India Playing 11: ಸೂರ್ಯ, ಇಶಾನ್ಗಿಲ್ಲ ಚಾನ್ಸ್: ಹೀಗಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11
India vs Sri Lanka 1st ODI Playing 11: ಮೂರು ಪಂದ್ಯಗಳ ಸರಣಿಯ ಮೊದಲ ಮ್ಯಾಚ್ ಗೌಹಾಟಿಯಲ್ಲಿ ನಡೆಯಲಿದ್ದು, 2ನೇ ಪಂದ್ಯಕ್ಕೆ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನ ಆತಿಥ್ಯವಹಿಸಲಿದೆ.
Updated on:Jan 10, 2023 | 1:09 PM

ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಟೀಮ್ ಇಂಡಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಶ್ರೀಲಂಕಾ ತಂಡದ ನಾಯಕ ದಸುನ್ ಶಾನಕ ಬೌಲಿಂಗ್ ಆಯ್ದುಕೊಂಡಿದ್ದಾರೆ.

ಮೂರು ಪಂದ್ಯಗಳ ಸರಣಿಯ ಮೊದಲ ಮ್ಯಾಚ್ ಗೌಹಾಟಿಯಲ್ಲಿ ನಡೆಯಲಿದ್ದು, 2ನೇ ಪಂದ್ಯಕ್ಕೆ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನ ಆತಿಥ್ಯವಹಿಸಲಿದೆ. ಹಾಗೆಯೇ ಮೂರನೇ ಪಂದ್ಯವು ತಿರುವನಂತಪುರದ ಗ್ರೀನ್ ಫೀಲ್ಡ್ ಮೈದಾನದಲ್ಲಿ ನಡೆಯಲಿದೆ.

ಶ್ರೀಲಂಕಾ ವಿರುದ್ಧದ ಟಿ20 ಸರಣಿಯಿಂದ ಹೊರಗುಳಿದಿದ್ದ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಈ ಸರಣಿಯ ಮೂಲಕ ಕಂಬ್ಯಾಕ್ ಮಾಡಿದ್ದಾರೆ. ಅದರಂತೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ.

ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಯುಜ್ವೇಂದ್ರ ಚಹಾಲ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಉಮ್ರಾನ್ ಮಲಿಕ್, ಮೊಹಮ್ಮದ್ ಸಿರಾಜ್

ಶ್ರೀಲಂಕಾ ಪ್ಲೇಯಿಂಗ್ ಇಲೆವೆನ್: ಪಾತುಮ್ ನಿಸ್ಸಾಂಕ, ಕುಸಲ್ ಮೆಂಡಿಸ್, ಅವಿಷ್ಕ ಫೆರ್ನಾಂಡೊ, ಧನಂಜಯ ಡಿ ಸಿಲ್ವ, ಚರಿತ್ ಅಸಲಂಕಾ, ದಸುನ್ ಶಾನಕ(ನಾಯಕ), ವನಿಂದು ಹಸರಂಗ, ಚಾಮಿಕ ಕರುಣಾರತ್ನೆ, ದುನಿತ್ ವೆಲ್ಲಲಾಗೆ, ಕಸುನ್ ರಜಿತ, ದಿಲ್ಶನ್ ಮಧುಶಂಕ
Published On - 1:04 pm, Tue, 10 January 23



















