India Playing 11: ಟೀಮ್ ಇಂಡಿಯಾ ಆಡುವ ಬಳಗದಲ್ಲಿ 2 ಬದಲಾವಣೆ
India vs Sri Lanka, 3rd ODI Playing 11: ಮೂರು ಪಂದ್ಯಗಳ ಸರಣಿಯ ಮೊದಲೆರಡು ಪಂದ್ಯಗಳನ್ನು ಗೆದ್ದಿರುವ ಟೀಮ್ ಇಂಡಿಯಾ ಈಗಾಗಲೇ ಸರಣಿ ವಶಪಡಿಸಿಕೊಂಡಿದೆ.
Updated on:Jan 15, 2023 | 1:07 PM

IND vs SL, 3rd ODI: ತಿರುವನಂತಪುರದ ಗ್ರೀನ್ಫೀಲ್ಡ್ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಮೂರು ಪಂದ್ಯಗಳ ಸರಣಿಯ ಮೊದಲೆರಡು ಪಂದ್ಯಗಳನ್ನು ಗೆದ್ದಿರುವ ಟೀಮ್ ಇಂಡಿಯಾ ಈಗಾಗಲೇ ಸರಣಿ ವಶಪಡಿಸಿಕೊಂಡಿದೆ. ಹೀಗಾಗಿ ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ಔಪಚಾರಿಕ. ಮತ್ತೊಂದೆಡೆ ಕ್ಲೀನ್ ಸ್ವೀಪ್ ಸೋಲಿನ ಅವಮಾನ ತಪ್ಪಿಸಿಕೊಳ್ಳಲು ಶ್ರೀಲಂಕಾ ತಂಡವು ಇಂದು ಕಠಿಣ ಪೈಪೋಟಿ ನೀಡುವ ನಿರೀಕ್ಷೆಯಿದೆ.

ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಶ್ರೀಲಂಕಾವನ್ನು 67 ರನ್ಗಳಿಂದ ಸೋಲಿಸಿತ್ತು. ಹಾಗೆಯೇ 2ನೇ ಏಕದಿನ ಪಂದ್ಯದಲ್ಲಿ ಭಾರತ ತಂಡವು 4 ವಿಕೆಟ್ಗಳ ಜಯ ಸಾಧಿಸಿತ್ತು. ಇದೀಗ ಮೂರನೇ ಏಕದಿನ ಪಂದ್ಯದಲ್ಲಿ ಗೆದ್ದರೆ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಳ್ಳುವ ಅವಕಾಶ ಟೀಮ್ ಇಂಡಿಯಾ ಮುಂದಿದೆ. ಅದರಂತೆ ಈ ಪಂದ್ಯದಿಂದ ಹಾರ್ದಿಕ್ ಪಾಂಡ್ಯ ಹಾಗೂ ಉಮ್ರಾನ್ ಮಲಿಕ್ ವಿಶ್ರಾಂತಿ ಪಡೆದಿದ್ದು, ಇವರ ಬದಲಿಗೆ ಸೂರ್ಯಕುಮಾರ್ ಯಾದವ್, ವಾಷಿಂಗ್ಟನ್ ಸುಂದರ್ ಸ್ಥಾನ ಪಡೆದಿದ್ದಾರೆ. ಅದರಂತೆ ಟೀಮ್ ಇಂಡಿಯಾ ಕಣಕ್ಕಿಳಿಯುವ ಬಳಗ ಈ ಕೆಳಗಿನಂತಿದೆ.

ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್(ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್

ಶ್ರೀಲಂಕಾ ಪ್ಲೇಯಿಂಗ್ ಇಲೆವೆನ್: ಅವಿಷ್ಕಾ ಫೆರ್ನಾಂಡೊ, ನುವಾನಿಡು ಫೆರ್ನಾಂಡೊ, ಕುಸಲ್ ಮೆಂಡಿಸ್, ಅಶೆನ್ ಬಂಡಾರ, ಚರಿತ್ ಅಸಲಂಕಾ, ದಸುನ್ ಶಾನಕ (ನಾಯಕ), ವನಿಂದು ಹಸರಂಗ, ಜೆಫ್ರಿ ವಾಂಡರ್ಸೆ, ಚಾಮಿಕಾ ಕರುಣಾರತ್ನೆ, ಕಸುನ್ ರಜಿತಾ, ಲಹಿರು ಕುಮಾರ
Published On - 1:03 pm, Sun, 15 January 23
