India vs Sri Lanka: ಶ್ರೀಲಂಕಾ ವಿರುದ್ಧ 5 ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ ಆಟಗಾರರು

India vs Sri Lanka 1st T20I: ವಿಶೇಷ ಎಂದರೆ ಈ ಪಂದ್ಯದ ಮೂಲಕ ಭಾರತೀಯ ಆಟಗಾರರು ಹೊಸ ದಾಖಲೆಗಳನ್ನೂ ಕೂಡ ನಿರ್ಮಿಸಿದ್ದಾರೆ. ಹೀಗೆ ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ನಿರ್ಮಾಣವಾದ 5 ದಾಖಲೆಗಳು ಈ ಕೆಳಗಿನಂತಿದೆ....

TV9 Web
| Updated By: ಝಾಹಿರ್ ಯೂಸುಫ್

Updated on:Jan 04, 2023 | 5:05 PM

India vs Sri Lanka 1st T20I: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡವು 2 ರನ್​ಗಳಿಂದ ರೋಚಕ ಗೆಲುವು ದಾಖಲಿಸಿತು. ಈ ಗೆಲುವಿನೊಂದಿಗೆ 2023 ರಲ್ಲಿ ಟೀಮ್ ಇಂಡಿಯಾ ಶುಭಾರಂಭ ಮಾಡಿದೆ. ವಿಶೇಷ ಎಂದರೆ ಈ ಪಂದ್ಯದ ಮೂಲಕ ಭಾರತೀಯ ಆಟಗಾರರು ಹೊಸ ದಾಖಲೆಗಳನ್ನೂ ಕೂಡ ನಿರ್ಮಿಸಿದ್ದಾರೆ. ಹೀಗೆ ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ನಿರ್ಮಾಣವಾದ 5 ದಾಖಲೆಗಳು ಈ ಕೆಳಗಿನಂತಿದೆ....

1 / 6
ಮಾವಿ ಮಿಂಚಿಂಗ್: ಶ್ರೀಲಂಕಾ ವಿರುದ್ಧದ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪಾದರ್ಪಣೆ ಮಾಡಿದ ಯುವ ವೇಗಿ ಶಿವಂ ಮಾವಿ ಅತ್ಯುತ್ತಮ ಪ್ರದರ್ಶನ ನೀಡಿದ್ದರು. 4 ಓವರ್​ ಬೌಲಿಂಗ್ ಮಾಡಿದ್ದ ಮಾವಿ ಕೇವಲ 22 ರನ್​ ನೀಡಿ 4 ಪ್ರಮುಖ ವಿಕೆಟ್ ಪಡೆದಿದ್ದರು. ಈ ನಾಲ್ಕು ವಿಕೆಟ್​ಗಳೊಂದಿಗೆ ಶ್ರೀಲಂಕಾ ವಿರುದ್ಧ ಚೊಚ್ಚಲ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಭಾರತೀಯ ಬೌಲರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಭುವನೇಶ್ವರ್ ಕುಮಾರ್ ಹೆಸರಿನಲ್ಲಿತ್ತು. 2012 ರಲ್ಲಿ ಲಂಕಾ ವಿರುದ್ಧ ಮೊದಲ ಬಾರಿಗೆ ಕಣಕ್ಕಿಳಿದಿದ್ದ ಭುವಿ 9 ರನ್​ ನೀಡಿ 3 ವಿಕೆಟ್ ಕಬಳಿಸಿದ್ದರು. ಇದೀಗ ಶ್ರೀಲಂಕಾ ವಿರುದ್ಧ ಪಾದರ್ಪಣಾ ಪಂದ್ಯದಲ್ಲಿ 4 ವಿಕೆಟ್ ಕಬಳಿಸುವ ಮೂಲಕ ಶಿವಂ ಮಾವಿ 10 ವರ್ಷಗಳ ಹಳೆಯ ದಾಖಲೆ ಮುರಿದಿದ್ದಾರೆ.

2 / 6
ಲಂಕಾ ದಹನ: ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಶ್ರೀಲಂಕಾ ವಿರುದ್ಧ 18 ಗೆಲುವು ದಾಖಲಿಸಿ ಹೊಸ ಇತಿಹಾಸ ನಿರ್ಮಿಸಿದೆ. ಅಂದರೆ ಲಂಕಾ ವಿರುದ್ಧ ಚುಟುಕು ಕ್ರಿಕೆಟ್​ನಲ್ಲಿ ಯಾವುದೇ ತಂಡ 18 ಜಯ ಸಾಧಿಸಿಲ್ಲ. ಇದೀಗ 18 ಬಾರಿ ಸೋಲುಣಿಸುವ ಮೂಲಕ ಟಿ20ಯಲ್ಲಿ ಶ್ರೀಲಂಕಾ ವಿರುದ್ಧ ಅತ್ಯಧಿಕ ಬಾರಿ ಗೆದ್ದ ತಂಡ ಹೆಗ್ಗಳಿಕೆಗೆ ಟೀಮ್ ಇಂಡಿಯಾ ಪಾತ್ರವಾಗಿದೆ.

