ಇಂದು ಭಾರತ-ವೆಸ್ಟ್ ಇಂಡೀಸ್ ನಾಲ್ಕನೇ ಟಿ20: ಹಾರ್ದಿಕ್ ಪಡೆಗೆ ಗೆದ್ದರಷ್ಟೇ ಉಳಿಗಾಲ

West Indies vs India 4th T20I: ಟೀಮ್ ಇಂಡಿಯಾ ಸರಣಿಯನ್ನು ಗೆಲ್ಲಲು ಉಳಿದಿರುವ ಎರಡೂ ಪಂದ್ಯಗಳನ್ನು ಗೆಲ್ಲಬೇಕಾಗಿದೆ. ಅತ್ತ ವೆಸ್ಟ್ ಇಂಡೀಸ್ ಒಂದು ಪಂದ್ಯ ಗೆದ್ದರೆ ಐತಿಹಾಸಿಕ ಸಾಧನೆ ಮಾಡಲಿದೆ. ಹೀಗಾಗಿ ಫ್ಲೋರಿಡಾದಲ್ಲಿ ಹೈವೋಲ್ಟೇಜ್ ಪಂದ್ಯ ನಿರೀಕ್ಷಿಸಲಾಗಿದೆ.

Vinay Bhat
|

Updated on: Aug 12, 2023 | 7:20 AM

ಮೂರನೇ ಟಿ20 ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿ ಸರಣಿಯನ್ನು ಜೀವಂತವಾಗಿರಿಸಿಕೊಂಡಿರುವ ಟೀಮ್ ಇಂಡಿಯಾ ಇದೀಗ ನಾಲ್ಕನೇ ಟಿ20 ಪಂದ್ಯಕ್ಕೆ ಸಜ್ಜಾಗುತ್ತಿದೆ. ಇಂದು ಫ್ಲೋರಿಡಾದ ಸೆಂಟ್ರಲ್ ಬ್ರೋವರ್ಡ್ ರೀಜನಲ್ ಪಾರ್ಕ್ ಸ್ಟೇಡಿಯಂ ಟರ್ಫ್ ಗ್ರೌಂಡ್​ನಲ್ಲಿ ಹೈವೋಲ್ಟೇಜ್ ಪಂದ್ಯ ನಡೆಯಲಿದೆ.

1 / 9
ಮಾಡು ಇಲ್ಲವೇ ಮಡಿ ಎಂಬಂತಾಗಿದ್ದ ಮೂರನೇ ಟಿ20 ಪಂದ್ಯದಲ್ಲಿ ಭಾರತ ಬ್ಯಾಟಿಂಗ್- ಬೌಲಿಂಗ್​ನಲ್ಲಿ ಅದ್ಭುತ ಪ್ರದರ್ಶನವನ್ನು ನೀಡಿ ಏಳು ವಿಕೆಟ್‌ಗಳಿಂದ ಗೆದ್ದುಕೊಂಡಿತು. ಈ ಗೆಲುವಿನೊಂದಿಗೆ ಪಾಂಡ್ಯ ನೇತೃತ್ವದ ತಂಡ ಐದು ಪಂದ್ಯಗಳ ಟಿ20 ಸರಣಿಯಲ್ಲಿ 1-2 ಅಂತರದ ಹಿನ್ನಡೆಯಲ್ಲಿದೆ.

2 / 9
ಟೀಮ್ ಇಂಡಿಯಾ ಸರಣಿಯನ್ನು ಗೆಲ್ಲಲು ಉಳಿದಿರುವ ಎರಡೂ ಪಂದ್ಯಗಳನ್ನು ಗೆಲ್ಲಬೇಕಾಗಿದೆ. ಅತ್ತ ವೆಸ್ಟ್ ಇಂಡೀಸ್ ಒಂದು ಪಂದ್ಯ ಗೆದ್ದರೆ ಐತಿಹಾಸಿಕ ಸಾಧನೆ ಮಾಡಲಿದೆ. ಫ್ಲೋರಿಡಾದಲ್ಲಿ ಮೇಜರ್ ಲೀಗ್ ಕ್ರಿಕೆಟ್ (MLC) ಸಮಯದಲ್ಲಿ, ಪ್ರೇಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು. ಹೀಗಾಗಿ ಭಾರತ ತಂಡವನ್ನು ಹುರಿದುಂಬಿಸಲು ಪ್ರೇಕ್ಷಕರು ಬರುವ ನಿರೀಕ್ಷೆಯಿದೆ.

3 / 9
ಸತತ ಎರಡು ವೈಫಲ್ಯಗಳ ನಂತರ, ತಂಡದ ಹಿರಿಯ ಆಟಗಾರರಾದ ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಯುಜ್ವೇಂದ್ರ ಚಹಲ್ ಮತ್ತು ಕುಲ್ದೀಪ್ ಯಾದವ್ ಅವರು ಮೂರನೇ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿ ಗೆಲುವಿಗೆ ಕಾರಣರಾದರು. ಇದೇ ಲಯವನ್ನು ಇಂದುಕೂಡ ಮುಂದುವರೆಸಬೇಕಿದೆ.

