Updated on: Sep 06, 2022 | 7:07 PM
Asia Cup 2022: ದುಬೈ ಇಂಟರ್ನ್ಯಾಷನಲ್ ಮೈದಾನದಲ್ಲಿ ನಡೆಯುತ್ತಿರುವ ಏಷ್ಯಾಕಪ್ನ ಸೂಪರ್-4 ಹಂತದ ನಾಲ್ಕನೇ ಪಂದ್ಯದಲ್ಲಿ ಭಾರತ-ಶ್ರೀಲಂಕಾ (India vs Sri Lanka) ತಂಡಗಳು ಮುಖಾಮುಖಿಯಾಗಿದೆ.
ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಶ್ರೀಲಂಕಾ ತಂಡದ ನಾಯಕ ದಸುನ್ ಶನಕ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಟೀಮ್ ಇಂಡಿಯಾ ಮೊದಲು ಬ್ಯಾಟ್ ಮಾಡಲಿದೆ.
ಭಾರತ-ಶ್ರೀಲಂಕಾ ಇದುವರೆಗೆ 25 ಟಿ20 ಪಂದ್ಯಗಳನ್ನಾಡಿದೆ. ಈ ವೇಳೆ ಶ್ರೀಲಂಕಾ ಗೆದ್ದಿರುವುದು ಕೇವಲ 7 ಬಾರಿ ಮಾತ್ರ. ಅಂದರೆ 17 ಬಾರಿ ಬಾರಿ ಟೀಮ್ ಇಂಡಿಯಾ ಜಯ ಸಾಧಿಸಿದೆ. ಇನ್ನು ಒಂದು ಪಂದ್ಯವು ರದ್ದಾಗಿತ್ತು.
ಹಾಗೆಯೇ ಏಷ್ಯಾಕಪ್ನಲ್ಲಿ ಇದುವರೆಗೆ 20 ಪಂದ್ಯಗಳನ್ನಾಡಿದೆ. ಈ ವೇಳೆ ಟೀಮ್ ಇಂಡಿಯಾ 10 ಬಾರಿ ಜಯ ಸಾಧಿಸಿದರೆ, ಶ್ರೀಲಂಕಾ ಕೂಡ ಭಾರತವನ್ನು 10 ಬಾರಿ ಮಣಿಸಿತ್ತು ಎಂಬುದು ವಿಶೇಷ. ಅಂದರೆ ಏಷ್ಯಾಕಪ್ನಲ್ಲಿ ಉಭಯ ತಂಡಗಳ ಪ್ರದರ್ಶನ ಸಮಬಲದಿಂದ ಕೂಡಿದೆ. ಹೀಗಾಗಿ ರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು. ಅದರಂತೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಹೀಗಿದೆ.
ಶ್ರೀಲಂಕಾ ಪ್ಲೇಯಿಂಗ್ ಇಲೆವೆನ್: ಪಾತುಮ್ ನಿಸ್ಸಾಂಕ, ಕುಸಲ್ ಮೆಂಡಿಸ್, ಚರಿತ್ ಅಸಲಂಕಾ, ದನುಷ್ಕ ಗುಣತಿಲಕ, ಭಾನುಕ ರಾಜಪಕ್ಸೆ, ದಸುನ್ ಶನಕ(ನಾಯಕ), ವನಿಂದು ಹಸರಂಗ, ಚಮಿಕಾ ಕರುಣಾರತ್ನೆ, ಮಹೇಶ್ ತೀಕ್ಷಣ, ಅಸಿತ ಫೆರ್ನಾಂಡೊ, ದಿಲ್ಶನ್ ಮಧುಶಂಕ
ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ಕೆಎಲ್ ರಾಹುಲ್, ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್(ವಿಕೆಟ್ ಕೀಪರ್), ದೀಪಕ್ ಹೂಡಾ, ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ಆರ್. ಅಶ್ವಿನ್, ಯುಜ್ವೇಂದ್ರ ಚಾಹಲ್, ಅರ್ಷದೀಪ್ ಸಿಂಗ್
Published On - 7:04 pm, Tue, 6 September 22