ಸಂಜು ಸ್ಯಾಮ್ಸನ್ ಸತತ ವೈಫಲ್ಯ: ವೈಭವ್ ಕನಸು ಇಂದಾದರೂ ನನಸಾಗುತ್ತಾ?

Updated on: Oct 09, 2026 | 3:14 PM

ಇಂದು ರಾಂಚಿಯಲ್ಲಿ ಭಾರತ vs ವೆಸ್ಟ್ ಇಂಡೀಸ್ 2ನೇ ಟಿ20 ಪಂದ್ಯ ನಡೆಯಲಿದೆ. ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿರುವ ಭಾರತ ಗೆಲುವಿನತ್ತ ಹೆಜ್ಜೆ ಇಡಲು ಸಜ್ಜಾಗಿದೆ. ಕಳಪೆ ಫಾರ್ಮ್‌ನಲ್ಲಿರುವ ಸಂಜು ಸ್ಯಾಮ್ಸನ್ ಬದಲಿಗೆ ಯುವ ಆಟಗಾರ ವೈಭವ್ ಸೂರ್ಯವಂಶಿಗೆ ಆಡುವ ಹನ್ನೊಂದರಲ್ಲಿ ಅವಕಾಶ ಸಿಗುತ್ತದೆಯೇ ಎಂಬುದು ಕುತೂಹಲ ಮೂಡಿಸಿದೆ. ಇದು ಟಾಸ್ ವೇಳೆಗೆ ತಿಳಿಯಲಿದೆ.

1 / 6
ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯ ಇಂದು ಅಂದರೆ ಅಕ್ಟೋಬರ್ 9 ರಂದು ನಡೆಯಲಿದೆ. ಮೊದಲ ಪಂದ್ಯವನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದ್ದು, ಇದೀಗ ಎರಡನೇ ಪಂದ್ಯವನ್ನು ಗೆದ್ದು ಸರಣಿ ಗೆಲುವಿಗೆ ಸನಿಹವಾಗಲು ನೋಡುತ್ತಿದೆ(PC-PTI).

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯ ಇಂದು ಅಂದರೆ ಅಕ್ಟೋಬರ್ 9 ರಂದು ನಡೆಯಲಿದೆ. ಮೊದಲ ಪಂದ್ಯವನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದ್ದು, ಇದೀಗ ಎರಡನೇ ಪಂದ್ಯವನ್ನು ಗೆದ್ದು ಸರಣಿ ಗೆಲುವಿಗೆ ಸನಿಹವಾಗಲು ನೋಡುತ್ತಿದೆ(PC-PTI).

2 / 6

ಇಂದಿನ ಪಂದ್ಯ ರಾಂಚಿಯಲ್ಲಿ ನಡೆಯಲಿದ್ದು, ಈ ಪಂದ್ಯಕ್ಕೆ ಭಾರತದ ಪ್ಲೇಯಿಂಗ್ 11 ಹೇಗಿರಲಿದೆ ಎಂಬುದು ಕುತೂಹಲ ಮೂಡಿಸಿದೆ. ಯುವ ಆರಂಭಿಕ ಆಟಗಾರ ವೈಭವ್ ಸೂರ್ಯವಂಶಿಗೆ ಇಂದು ಆಡಲು ಅವಕಾಶ ಸಿಗುತ್ತದೆಯೇ ಎಂಬುದು ದೊಡ್ಡ ಪ್ರಶ್ನೆಯಾಗಿದೆ. ಏಕೆಂದರೆ ಕಳೆದ ಕೆಲವು ಪಂದ್ಯಗಳಲ್ಲಿ ಸಂಜು ಸ್ಯಾಮ್ಸನ್ ವೈಫಲ್ಯ ವೈಭವ್​ಗೆ ದಾರಿ ಮಾಡಿಕೊಡಲಿದೆಯಾ ಎಂಬುದು ಟಾಸ್ ವೇಳೆಗೆ ತಿಳಿಯಲಿದೆ(PC-PTI).

3 / 6

ವೈಭವ್ ಸೂರ್ಯವಂಶಿ ಇದುವರೆಗೆ ಭಾರತದ ಪರ ಎಂಟು ಟಿ20 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ, ಆದರೆ ಗಮನಾರ್ಹ ಸಂಗತಿಯೆಂದರೆ ಅವರು ಭಾರತದಲ್ಲಿ ಒಂದೇ ಒಂದು ಪಂದ್ಯವನ್ನು ಆಡಿಲ್ಲ. ಇಂಗ್ಲೆಂಡ್‌ನಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ವೈಭವ್ ಆ ನಂತರ ಜಿಂಬಾಬ್ವೆ ವಿರುದ್ಧವೂ ಆಡಿದ್ದರು(PC-PTI).

