Team India: ವಿಶ್ವ ದಾಖಲೆ ಬರೆದ ಟೀಮ್ ಇಂಡಿಯಾ

Edited By:

Updated on: Aug 02, 2023 | 4:50 PM

India vs West Indies: ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಟೀಮ್ ಇಂಡಿಯಾ ವಿಶೇಷ ವಿಶ್ವ ದಾಖಲೆ ನಿರ್ಮಿಸಿದೆ.

1 / 5
India vs West Indies: ಟ್ರಿನಿಡಾಡ್​ನ ಬ್ರಿಯಾನ್ ಲಾರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ 200 ರನ್​ಗಳ ಭರ್ಜರಿ ಜಯ ಸಾಧಿಸಿದೆ.

India vs West Indies: ಟ್ರಿನಿಡಾಡ್​ನ ಬ್ರಿಯಾನ್ ಲಾರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ 200 ರನ್​ಗಳ ಭರ್ಜರಿ ಜಯ ಸಾಧಿಸಿದೆ.

2 / 5

ಈ ಗೆಲುವಿನೊಂದಿಗೆ ವೆಸ್ಟ್ ಇಂಡೀಸ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯನ್ನು ಭಾರತ ತಂಡವು 2-1 ಅಂತರದಿಂದ ಗೆದ್ದುಕೊಂಡಿದೆ. ವಿಶೇಷ ಎಂದರೆ ಸರಣಿ ಗೆಲುವಿನೊಂದಿಗೆ ಟೀಮ್ ಇಂಡಿಯಾ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದೆ.

3 / 5

ಅಂದರೆ ಅತೀ ಹೆಚ್ಚು ಬಾರಿ ಒಂದೇ ತಂಡದ ವಿರುದ್ಧ ಸತತ ಸರಣಿಗಳನ್ನು ಗೆದ್ದ ತಂಡ ಎಂಬ ಹೆಗ್ಗಳಿಕೆಗೆ ಟೀಮ್ ಇಂಡಿಯಾ ಪಾತ್ರವಾಗಿದೆ. ಅದು ಕೂಡ ಸತತ 13 ಸರಣಿ ಗೆಲುವುಗಳ ಮೂಲಕ ಎಂಬುದು ವಿಶೇಷ.

4 / 5

ಇದಕ್ಕೂ ಮೊದಲು 1996 ರಿಂದ 2021 ರವರೆಗೆ ಝಿಂಬಾಬ್ವೆ ವಿರುದ್ಧ ಪಾಕಿಸ್ತಾನ್ ತಂಡ ಸತತವಾಗಿ 11 ದ್ವಿಪಕ್ಷೀಯ ಸರಣಿ ಗೆದ್ದು ದಾಖಲೆ ನಿರ್ಮಿಸಿತ್ತು.

5 / 5

ಇದೀಗ ಟೀಮ್ ಇಂಡಿಯಾ 2007 ರಿಂದ 2023 ರವರೆಗೆ ವೆಸ್ಟ್ ಇಂಡೀಸ್ ವಿರುದ್ಧ ಸತತ 13 ದ್ವಿಪಕ್ಷೀಯ ಸರಣಿಗಳನ್ನು ಗೆದ್ದಿದೆ. ಈ ಮೂಲಕ ಒಂದೇ ತಂಡದ ವಿರುದ್ಧ ಸತತವಾಗಿ ಅತ್ಯಧಿಕ ಸರಣಿ ಗೆದ್ದ ವಿಶ್ವ ದಾಖಲೆಯನ್ನು ಟೀಮ್ ಇಂಡಿಯಾ ನಿರ್ಮಿಸಿದೆ.

Loading...
Unable to load recommendations.
Follow Us