ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಟೀಮ್ ಇಂಡಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದಿರುವ ಶ್ರೀಲಂಕಾ ತಂಡದ ನಾಯಕ ದಸುನ್ ಶನಕ ಬೌಲಿಂಗ್ ಆಯ್ದುಕೊಂಡಿದ್ದಾರೆ.ವಿಶೇಷ ಎಂದರೆ ಉಭಯ ತಂಡಗಳಿಗೂ ಇದು ಈ ವರ್ಷದ ಮೊದಲ ಪಂದ್ಯವಾಗಿದ್ದು, ಹೀಗಾಗಿ ಗೆಲುವಿನೊಂದಿಗೆ ಶುಭಾರಂಭ ಮಾಡುವ ಇರಾದೆಯಲ್ಲಿದೆ ಎರಡೂ ತಂಡಗಳು.
ಇನ್ನು ಉಭಯ ತಂಡಗಳ ಅಂಕಿ ಅಂಶಗಳನ್ನು ಗಮನಿಸಿದರೆ, ಭಾರತ ತಂಡವೇ ಬಲಿಷ್ಠವಾಗಿದೆ. ಏಕೆಂದರೆ ಅಂತಾರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ ಎರಡೂ ತಂಡಗಳು ಒಟ್ಟು 26 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಭಾರತ ತಂಡವು 17 ಪಂದ್ಯಗಳನ್ನು ಗೆದ್ದಿದ್ದರೆ, ಶ್ರೀಲಂಕಾ 8 ಪಂದ್ಯಗಳನ್ನು ಮಾತ್ರ ಗೆದ್ದಿದೆ. ಒಂದು ಪಂದ್ಯದಲ್ಲಿ ಫಲಿತಾಂಶ ಮೂಡಿಬಂದಿರಲಿಲ್ಲ. ಇದಾಗ್ಯೂ ಕೊನೆಯ ಪಂದ್ಯದಲ್ಲಿ ಭಾರತ ತಂಡವನ್ನು ಶ್ರೀಲಂಕಾ ಸೋಲಿಸಿತ್ತು ಎಂಬುದು ಇಲ್ಲಿ ಉಲ್ಲೇಖಾರ್ಹ.
ಏಷ್ಯಾಕಪ್ 2022 ರಲ್ಲಿ ಸೂಪರ್-4 ನಲ್ಲಿ ಭಾರತ ತಂಡಕ್ಕೆ ಸೋಲುಣಿಸುವ ಮೂಲಕ ಶ್ರೀಲಂಕಾ ಗೆಲುವಿನ ಕೇಕೆ ಹಾಕಿತ್ತು. ಇದೀಗ ಈ ಸೋಲಿನ ಸೇಡನ್ನು ತೀರಿಸಿಕೊಳ್ಳುವದಲ್ಲಿ ಟೀಮ್ ಇಂಡಿಯಾ ಇದ್ದರೆ, ಅತ್ತ ಭಾರತದ ವಿರುದ್ಧ ಕೊನೆಯ ಬಾರಿ ಗೆದ್ದ ಆತ್ಮವಿಶ್ವಾಸದಲ್ಲೇ ಲಂಕಾ ಕಣಕ್ಕಿಳಿಯಲಿದೆ. ಹೀಗಾಗಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು. ಇನ್ನು ಈ ಪಂದ್ಯದ ಮೂಲಕ ಶುಭ್ಮನ್ ಗಿಲ್ ಹಾಗೂ ಶಿವಂ ಮಾವಿ ಟಿ20 ಕ್ರಿಕೆಟ್ನಲ್ಲಿ ಭಾರತದ ಪರ ಪಾದರ್ಪಣೆ ಮಾಡಿದ್ದಾರೆ. ಅದರಂತೆ ಉಭಯ ತಂಡಗಳ ಪ್ಲೇಯಿಂಗ್ 11 ಈ ಕೆಳಗಿನಂತಿದೆ.
ಟೀಮ್ ಇಂಡಿಯಾ ಪ್ಲೇಯಿಂಗ್ 11: ಇಶಾನ್ ಕಿಶನ್, ಶುಭಮನ್ ಗಿಲ್ (ಪಾದರ್ಪಣೆ), ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ(ನಾಯಕ), ದೀಪಕ್ ಹೂಡಾ, ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ಶಿವಂ ಮಾವಿ (ಪಾದರ್ಪಣೆ), ಉಮ್ರಾನ್ ಮಲಿಕ್, ಯುಜ್ವೇಂದ್ರ ಚಾಹಲ್
ಶ್ರೀಲಂಕಾ ಪ್ಲೇಯಿಂಗ್ 11: ಪಾತುಂ ನಿಸ್ಸಾಂಕ, ಕುಸಲ್ ಮೆಂಡಿಸ್, ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕಾ, ಭಾನುಕಾ ರಾಜಪಕ್ಸೆ, ದಸುನ್ ಶನಕ(ನಾಯಕ), ವನಿಂದು ಹಸರಂಗ, ಚಮಿಕಾ ಕರುಣಾರತ್ನೆ, ಮಹೀಶ್ ತೀಕ್ಷಣ, ಕಸುನ್ ರಜಿತ, ದಿಲ್ಶನ್ ಮಧುಶಂಕ
Published On - 6:37 pm, Tue, 3 January 23