4 / 6

ಇನ್ನು ಜಪಾನ್‌ನಲ್ಲಿ ನಡೆದ ಏಷ್ಯನ್ ಕ್ರೀಡಾಕೂಟದಲ್ಲಿಯೂ ವೈಭವ್​ಗೆ ಆಡಲು ಅವಕಾಶ ಸಿಕ್ಕಿತ್ತು. ಈ ಕ್ರೀಡಾಕೂಟದಲ್ಲಿ ವೈಭವ್​ಗೆ ಎರಡು ಪಂದ್ಯಗಳಲ್ಲಿ ಆಡುವ ಅವಕಾಶ ಸಿಕ್ಕಿತು. ಶ್ರೀಲಂಕಾ ವಿರುದ್ಧದ ಸೆಮಿಫೈನಲ್ ನಲ್ಲಿ ವೈಭವ್​ 38 ರನ್ ಮತ್ತು ಪಾಕಿಸ್ತಾನ ವಿರುದ್ಧದ ಫೈನಲ್​ನಲ್ಲಿ 15 ರನ್ ಗಳಿಸಲಷ್ಟೇ ಶಕ್ತರಾಗಿದ್ದರು. ಅವರಿಂದ ದೊಡ್ಡ ಇನ್ನಿಂಗ್ಸ್ ನಿರೀಕ್ಷಿಸಲಾಗಿತ್ತಾದರೂ ಉತ್ತಮ ಆರಂಭದ ಹೊರತಾಗಿಯೂ ವೈಭವ್ ಅದನ್ನು ದೊಡ್ಡ ಇನ್ನಿಂಗ್ಸ್ ಆಗಿ ಪರಿವರ್ತಿಸುವಲ್ಲಿ ಎಡವಿದ್ದರು(PC-PTI).

5 / 6

ಮೇಲೆ ಹೇಳಿದಂತೆ ಸಂಜು ಸ್ಯಾಮ್ಸನ್ ಕೂಡ ಉತ್ತಮ ಪ್ರದರ್ಶನ ನೀಡುತ್ತಿಲ್ಲ. ಸಂಜು ತಮ್ಮ ಕೊನೆಯ ನಾಲ್ಕು ಇನ್ನಿಂಗ್ಸ್‌ಗಳಲ್ಲಿ ಒಮ್ಮೆ ಮಾತ್ರ ಎರಡಂಕಿಯ ರನ್ ಕಲೆಹಾಕಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಪಂದ್ಯದಲ್ಲಿ 11 ರನ್ ಕಲೆಹಾಕಲಷ್ಟೇ ಶಕ್ತರಾಗಿದ್ದ ಸಂಜು, ಪಾಕಿಸ್ತಾನ ವಿರುದ್ಧದ ಏಷ್ಯನ್ ಗೇಮ್ಸ್ ಫೈನಲ್‌ನಲ್ಲಿ ಎರಡು ರನ್‌ ಮತ್ತು ಶ್ರೀಲಂಕಾ ವಿರುದ್ಧದ ಸೆಮಿಫೈನಲ್‌ನಲ್ಲಿ ಏಳು ರನ್‌ಗಳಿಗೆ ಔಟಾಗಿದ್ದರು(PC-PTI).

6 / 6

ಜಪಾನ್ ವಿರುದ್ಧ ನಡೆದ ಏಕೈಕ ಪಂದ್ಯದಲ್ಲೂ ಸಂಜು ಕೇವಲ ಒಂಬತ್ತು ರನ್‌ಗಳನ್ನು ಗಳಿಸಿದ್ದರು. ಇದರರ್ಥ ಅವರು ಕೂಡ ದೊಡ್ಡ ಇನ್ನಿಂಗ್ಸ್ ಆಡಲು ಹೆಣಗಾಡುತ್ತಿದ್ದಾರೆ. ಆದ್ದರಿಂದ, ಇಂದಿನ ಆಡುವ ಹನ್ನೊಂದರಿಂದ ಸಂಜು ಸ್ಯಾಮ್ಸನ್ ಅವರನ್ನು ಹೊರಗಿಡುವ ಸಾಧ್ಯತೆಯಿದ್ದು, ವೈಭವ್ ಸೂರ್ಯವಂಶಿಗೆ ಅವಕಾಶ ನೀಡುವ ಸಾಧ್ಯತೆಗಳಿವೆ(PC-PTI).

ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Loading...
Unable to load recommendations.
Follow Us