- Kannada News Photo gallery Cricket photos India vs West Indies Here is the Team India’s Next Series Schedule
Team India Schedule: ಮುಗಿಯಿತು ಟೆಸ್ಟ್ ಚಾಂಪಿಯನ್ಶಿಪ್: ಟೀಮ್ ಇಂಡಿಯಾದ ಮುಂದಿನ ಪಂದ್ಯ ಯಾವಾಗ?, ಯಾರ ವಿರುದ್ಧ?
India Tour of West Indies: ಐಪಿಎಲ್ 2023 ಹಾಗೂ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಹೀಗೆ ಸತತ ಕ್ರಿಕೆಟ್ ಆಡಿ ಸುಸ್ತಾಗಿರುವ ಭಾರತೀಯ ಆಟಗಾರರು ಸುಮಾರು ಒಂದು ತಿಂಗಳುಗಳ ಕಾಲ ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ. ಅಂದರೆ ಮುಂದಿನ 30 ದಿನಗಳ ಕಾಲ ಭಾರತಕ್ಕೆ ಯಾವುದೇ ಕ್ರಿಕೆಟ್ ಪಂದ್ಯವಿಲ್ಲ.
Updated on: Jun 13, 2023 | 8:42 AM

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಮುಕ್ತಾಯಗೊಂಡಿದೆ. ಆಸ್ಟ್ರೇಲಿಯಾ ವಿರುದ್ಧ ಹೀನಾಯವಾಗಿ ಸೋತ ಭಾರತ ಪ್ರಶಸ್ತಿ ಗೆಲ್ಲುವಲ್ಲಿ ವಿಫಲವಾಗಿದೆ. ಇದೀಗ ಟೀಮ್ ಇಂಡಿಯಾ ಆಟಗಾರರು ತವರಿಗೆ ಹಿಂತಿರುಗುತ್ತಿದ್ದಾರೆ.

ಐಪಿಎಲ್ 2023 ಹಾಗೂ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಹೀಗೆ ಸತತ ಕ್ರಿಕೆಟ್ ಆಡಿ ಸುಸ್ತಾಗಿರುವ ಭಾರತೀಯ ಆಟಗಾರರು ಸುಮಾರು ಒಂದು ತಿಂಗಳುಗಳ ಕಾಲ ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ. ಅಂದರೆ ಮುಂದಿನ 30 ದಿನಗಳ ಕಾಲ ಭಾರತಕ್ಕೆ ಯಾವುದೇ ಕ್ರಿಕೆಟ್ ಪಂದ್ಯವಿಲ್ಲ.

ಟೀಮ್ ಇಂಡಿಯಾ ತನ್ನ ಮುಂದಿನ ಸರಣಿಯನ್ನು ವೆಸ್ಟ್ ಇಂಡೀಸ್ ವಿರುದ್ಧ ಆಡಲಿದೆ. ಕೆರಿಬಿಯನ್ನರ ನಾಡಿಗೆ ಭಾರತ ಪ್ರವಾಸ ಬೆಳೆಸಲಿದ್ದು, ಜುಲೈ 12 ರಿಂದ ವಿಂಡೀಸ್ ವಿರುದ್ದ 2 ಟೆಸ್ಟ್, 3 ಏಕದಿನ, 5 ಟಿ-ಟ್ವಿಂಟಿ ಪಂದ್ಯಗಳ ಸರಣಿಯನ್ನು ಆಡಲಿದೆ.

ಟೀಮ್ ಇಂಡಿಯಾದ ವೆಸ್ಟ್ ಇಂಡೀಸ್ ಪ್ರವಾಸವು ಎರಡು ಟೆಸ್ಟ್‌ಗಳೊಂದಿಗೆ ಪ್ರಾರಂಭವಾಗಲಿದೆ. ಡೊಮಿನಿಕಾದ ವಿಂಡ್ಸರ್ ಪಾರ್ಕ್ ಮೈದಾನದಲ್ಲಿ ಜುಲೈ 12ರಿಂದ 16 ರವರೆಗೆ ಮೊದಲ ಟೆಸ್ಟ್ ಆಯೋಜಿಸಲಾಗಿದೆ. ಅಂತೆಯೆ ಜುಲೈ 20 ರಿಂದ 24 ರವರೆಗೆ ಟ್ರಿನಿಡಾಡ್‌ನ ಕ್ವೀನ್ಸ್ ಪಾರ್ಕ್ ಓವಲ್‌ನಲ್ಲಿ ಎರಡನೇ ಟೆಸ್ಟ್ ನಡೆಯಲಿದೆ.

ನಂತರ ಮೂರು ಏಕದಿನ ಪಂದ್ಯಗಳ ಸರಣಿಯು ನಡೆಯಲಿದೆ. ಜುಲೈ 27 ಮತ್ತು 29 ರಂದು ಮೊದಲ ಮತ್ತು ಎರಡು ಏಕದಿನ ಪಂದ್ಯಗಳು ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್‌ನಲ್ಲಿ ಹಾಗೂ ಮೂರನೇ ಏಕದಿನ ಪಂದ್ಯ ಆಗಸ್ಟ್ 1 ರಂದು ಟ್ರಿನಿಡಾಡ್‌ನ ಬ್ರಿಯಾನ್ ಲಾರಾ ಕ್ರಿಕೆಟ್ ಅಕಾಡೆಮಿ ಮೈದಾನದಲ್ಲಿ ಆಯೋಜಿಸಲಾಗಿದೆ.

ಕೊನೆಯದಾಗಿ ಟಿ20 ಸರಣಿಯು ಆರಂಭಗೊಳ್ಳಲಿದ್ದು, ಆಗಸ್ಟ್ 3 ರಂದು ಬ್ರಿಯಾನ್ ಲಾರಾ ಕ್ರಿಕೆಟ್ ಅಕಾಡೆಮಿಯಲ್ಲಿ ಮೊದಲ ಪಂದ್ಯವಿದೆ. ನಂತರ ಆಗಸ್ಟ್ 6 ಮತ್ತು 8 ರಂದು ಎರಡು ಮತ್ತು ಮೂರನೇ ಟಿ20, ಆಗಸ್ಟ್ 12 ರಂದು 4ನೇ ಪಂದ್ಯ, 5 ನೇ ಹಾಗೂ ಅಂತಿಮ ಪಂದ್ಯದ ಆ. 13 ರಂದು ಆಡಲಿದೆ.
























