IND vs WI Live: ಸ್ಟಾರ್ ಸ್ಪೋರ್ಟ್ಸ್, ಸೋನಿ ಯಾವುದರಲ್ಲೂ ಇಲ್ಲ ಭಾರತ-ವೆಸ್ಟ್ ಇಂಡೀಸ್ ಸರಣಿಯ ಲೈವ್: ಹೇಗೆ ವೀಕ್ಷಿಸಬಹುದು?
India Tour of West Indies: ವೆಸ್ಟ್ ಇಂಡೀಸ್ ವಿರುದ್ಧ ಭಾರತ ಎರಡು ಪಂದ್ಯಗಳ ಟೆಸ್ಟ್, ಮೂರು ಪಂದ್ಯಗಳ ಏಕದಿನ ಮತ್ತು ಐದು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಜುಲೈ 12 ರಂದು ಈ ಸರಣಿಗೆ ಚಾಲನೆ ಸಿಗಲಿದೆ.
1 / 9
ಭಾರತ ಕ್ರಿಕೆಟ್ ತಂಡ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಸಜ್ಜಾಗುತ್ತಿದೆ. ಈಗಾಗಲೇ ಒಂದು ವಾರ ಮುಂಚಿತವಾಗಿ ಕೆರಿಬಿಯನ್ ಮಾಡಿಗೆ ತೆರಳಿರುವ ಟೀಮ್ ಇಂಡಿಯಾ ಅಲ್ಲಿ ಮೂರೂ ಮಾದರಿಯ ಕ್ರಿಕೆಟ್ ಅನ್ನು ಆಡಲಿದೆ.
2 / 9
ವೆಸ್ಟ್ ಇಂಡೀಸ್ ವಿರುದ್ಧ ಭಾರತ ಎರಡು ಪಂದ್ಯಗಳ ಟೆಸ್ಟ್, ಮೂರು ಪಂದ್ಯಗಳ ಏಕದಿನ ಮತ್ತು ಐದು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಜುಲೈ 12 ರಂದು ಈ ಸರಣಿಗೆ ಚಾಲನೆ ಸಿಗಲಿದೆ.
3 / 9
ಆದರೆ, ಭಾರತ ವೆಸ್ಟ್ ಇಂಡೀಸ್ ಸರಣಿಯ ಪಂದ್ಯಗಳು ಸ್ಟಾರ್ ಸ್ಪೋರ್ಟ್ಸ್, ಸೋನಿ ನೆಟ್ವರ್ಕ್ ಯಾವುದರಲ್ಲೂ ನೇರ ಪ್ರಸಾರ ಕಾಣುವುದಿಲ್ಲ ಎಂದು ವರದಿ ಆಗಿದೆ. ಬದಲಾಗಿ ಟಿವಿಯಲ್ಲಿ ನೋಡಬೇಕಾದರೆ ಡಿಡಿ ಸ್ಪೋರ್ಟ್ಸ್ನಲ್ಲಿ ಮಾತ್ರ ವೀಕ್ಷಿಸಬಹುದು.
4 / 9
ಹೌದು, ಭಾರತದ ಕೆರಿಬಿಯನ್ ಪ್ರವಾಸದ ಟೆಸ್ಟ್, ಏಕದಿನ ಮತ್ತು ಟಿ20 ಪಂದ್ಯಗಳು ದೂರದರ್ಶನ್ ನೆಟ್ವರ್ಕ್ನ ಡಿಡಿ ಸ್ಪೋರ್ಟ್ಸ್ನಲ್ಲಿ ಮಾತ್ರ ನೇರಪ್ರಸಾರ ಕಾಣಲಿದೆ. ಅದುಬಿಟ್ಟರೆ ಆನ್ಲೈನ್ನಲ್ಲಿ ವೀಕ್ಷಿಸುವವರು ಜಿಯೋ ಸಿನಿಮಾ ಮತ್ತು ಫ್ಯಾನ್ಕೋಡ್ ಆ್ಯಪ್ ಮೂಲಕ ನೋಡಬಹುದು.
5 / 9
ಜುಲೈ 12 ರಿಂದ ಆರಂಭವಾಗಲಿರುವ ಮೊದಲ ಟೆಸ್ಟ್ ಪಂದ್ಯಕ್ಕೂ ಮುನ್ನ ಭಾರತ ತಂಡ ಅಭ್ಯಾಸ ಪಂದ್ಯ ಆಡಲಿದೆ. ಜುಲೈ 6 ರಂದು ಸ್ಥಳೀಯ ತಂಡದ ವಿರುದ್ಧ ಟೀಮ್ ಇಂಡಿಯಾ ಅಭ್ಯಾಸ ಪಂದ್ಯವನ್ನಾಡಲಿದ್ದು, ಈ ಮೂಲಕ ಕೆರಿಬಿಯನ್ ಪರಿಸ್ಥಿತಿಗೆ ಹೊಂದಿಕೊಳ್ಳಲು ಪ್ಲ್ಯಾನ್ ರೂಪಿಸಲಾಗಿದೆ.
6 / 9
ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಎರಡು ಪಂದ್ಯಗಳ ಟೆಸ್ಟ್ ಸರಣಿ ಅಲ್ಲಿನ ಕಾಲಮಾನದ ಪ್ರಕಾರ ಬೆಳಗ್ಗೆ 10 ಗಂಟೆಗೆ ಶುರುವಾಗಲಿದೆ. ಆದರೆ, ಇದು ಭಾರತೀಯ ಕಾಲ ಮಾನದ ಪ್ರಕಾರ ಸಂಜೆ 7:30ಕ್ಕೆ ಪ್ರಾರಂಭವಾಗುತ್ತದೆ. ಏಕದಿನ ಪಂದ್ಯ ಭಾರತೀಯ ಕಾಲ ಮಾನದ ಪ್ರಕಾರ ಸಂಜೆ 7 ಗಂಟೆಗೆ ಪ್ರಾರಂಭವಾಗಲಿದೆ. ಅಂತೆಯೆ ಐದು ಟಿ20 ಪಂದ್ಯಗಳು ಭಾರತೀಯ ಕಾಲ ಮಾನದ ಪ್ರಕಾರ ರಾತ್ರಿ 8 ಗಂಟೆಗೆ ಶುರುವಾಗಲಿದೆ.
7 / 9
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ಉಪನಾಯಕ), ಕೆಎಸ್ ಭರತ್ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಸರ್ ಪಟೇಲ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನದ್ಕತ್, ನವದೀಪ್ ಸೈನಿ.
8 / 9
ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಯುಜ್ವೇಂದ್ರ ಚಹಾಲ್, ಕುಲದೀಪ್ ಯಾದವ್, ಜಯದೇವ್ ಉನಾದ್ಕಟ್, ಮೊಹಮ್ಮದ್. ಸಿರಾಜ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್.
9 / 9
ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗಾಗಿ ಟೀಮ್ ಇಂಡಿಯಾವನ್ನು ಇನ್ನೂ ಕೂಡ ಆಯ್ಕೆ ಮಾಡಿಲ್ಲ. ಪ್ರಸ್ತುತ ಮಾಹಿತಿ ಪ್ರಕಾರ ಟೆಸ್ಟ್ ಸರಣಿ ಬಳಿಕ ಭಾರತ ಟಿ20 ತಂಡವನ್ನು ಪ್ರಕಟಿಸಲಿದೆ.