IND vs SL: ಬೌಲಿಂಗ್‌ನಲ್ಲೂ ವಿಶೇಷ ದಾಖಲೆ ಬರೆದ ರೋಹಿತ್ ಶರ್ಮಾ..!

Rohit Sharma: ಈ ಪಂದ್ಯದಲ್ಲಿ ಎರಡು ಓವರ್ ಬೌಲ್ ಮಾಡುವುದರೊಂದಿಗೆ ರೋಹಿತ್ ಶರ್ಮಾ ತಮ್ಮ ಹೆಸರಿನಲ್ಲಿ ದಾಖಲೆ ಕೂಡ ಬರೆದರು. 37 ವರ್ಷ 96 ದಿನಗಳಲ್ಲಿ ಏಕದಿನದಲ್ಲಿ ಬೌಲಿಂಗ್ ಮಾಡಿದ ರೋಹಿತ್ ಶರ್ಮಾ ಟೀಂ ಇಂಡಿಯಾ ಪರ ಏಕದಿನದಲ್ಲಿ ಬೌಲಿಂಗ್ ಮಾಡಿದ ಮೂರನೇ ಅತ್ಯಂತ ಹಿರಿಯ ಸ್ಪಿನ್ನರ್ ಎನಿಸಿಕೊಂಡಿದ್ದಾರೆ.

ಪೃಥ್ವಿಶಂಕರ
|

Updated on: Aug 04, 2024 | 8:39 PM

ಪ್ರಸ್ತುತ ಕೊಲಂಬೊದಲ್ಲಿ ಭಾರತ ಹಾಗೂ ಶ್ರೀಲಂಕಾ ನಡುವೆ ಎರಡನೇ ಏಕದಿನ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಶ್ರೀಲಂಕಾ ತಂಡ ನಿಗದಿತ 50 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 240 ರನ್ ಕಲೆಹಾಕಿತು. ಇನ್ನು ಇದೇ ಪಂದ್ಯದಲ್ಲಿ ಎರಡು ಓವರ್ ಬೌಲ್ ಮಾಡಿದ ನಾಯಕ ರೋಹಿತ್ ಶರ್ಮಾ ವಿಶೇಷ ದಾಖಲೆಯನ್ನು ನಿರ್ಮಿಸಿದರು.

1 / 8
ಆರಂಭಿಕನಾಗಿ ಬ್ಯಾಟಿಂಗ್​ಗೆ ಹೆಸರುವಾಸಿಯಾಗಿರುವ ನಾಯಕ ರೋಹಿತ್ ಶರ್ಮಾ, ಶ್ರೀಲಂಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಮೊದಲು 39ನೇ ಓವರ್ ಬೌಲ್ ಮಾಡಿದರು. ಈ ಓವರ್​ನಲ್ಲಿ ಅವರು 6 ರನ್ ನೀಡಿದರು. ಇದಾದ ನಂತರ ರೋಹಿತ್ 41ನೇ ಓವರ್ ಬೌಲ್ ಮಾಡಿ 5 ರನ್ ಬಿಟ್ಟುಕೊಟ್ಟರು. ರೋಹಿತ್ ಅವರ ಸ್ಪಿನ್ ಬೌಲಿಂಗ್ ನೋಡಿದ ಅಭಿಮಾನಿಗಳು ಕೂಡ ಖುಷಿ ಪಟ್ಟರು.

2 / 8
ಈ ಪಂದ್ಯದಲ್ಲಿ ಎರಡು ಓವರ್ ಬೌಲ್ ಮಾಡುವುದರೊಂದಿಗೆ ರೋಹಿತ್ ಶರ್ಮಾ ತಮ್ಮ ಹೆಸರಿನಲ್ಲಿ ದಾಖಲೆ ಕೂಡ ಬರೆದರು. 37 ವರ್ಷ 96 ದಿನಗಳಲ್ಲಿ ಏಕದಿನದಲ್ಲಿ ಬೌಲಿಂಗ್ ಮಾಡಿದ ರೋಹಿತ್ ಶರ್ಮಾ ಟೀಂ ಇಂಡಿಯಾ ಪರ ಏಕದಿನದಲ್ಲಿ ಬೌಲಿಂಗ್ ಮಾಡಿದ ಮೂರನೇ ಅತ್ಯಂತ ಹಿರಿಯ ಸ್ಪಿನ್ನರ್ ಎನಿಸಿಕೊಂಡಿದ್ದಾರೆ.

