India Playing 11: ಲಂಕಾ ವಿರುದ್ಧದ ಫೈನಲ್ ಫೈಟ್ಗೆ ಟೀಮ್ ಇಂಡಿಯಾ ಇಲೆವೆನ್ ಹೀಗಿದೆ
India vs Sri Lanka, 3rd T20 Playing 11: 3 ಪಂದ್ಯಗಳ ಈ ಟಿ20 ಸರಣಿಯಲ್ಲಿ ಉಭಯ ತಂಡಗಳು ಸಮಬಲ ಸಾಧಿಸಿದೆ. ಹೀಗಾಗಿ ಇಂದಿನ ಪಂದ್ಯವು ನಿರ್ಣಾಯಕ.
Updated on:Jan 07, 2023 | 6:33 PM

ರಾಜ್ಕೋಟ್ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಶ್ರೀಲಂಕಾ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

3 ಪಂದ್ಯಗಳ ಈ ಟಿ20 ಸರಣಿಯಲ್ಲಿ ಉಭಯ ತಂಡಗಳು ಸಮಬಲ ಸಾಧಿಸಿದೆ. ಹೀಗಾಗಿ ಇಂದಿನ ಪಂದ್ಯವು ನಿರ್ಣಾಯಕ. ಏಕೆಂದರೆ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 2 ರನ್ಗಳ ರೋಚಕ ಜಯ ಸಾಧಿಸಿತ್ತು.

ಇನ್ನು ಪುಣೆಯಲ್ಲಿ ನಡೆದ 2ನೇ ಪಂದ್ಯದಲ್ಲಿ ಕಂಬ್ಯಾಕ್ ಮಾಡಿದ ಶ್ರೀಲಂಕಾ ತಂಡವು 16 ರನ್ಗಳಿಂದ ಭಾರತ ತಂಡಕ್ಕೆ ಸೋಲುಣಿಸಿತ್ತು. ಇದೀಗ ಉಭಯ ತಂಡಗಳ ನಡುವೆ ಫೈನಲ್ ಫೈಟ್ ನಡೆಯುತ್ತಿದೆ. ಹೀಗಾಗಿ ಕಪ್ ಗೆಲ್ಲಲು ಎರಡೂ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು. ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ.

ಶ್ರೀಲಂಕಾ ಪ್ಲೇಯಿಂಗ್ 11 ಹೀಗಿದೆ: ಪಾತುಮ್ ನಿಸ್ಸಾಂಕ, ಕುಸಲ್ ಮೆಂಡಿಸ್, ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕಾ, ಅವಿಷ್ಕ ಫರ್ನಾಂಡೊ, ದಸುನ್ ಶಾನಕ(ನಾಯಕ), ವನಿಂದು ಹಸರಂಗ, ಚಮಿಕಾ ಕರುಣಾರತ್ನೆ, ಮಹೀಶ್ ತೀಕ್ಷಣ, ಕಸುನ್ ರಜಿತಾ, ದಿಲ್ಶನ್ ಮಧುಶಂಕ

ಟೀಮ್ ಇಂಡಿಯಾ ಪ್ಲೇಯಿಂಗ್ 11 ಹೀಗಿದೆ: ಇಶಾನ್ ಕಿಶನ್ (ವಿಕೆಟ್ ಕೀಪರ್), ಶುಭ್ಮನ್ ಗಿಲ್, ಸೂರ್ಯಕುಮಾರ್ ಯಾದವ್, ರಾಹುಲ್ ತ್ರಿಪಾಠಿ, ಹಾರ್ದಿಕ್ ಪಾಂಡ್ಯ (ನಾಯಕ), ದೀಪಕ್ ಹೂಡಾ, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಶಿವಂ ಮಾವಿ, ಉಮ್ರಾನ್ ಮಲಿಕ್, ಯುಜುವೇಂದ್ರ ಚಾಹಲ್
Published On - 6:31 pm, Sat, 7 January 23
