AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಟೆಸ್ಟ್ ಸರಣಿಯಿಂದ ಬುಮ್ರಾ ಔಟ್; ತಂಡದಲ್ಲಿ ಯಾರಿಗೆ ಸಿಗಲಿದೆ ಅವಕಾಶ?

Jasprit Bumrah Injury: ಭಾರತದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಗಾಯದಿಂದಾಗಿ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ಗೆ ಮಹತ್ವದ ಈ ಸರಣಿಯಲ್ಲಿ ಬುಮ್ರಾ ಅಲಭ್ಯತೆ ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ. ಅವರ ಬದಲಿಗೆ ಯಾರು ಬರಬಹುದು ಎಂಬ ಕುತೂಹಲ ಮನೆ ಮಾಡಿದೆ. ಜಮ್ಮು ಕಾಶ್ಮೀರದ ಯುವ ವೇಗಿ ಅಕಿಬ್ ನಬಿ ದಾರ್ ಬುಮ್ರಾ ಸ್ಥಾನ ಪಡೆಯುವ ಪ್ರಬಲ ಆಕಾಂಕ್ಷಿಯಾಗಿದ್ದಾರೆ.

ಪೃಥ್ವಿಶಂಕರ
|

Updated on: Aug 02, 2026 | 3:37 PM

Share
ಭಾರತದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಮುಂಬರುವ ಶ್ರೀಲಂಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯಿಂದ ಹೊರಗುಳಿಯಲಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಗಾಯದಿಂದ ಬಳಲುತ್ತಿರುವ ಬುಮ್ರಾ ಇನ್ನು ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಹೀಗಾಗಿ ಅವರನ್ನು ಈ ಟೆಸ್ಟ್ ಸರಣಿಯಿಂದ ಹೊರಗಿಟ್ಟು ಚೇತರಿಸಿಕೊಳ್ಳಲು ಸಮಯಾವಕಾಶ ನೀಡಲು ಬಿಸಿಸಿಐ ನಿರ್ಧರಿಸಿದೆ(PC-PTI).

1 / 6
ಈ ಟೆಸ್ಟ್ ಸರಣಿಗೆ ಜಸ್ಪ್ರೀತ್ ಬುಮ್ರಾ ಅಲಭ್ಯತೆ ತಂಡಕ್ಕೆ ಹಿನ್ನಡೆಯನ್ನುಂಟು ಮಾಡಿದೆ. ಏಕೆಂದರೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ದೃಷ್ಟಿಯಿಂದ ಲಂಕಾ ವಿರುದ್ಧದ ಈ ಸರಣಿಯನ್ನು ಟೀಂ ಇಂಡಿಯಾ 2-0 ಅಂತರದಿಂದ ಗೆಲ್ಲಲೇಬೇಕಾಗಿದೆ. ಹೀಗಿರುವಾಗ ಬುಮ್ರಾ ಈ ಸರಣಿಯನ್ನು ಆಡದಿರುವುದು ತಂಡವನ್ನು ಸಂಕಷ್ಟಕ್ಕೆ ತಳ್ಳಿರುವುದಂತೂ ನಿಜ(PC-PTI).

2 / 6
ಈಗ ಜಸ್ಪ್ರೀತ್ ಬುಮ್ರಾ ಬದಲಿಯಾಗಿ ತಂಡದಲ್ಲಿ ಯಾರಿಗೆ ಅವಕಾಶ ಸಿಗಲಿದೆ ಎಂಬುದು ಇದುವರೆಗೆ ಖಚಿತವಾಗಿಲ್ಲ. ಇತ್ತ ಬಿಸಿಸಿಐ ಕೂಡ ಇದುವರೆಗೆ ಬುಮ್ರಾ ಅಲಭ್ಯತೆಯ ಬಗ್ಗೆಯಾಗಲಿ ಅಥವಾ ಅವರ ಬದಲಿ ಆಟಗಾರನ ಬಗ್ಗೆಯಾಗಲಿ ಯಾವುದೇ ಮಾಹಿತಿ ನೀಡಿಲ್ಲ. ಅದಾಗ್ಯೂ ಅವರ ಬದಲಿಗೆ ಯಾರು ಅವಕಾಶ ಪಡೆಯಬಹುದು ಎಂಬುದರ ಸುಳಿವು ಸಿಕ್ಕಿದೆ(PC-PTI).