3 / 8
ಇದಲ್ಲದೆ ಈ ವಿಷಯದಲ್ಲಿ ರವಿಚಂದ್ರನ್ ಅಶ್ವಿನ್ ಅವರನ್ನು ಹಿಂದಿಕ್ಕಿದ್ದಾರೆ. ಅಶ್ವಿನ್ ತಮ್ಮ 37 ವರ್ಷ 21 ದಿನಗಳ ವಯಸ್ಸಿನಲ್ಲಿ ಈ ದಾಖಲೆಯನ್ನು ತಮ್ಮ ಹೆಸರಿಗೆ ಹಾಕಿಕೊಂಡಿದ್ದರು.

4 / 8
ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಸಚಿನ್ ತೆಂಡೂಲ್ಕರ್ 38 ವರ್ಷ 329 ದಿನಗಳಲ್ಲಿ ಏಕದಿನ ಮಾದರಿಯಲ್ಲಿ ಬೌಲಿಂಗ್‌ ಮಾಡಿದ್ದರು. ಎರಡನೇ ಸ್ಥಾನದಲ್ಲಿರುವ ಶ್ರೀನಿವಾಸರಾಘವನ್ ವೆಂಕಟರಾಘವನ್ 37 ವರ್ಷ 351 ದಿನಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.

5 / 8
ಸುಮಾರು 9 ತಿಂಗಳ ಹಿಂದೆ ರೋಹಿತ್ ಕೊನೆಯ ಬಾರಿಗೆ ಏಕದಿನ ಪಂದ್ಯದಲ್ಲಿ ಬೌಲಿಂಗ್ ಮಾಡಿದ್ದರು. ಅವರು 12 ನವೆಂಬರ್ 2023 ರಂದು ಬೆಂಗಳೂರಿನಲ್ಲಿ ನಡೆದ ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದಲ್ಲಿ ಬೌಲಿಂಗ್ ಮಾಡಿದ್ದರು. ಈ ವೇಳೆ ರೋಹಿತ್ 5 ಎಸೆತಗಳನ್ನು ಎಸೆದು ಒಂದು ವಿಕೆಟ್ ಪಡೆದಿದ್ದರು.

6 / 8
ಏಕದಿನದಲ್ಲಿ ರೋಹಿತ್ ಬೌಲಿಂಗ್ ಬಗ್ಗೆ ಮಾತನಾಡುವುದಾದರೆ, ಅವರು 40 ಪಂದ್ಯಗಳ 264 ಇನ್ನಿಂಗ್ಸ್‌ಗಳಲ್ಲಿ 9 ವಿಕೆಟ್ ಪಡೆದಿದ್ದಾರೆ. ರೋಹಿತ್ ಟೆಸ್ಟ್‌ನಲ್ಲಿಯೂ ಬೌಲಿಂಗ್ ಮಾಡಿದ್ದು, ಈ ಮಾದರಿಯಲ್ಲಿ 2 ವಿಕೆಟ್ ಪಡೆದಿದ್ದಾರೆ. ಟಿ20ಯಲ್ಲಿ ಅವರ ಹೆಸರಿನಲ್ಲಿ ಒಂದು ವಿಕೆಟ್ ಇದೆ.

7 / 8
ಇನ್ನು ಈ ಪಂದ್ಯದಲ್ಲಿ ಬೌಲಿಂಗ್ ಜೊತೆಗೆ ಬ್ಯಾಟಿಂಗ್​ನಲ್ಲೂ ಕಮಾಲ್ ಮಾಡಿದ ರೋಹಿತ್ ಶರ್ಮಾ, ಮೊದಲ ಏಕದಿನ ಪಂದ್ಯದಂತೆ ಎರಡನೇ ಏಕದಿನ ಪಂದ್ಯದಲ್ಲಿ ಅರ್ಧಶತಕದ ಇನ್ನಿಂಗ್ಸ್‌ ಆಡಿದರು. ತಮ್ಮ ಇನ್ನಿಂಗ್ಸ್​ನಲ್ಲಿ 44 ಎಸೆತಗಳನ್ನು ಎದುರಿಸಿದ ರೋಹಿತ್ 5 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 64 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಕಟ್ಟಿದರು.

8 / 8
Follow us
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ

‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು

ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್

ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ

ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್

'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್

ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ

ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ

ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್