3 / 6
ಹರ್ಷವಿಲ್ಲದ ಹರ್ಷಲ್: ಶ್ರೀಲಂಕಾ ವಿರುದ್ಧದ ಮೊದಲ ಪಂದ್ಯದಲ್ಲಿ ಹರ್ಷಲ್ ಪಟೇಲ್ ಹೀನಾಯ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿರುವುದು ವಿಶೇಷ. ಈ ಪಂದ್ಯದಲ್ಲಿ 4 ಓವರ್ ಬೌಲಿಂಗ್ ಮಾಡಿದ್ದ ಹರ್ಷಲ್ 41 ರನ್ ಬಿಟ್ಟುಕೊಟ್ಟಿದ್ದರು. ಇದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಕನಿಷ್ಠ 500 ಎಸೆತ ಎಸೆದಿರುವ ಬೌಲರ್​ಗಳ ಪೈಕಿ ಕಳಪೆ ಪ್ರದರ್ಶನ ನೀಡಿದ ಟೀಮ್ ಇಂಡಿಯಾ ಬೌಲರ್ ಎನಿಸಿಕೊಂಡಿದ್ದಾರೆ. ಏಕೆಂದರೆ ಹರ್ಷಲ್ ಪಟೇಲ್ ಟಿ20 ಕ್ರಿಕೆಟ್​ನಲ್ಲಿ 9.18 ಎಕನಾಮಿ ರೇಟ್​ನಲ್ಲಿ ರನ್​ ಬಿಟ್ಟುಕೊಟ್ಟಿದ್ದಾರೆ. ಅಂದರೆ ಟಿ20 ಕ್ರಿಕೆಟ್​ನಲ್ಲಿ 503 ಎಸೆತಗಳನ್ನು ಎಸೆದಿರುವ ಹರ್ಷಲ್ ಒಟ್ಟು 770 ರನ್​ ಹೊಡೆಸಿಕೊಂಡಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಕನಿಷ್ಠ 500 ಬಾಲ್ ಮಾಡಿ ಅತೀ ಹೆಚ್ಚು ರನ್ ಬಿಟ್ಟು ಕೊಟ್ಟ ಭಾರತೀಯ ಬೌಲರ್ ಎಂಬ ಹೀನಾಯ ದಾಖಲೆಯನ್ನು ಹರ್ಷಲ್ ಪಟೇಲ್ ತಮ್ಮದಾಗಿಸಿಕೊಂಡಿದ್ದಾರೆ.

4 / 6
ಭರ್ಜರಿ ಪ್ರದರ್ಶನ: ವಾಂಖೆಡೆ ಸ್ಟೇಡಿಯಂನಲ್ಲಿ ಅತೀ ಕಡಿಮೆ ಗುರಿಯನ್ನು ಉಳಿಸಿ ಪಂದ್ಯ ಗೆದ್ದ ದಾಖಲೆ ಟೀಮ್ ಇಂಡಿಯಾ ಪಾಲಾಗಿದೆ. ಈ ಹಿಂದೆ 2016 ರಲ್ಲಿ ಸೌತ್ ಆಫ್ರಿಕಾ ತಂಡವು 210 ರನ್​ಗಳ ಟಾರ್ಗೆಟ್ ನೀಡಿ ಅಫ್ಘಾನಿಸ್ತಾನ್ ವಿರುದ್ಧ ಗೆಲುವು ಸಾಧಿಸಿತ್ತು. ಇದೀಗ ಚೇಸಿಂಗ್ ಪಿಚ್​ನಲ್ಲಿ ಟೀಮ್ ಇಂಡಿಯಾ 163 ರನ್​ಗಳ ಗುರಿ ನೀಡಿ 2 ರನ್​ಗಳಿಂದ ರೋಚಕ ಜಯ ಸಾಧಿಸಿದೆ. ಅಂದರೆ ವಾಂಖೆಡೆ ಕ್ರೀಡಾಂಗಣದಲ್ಲಿ ಮೊದಲು ಬ್ಯಾಟ್ ಮಾಡಿ ಕಡಿಮೆ ಮೊತ್ತಗಳಿಸಿ ಜಯ ಸಾಧಿಸಿದ ತಂಡಗಳ ಪಟ್ಟಿಯಲ್ಲಿ ಟೀಮ್ ಇಂಡಿಯಾ ಅಗ್ರಸ್ಥಾನಕ್ಕೇರಿದೆ.

5 / 6
ಬೆಂಕಿ ಬೌಲಿಂಗ್: ಟೀಮ್ ಇಂಡಿಯಾ ಪರ ಅತ್ಯಂತ ವೇಗವಾಗಿ ಚೆಂಡೆಸೆದ ದಾಖಲೆ ಇದೀಗ ಉಮ್ರಾನ್ ಮಲಿಕ್ ಪಾಲಾಗಿದೆ. ಲಂಕಾ ವಿರುದ್ಧದ ಪಂದ್ಯದಲ್ಲಿ ಮಲಿಕ್ 155 ಕಿ.ಮೀ ವೇಗದಲ್ಲಿ ಬೌಲ್ ಮಾಡಿ ಬುಮ್ರಾ ಹೆಸರಿನಲ್ಲಿದ್ದ ದಾಖಲೆ ಮುರಿದರು. ಈ ಹಿಂದೆ ಬುಮ್ರಾ 153.36 ಕಿ.ಮೀ ವೇಗದಲ್ಲಿ ಬೌಲಿಂಗ್ ಮಾಡಿದ್ದರು. ಇದೀಗ 155 ಕಿ.ಮೀ ಚೆಂಡೆಸೆದಿರುವ ಉಮ್ರಾನ್ ಮಲಿಕ್ ಟೀಮ್ ಇಂಡಿಯಾದ ಸ್ಪೀಡ್ ಕಿಂಗ್ ಎನಿಸಿಕೊಂಡಿದ್ದಾರೆ.

6 / 6

Published On - 5:03 pm, Wed, 4 January 23

Follow us
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ

ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ

ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ

70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್

ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್

ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್

ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ

‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್