3 / 6
ಬುಮ್ರಾ ಬದಲಿಯಾಗಿ ಯಾರನ್ನು ಆಯ್ಕೆ ಮಾಡಬೇಕೆಂಬುದರ ಕುರಿತು ಬಿಸಿಸಿಐ ಹಿರಿಯ ಆಯ್ಕೆ ಸಮಿತಿಯು ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ. ಅದರಂತೆ ಈ ರೇಸ್​ನಲ್ಲಿ ಜಮ್ಮು ಮತ್ತು ಕಾಶ್ಮೀರದ ಯುವ ವೇಗದ ಬೌಲರ್ ಅಕಿಬ್ ನಬಿ ದಾರ್ ಮುಂಚೂಣಿಯಲ್ಲಿದ್ದಾರೆ. ಅವರು ಇಲ್ಲಿಯವರೆಗೆ ಭಾರತ ತಂಡವನ್ನು ಪ್ರತಿನಿಧಿಸಿಲ್ಲವಾದರೂ, 2025-26ರ ರಣಜಿ ಟ್ರೋಫಿಯಲ್ಲಿ ಅತಿ ಹೆಚ್ಚು ವಿಕೆಟ್‌ಗಳನ್ನು ಪಡೆಯುವ ಮೂಲಕ ಜಮ್ಮು ಮತ್ತು ಕಾಶ್ಮೀರ ಮೊದಲ ರಣಜಿ ಟ್ರೋಫಿ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ(PC-PTI).

4 / 6
ಹೀಗಾಗಿ ಅಕಿಬ್ ನಬಿ ದಾರ್ ಆಯ್ಕೆಯಾಗುವುದು ಬಾಗಶಃ ಖಚಿತವಾಗಿದೆ. ಬುಮ್ರಾ ಅನುಪಸ್ಥಿತಿಯಲ್ಲಿ ಭಾರತದ ಬೌಲಿಂಗ್ ವಿಭಾಗವನ್ನು ಮೊಹಮ್ಮದ್ ಸಿರಾಜ್ ಮುನ್ನಡೆಸಲಿದ್ದು, ಸಿರಾಜ್​ಗೆ ಕನ್ನಡಿಗ ಪ್ರಸಿದ್ಧ್ ಕೃಷ್ಣ, ಯುವ ವೇಗಿ ಗುರ್ನೂರ್ ಬ್ರಾರ್ ಸಾಥ್ ನೀಡಲಿದ್ದಾರೆ. ಅಕಿಬ್ ನಬಿಗೆ ಅವಕಾಶ ಸಿಕ್ಕರೆ ಅವರು ಕೂಡ ತಂಡಕ್ಕೆ ನೆರವಾಗಬಲ್ಲರು(PC-PTI).

5 / 6
ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್ ಪಂದ್ಯಕ್ಕೂ ಮುನ್ನ ತಂಡದೊಂದಿಗೆ ತರಬೇತಿ ಪಡೆದಿದ್ದ ಅಕಿಬ್ ನಬಿ ಕಳೆದ ತಿಂಗಳು ಭಾರತ ಎ ತಂಡದೊಂದಿಗೆ ಶ್ರೀಲಂಕಾ ಪ್ರವಾಸ ಮಾಡಿದ್ದರು. ದೇಶೀಯ ಸರ್ಕ್ಯೂಟ್‌ನಲ್ಲಿ ಜಮ್ಮು ಮತ್ತು ಕಾಶ್ಮೀರ ಪರ ಸ್ಥಿರ ಪ್ರದರ್ಶನ ನೀಡುತ್ತಿರುವ ನಬಿ ಶ್ರೀಲಂಕಾದಲ್ಲಿ ಇದುವರೆಗೆ ಆಡಿರುವ ಎರಡು ಪಂದ್ಯಗಳಲ್ಲಿ ಆರು ವಿಕೆಟ್‌ಗಳನ್ನು ಕಬಳಿಸಿದ್ದಾರೆ(PC-PTI).

6 / 6
Follow Us