4 / 9
ಸೂರ್ಯಕುಮಾರ್ ಯಾದವ್ ಅವರು ಸ್ಫೋಟಕ ಬ್ಯಾಟಿಂಗ್ ಮೂಲಕ ಫಾರ್ಮ್​ಗೆ ಬಂದರೆ, ಚಹಲ್ ಮತ್ತು ಕುಲ್ದೀಪ್ ಸ್ಪಿನ್ ಜಾದು ಚೆನ್ನಾಗಿ ಕೆಲಸ ಮಾಡಿತು. ಹಾರ್ದಿಕ್ ಕೂಡ ಲಯ ಕಂಡುಕೊಂಡರು. ತಿಲಕ್ ವರ್ಮಾ ತಮ್ಮ ಅದ್ಭುತ ಫಾರ್ಮ್ ಮುಂದುವರೆಸಿದ್ದಾರೆ. ಬ್ಯಾಟಿಂಗ್ ವಿಭಾಗದಲ್ಲಿ ಮೂರನೇ ಟಿ20 ಗೆ ತಂಡದಲ್ಲಿ ಬದಲಾವಣೆ ಅನುಮಾನ.

5 / 9
ಸಂಜು ಸ್ಯಾಮ್ಸನ್ ವಿಕೆಟ್ ಕೀಪಿಂಗ್ ಪಾತ್ರವನ್ನು ಮುಂದುವರಿಸುವ ನಿರೀಕ್ಷೆಯಿದೆ. ಏಕೆಂದರೆ ಭಾರತವು ಯಶಸ್ವಿ ಜೈಸ್ವಾಲ್‌ಗೆ ಮತ್ತೊಂದು ಅವಕಾಶ ನೀಡಬೇಕಿದೆ. ಟಿ20ಗಳಲ್ಲಿ ಸತತ ಮೂರು ವೈಫಲ್ಯ ಅನುಭವಿಸಿರುವ ಗಿಲ್ ಮೇಲೆ ಹೆಚ್ಚಿನ ಒತ್ತಡವಿದೆ. ವೇಗಿಗಳಾದ ಅರ್ಷದೀಪ್ ಸಿಂಗ್ ಮತ್ತು ಮುಖೇಶ್ ಕುಮಾರ್ ಮೂರು ಟಿ20 ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿದ ಕಾರಣ ಪ್ಲೇಯಿಂಗ್ ಇಲೆವೆನ್​ನಲ್ಲಿರಲಿದ್ದಾರೆ.

6 / 9
ಇತ್ತ ವಿಂಡೀಸ್ ಕಳೆದ ಪಂದ್ಯ ಸೋತಿದ್ದರೂ ಬಲಿಷ್ಠವಾಗಿದೆ. ನಾಯಕ ರೋವ್ಮನ್ ಪೊವೆಲ್, ಬ್ರಾಂಡನ್ ಕಿಂಗ್ ಮತ್ತು ಅನುಭವಿ ನಿಕೋಲಸ್ ಪೂರನ್ ಭರ್ಜರಿ ಫಾರ್ಮ್​ನಲ್ಲಿದ್ದಾರೆ. ಖೈಲ್ ಮೇಯರ್ಸ್, ಚಾರ್ಲೆಸ್ ಮತ್ತು ಹೆಟ್ಮೇರ್ ಅಬ್ಬರಿಸಿದರೆ ದೊಡ್ಡ ಮೊತ್ತ ಕಲೆಹಾಕುವುದು ಖಚಿತ. ಬೌಲಿಂಗ್​ನಲ್ಲಿ ಒಬೆಡ್ ಮೆಕಾಯ್, ರೊಮಾರಿಯೋ ಶೆಫೆರನ್ ಮತ್ತು ಜೇಸನ್ ಹೋಲ್ಡರ್ ಮಾರಕವಾಗಿದ್ದಾರೆ.

7 / 9
ವೆಸ್ಟ್ ಇಂಡೀಸ್ ಟಿ20 ತಂಡ: ರೋವ್ಮನ್ ಪೊವೆಲ್ (ನಾಯಕ), ಕೈಲ್ ಮೇಯರ್ಸ್ (ಉಪ ನಾಯಕ), ಜಾನ್ಸನ್ ಚಾರ್ಲ್ಸ್, ರೋಸ್ಟನ್ ಚೇಸ್, ನಿಕೋಲಸ್ ಪೂರನ್, ಶಿಮ್ರೋನ್ ಹೆಟ್ಮೆರ್, ಶಾಯ್ ಹೋಪ್, ಬ್ರಾಂಡನ್ ಕಿಂಗ್, ಜೇಸನ್ ಹೋಲ್ಡರ್, ರೊಮಾರಿಯೋ ಶೆಫೆರನ್ ಓಡಿಯನ್ ಸ್ಮಿತ್, ಅಲ್ಜಾರಿ ಜೋಸೆಫ್, ಅಕೆಲ್ ಹೊಸೈನ್, ಒಬೆಡ್ ಮೆಕಾಯ್, ಒಶಾನೆ ಥೋಮಸ್.

8 / 9
ಭಾರತ ಟಿ20 ತಂಡ: ಯಶಸ್ವಿ ಜೈಸ್ವಾಲ್, ಶುಭ್​​ಮನ್ ಗಿಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯ ಕುಮಾರ್ ಯಾದವ್ (ಉಪನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ ( ನಾಯಕ), ತಿಲಕ್ ವರ್ಮಾ, ಅಕ್ಷರ್ ಪಟೇಲ್, ಯುಜ್ವೇಂದ್ರ ಚಹಲ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಅವೇಶ್ ಖಾನ್, ಮುಖೇಶ್ ಕುಮಾರ್, ರವಿ ಬಿಷ್ಣೋಯ್.

9 / 9
Follow us
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ

ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್

ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ

ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ

ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ

ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು

ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ

ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ

ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ

ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