ಸಿಡಿಸಿದ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಸಂಜು ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಸೂರ್ಯಕುಮಾರ್ ಯಾದವ್ ಹೆಸರಿನಲ್ಲಿತ್ತು. ಅವರು 55 ಎಸೆತಗಳಲ್ಲಿ ಶತಕ ಗಳಿಸಿದರು.

9 / 9

Published On - 10:38 pm, Fri, 8 November 24

Follow us