IND vs WI Test: ಮೂರೇ ದಿನಕ್ಕೆ ಅಂತ್ಯಕಂಡ ಪ್ರಥಮ ಟೆಸ್ಟ್: ದ್ವಿತೀಯ ಟೆಸ್ಟ್ ಪಂದ್ಯ ಯಾವಾಗ ಆರಂಭ?

IND vs WI 1st Test: ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್​ನಲ್ಲಿ 141 ರನ್​ಗಳ ಇನ್ನಿಂಗ್ಸ್ ಜಯದೊಂದಿಗೆ ಟೀಮ್ ಇಂಡಿಯಾ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ. ಹಾಗಾದರೆ, ಭಾರತ- ವಿಂಡೀಸ್ ನಡುವಣ ದ್ವಿತೀಯ ಟೆಸ್ಟ್ ಪಂದ್ಯ ಯಾವಾಗ?.

Vinay Bhat
|

Updated on: Jul 15, 2023 | 7:29 AM

ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಪ್ರಥಮ ಟೆಸ್ಟ್ ಪಂದ್ಯ ಮೂರೇ ದಿನಕ್ಕೆ ಮುಕ್ತಾಯಗೊಂಡಿದೆ. ಡೊಮಿನಿಕಾದ ವಿಂಡ್ಸರ್ ಪಾರ್ಕ್​ನಲ್ಲಿ ನಡೆದ ಪಂದ್ಯದಲ್ಲಿ ಟೀಮ್ ಇಂಡಿಯಾ ಬ್ಯಾಟಿಂಗ್ - ಬೌಲಿಂಗ್​ನಲ್ಲಿ ಭರ್ಜರಿ ಪ್ರದರ್ಶನ ತೋರಿ 141 ರನ್​ಗಳ ಜಯ ಸಾಧಿಸಿತು.

1 / 8
ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡದ ಬ್ಯಾಟರ್​ಗಳು ಸಂಪೂರ್ಣವಾಗಿ ರವಿಚಂದ್ರನ್ ಅಶ್ವಿನ್ ಸ್ಪಿನ್ ದಾಳಿಗೆ ಸಿಲುಕಿ ನಲುಗಿದರು. ಮೊದಲ ಇನ್ನಿಂಗ್ಸ್​ನಲ್ಲಿ ಗಳಿಸಿದ್ದು ಕೇವಲ 150 ರನ್ಸ್.

2 / 8
ವಿಂಡೀಸ್ ಪರ ಪ್ರಥಮ ಇನ್ನಿಂಗ್ಸ್​ನಲ್ಲಿ ಅಲಿಕ್ ಅಥನಾಜೆ 47 ರನ್ ಗಳಿಸಿದ್ದು ಗರಿಷ್ಠ ಸ್ಕೋರ್ ಆಗಿತ್ತು. ಭಾರತ ಪರ ಆರ್. ಅಶ್ವಿನ್ 5 ವಿಕೆಟ್ ಕಿತ್ತರೆ, ರವೀಂದ್ರ ಜಡೇಜಾ 3 ವಿಕೆಟ್ ಪಡೆದರು.

3 / 8
ಬಳಿಕ ತನ್ನ ಮೊದಲ ಇನ್ನಿಂಗ್ಸ್ ಶುರುಮಾಡಿದ ಭಾರತ ಬೊಂಬಾಟ್ ಬ್ಯಾಟಿಂಗ್ ನಡೆಸಿತು. ಓಪನರ್​ಗಳಾದ ಯಶಸ್ವಿ ಜೈಸ್ವಾಲ್ 387 ಎಸೆತಗಳಲ್ಲಿ 171 ರನ್ ಸಿಡಿಸಿದರೆ, ನಾಯಕ ರೋಹಿತ್ ಶರ್ಮಾ 221 ಎಸೆತಗಳಲ್ಲಿ 103 ರನ್ ಕಲೆಹಾಕಿದರು.

4 / 8
ವಿರಾಟ್ ಕೊಹ್ಲಿ 182 ಎಸೆತಗಳಲ್ಲಿ 76 ರನ್ ಗಳಿಸಿದರೆ, ರವೀಂದ್ರ ಜಡೇಜಾ ಅಜೇಯ 37 ರನ್ ಬಾರಿಸಿದರು. ಭಾರತ 152.2 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 421 ರನ್ ಗಳಿಸಿದಾಗ ಡಿಕ್ಲೇರ್ ಘೋಷಿಸಿತು. 271 ರನ್​ಗಳ ಮುನ್ನಡೆ ಪಡೆದುಕೊಂಡಿತು.

5 / 8
ದ್ವಿತೀಯ ಇನ್ನಿಂಗ್ಸ್ ಆರಂಭಿಸಿದ ವೆಸ್ಟ್ ಇಂಡೀಸ್​ಗೆ ಅಶ್ವಿನ್ ಮತ್ತೊಮ್ಮೆ ಮಾರಕವಾದರು. ಈ ಬಾರಿ ಕೆರಿಬಿಯನ್ ಪಡೆ ಕಲೆಹಾಕಿದ್ದು ಕೇವಲ 130 ರನ್ಸ್. ಅಥನಾಜೆ 28 ರನ್ ಗಳಿಸಿ ಗರಿಷ್ಠ ಸ್ಕೋರರ್ ಎನಿಸಿಕೊಂಡರು.

6 / 8
ಭಾರತ ಪರ ಬೌಲಿಂಗ್​ನಲ್ಲಿ ಮತ್ತೊಮ್ಮೆ ಮಿಂಚಿದ ಅಶ್ವಿನ್ ಬರೋಬ್ಬರಿ 7 ವಿಕೆಟ್ ಕಿತ್ತು ಮಿಂಚಿದರೆ, ಜಡೇಜಾ 2 ಹಾಗೂ ಮೊಹಮ್ಮದ್ ಸಿರಾಜ್ 1 ವಿಕೆಟ್ ಪಡೆದರು.

7 / 8
141 ರನ್​ಗಳ ಇನ್ನಿಂಗ್ಸ್ ಜಯದೊಂದಿಗೆ ಟೀಮ್ ಇಂಡಿಯಾ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ. ಭಾರತ- ವಿಂಡೀಸ್ ನಡುವಣ ದ್ವಿತೀಯ ಹಾಗೂ ಅಂತಿಮ ಟೆಸ್ಟ್ ಪಂದ್ಯ ಜುಲೈ 20 ರಿಂದ 24 ರ ವರೆಗೆ ಟ್ರಿನಿಡಾಡ್​ನ ಕ್ವೀನ್ಸ್ ಪಾರ್ಕ್ ಓವಲ್ ಮೈದಾನದಲ್ಲಿ ನಡೆಯಲಿದೆ.

8 / 8
Follow us
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್

ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ

ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ

ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ

ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್

ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?

ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ

Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ

Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು