IND vs ZIM: 4,6,4,4.. ಔಟ್; 3ನೇ ಓವರ್​ನಲ್ಲೇ ಆಟ ಮುಗಿಸಿದ ವೈಭವ್

Updated on: Jul 25, 2026 | 5:21 PM

India vs Zimbabwe 2nd T20: ಹರಾರೆಯಲ್ಲಿ ನಡೆದ ಭಾರತ-ಜಿಂಬಾಬ್ವೆ 2ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಜಿಂಬಾಬ್ವೆ ಬೌಲಿಂಗ್ ಆಯ್ದುಕೊಂಡಿತು. ಭಾರತಕ್ಕೆ ಮತ್ತೊಮ್ಮೆ ಕಳಪೆ ಆರಂಭ ದೊರೆತಿದ್ದು, ಆರಂಭಿಕರಾದ ಅಭಿಷೇಕ್ ಶರ್ಮಾ (8 ರನ್) ಮತ್ತು ವೈಭವ್ ಸೂರ್ಯವಂಶಿ (20 ರನ್) ಬೇಗನೆ ವಿಕೆಟ್ ಒಪ್ಪಿಸಿದರು. ವೈಭವ್ ಸೂರ್ಯವಂಶಿ ಮೊದಲ ಪಂದ್ಯದಲ್ಲಿ ಮಿಂಚಿದ್ದರೂ, ಈ ಪಂದ್ಯದಲ್ಲಿ ದೊಡ್ಡ ಇನಿಂಗ್ಸ್ ಕಟ್ಟಲು ವಿಫಲರಾದರು. ಆದರೂ, ಭಾರತ ತಂಡ 10 ಓವರ್‌ಗಳಲ್ಲಿ 95/3 ರನ್ ಗಳಿಸಿ ಚೇತರಿಕೆ ಕಂಡಿದೆ.

1 / 5
ಹರಾರೆಯಲ್ಲಿ ನಡೆಯುತ್ತಿರುವ ಭಾರತ ಮತ್ತು ಜಿಂಬಾಬ್ವೆ ನಡುವಿನ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಟಾಸ್ ಗೆದ್ದ ಜಿಂಬಾಬ್ವೆ ಮೊದಲು ಬೌಲಿಂಗ್ ಆಯ್ದುಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್‌ ಆರಂಭಿಸಿದ ಭಾರತ ತಂಡಕ್ಕೆ ಮತ್ತೊಮ್ಮೆ ಕಳಪೆ ಆರಂಭ ಸಿಕ್ಕಿದೆ. ಆರಂಭಿಕರಿಬ್ಬರು 3ನೇ ಓವರ್ ಮುಗಿಯುವುದಕ್ಕೂ ಮುನ್ನವೇ ಪೆವಿಲಿಯನ್ ಸೇರಿಕೊಂಡಿದ್ದಾರೆ(PC-BCCI).

2 / 5
ಆರಂಭಿಕ ಅಭಿಷೇಕ್ ಶರ್ಮಾ ಮತ್ತೊಮ್ಮೆ ಕಳಪೆ ಪ್ರದರ್ಶನ ನೀಡಿ 8 ರನ್​ಗಳಿಗೆ ವಿಕೆಟ್ ಒಪ್ಪಿಸಿದರೆ, ಕಳೆದ ಪಂದ್ಯದಲ್ಲಿ ಸ್ಫೋಟಕ ಅರ್ಧಶತಕದ ಇನ್ನಿಂಗ್ಸ್ ಆಡಿದ್ದ ವೈಭವ್ ಸೂರ್ಯವಂಶಿ ಕೂಡ ಈ ಪಂದ್ಯದಲ್ಲಿ ಬಹುಬೇಗನೇ ವಿಕೆಟ್ ಕಳೆದುಕೊಂಡರು. ಹೀಗಾಗಿ ಟೀಂ ಇಂಡಿಯಾ ಕೇವಲ 29 ರನ್​ಗಳಿಗೆ ತನ್ನ ಆರಂಭಿಕರಿಬ್ಬರನ್ನು ಕಳೆದುಕೊಂಡಿತು(PC-BCCI).

3 / 5
ಈ ಪಂದ್ಯದಲ್ಲಿ ಸಿಂಗಲ್ ತೆಗೆದುಕೊಳ್ಳುವ ಮೂಲಕ ತಮ್ಮ ಇನ್ನಿಂಗ್ಸ್ ಆರಂಭಿಸಿದ ವೈಭವ್, ರಿಚರ್ಡ್ ನಗರ್ವಾ ಬೌಲ್ ಮಾಡಿದ ಇನ್ನಿಂಗ್ಸ್​ನ 4ನೇ ಓವರ್​ನಲ್ಲಿ ಸತತ ಬೌಂಡರಿಗಳ ಮಳೆಗರೆದರು. ಈ ಓವರ್​ನಲ್ಲಿ ಮೂರು ಬೌಂಡರಿ ಹಾಗೂ 1 ಸಿಕ್ಸರ್ ಬಾರಿಸಿದ ವೈಭವ್ ಕೊನೆಯ ಎಸೆತದಲ್ಲಿ ಮತ್ತದೇ ದೊಡ್ಡ ಹೊಡೆತಕ್ಕೆ ಕೈಹಾಕಿ ವಿಕೆಟ್ ಒಪ್ಪಿಸಿದರು(PC-BCCI).

4 / 5
ಈ ಪಂದ್ಯದಲ್ಲಿ ವೈಭವ್ 9 ಎಸೆತಗಳನ್ನು ಎದುರಿಸಿ 3 ಬೌಂಡರಿ ಮತ್ತು 1 ಸಿಕ್ಸರ್ ಸೇರಿದಂತೆ 20 ರನ್ ಗಳಿಸಿ ಔಟಾದರು. ಮೊದಲ ಪಂದ್ಯದಲ್ಲಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದ ವೈಭವ್ ಕೇವಲ 18 ಎಸೆತಗಳಲ್ಲಿ 4 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 50 ರನ್​ಗಳ ಇನ್ನಿಂಗ್ಸ್ ಆಡಿದ್ದರು. ಈ ಮೂಲಕ ದಾಖಲೆಯನ್ನು ನಿರ್ಮಿಸಿದ್ದರು. ಆದರೆ ಈ ಪಂದ್ಯದಲ್ಲಿ ಮತ್ತೊಮ್ಮೆ ಮಿಂಚಲು ವೈಭವ್​ಗೆ ಸಾಧ್ಯವಾಗಲಿಲ್ಲ(PC-BCCI).

5 / 5
ಪಂದ್ಯದ ವಿಚಾರಕ್ಕೆ ಬರುವುದಾದರೆ.. ಆರಂಭಿಕ ಆಘಾತದ ನಡುವೆಯೂ ಟೀಂ ಇಂಡಿಯಾ ಉತ್ತಮವಾಗಿ ಬ್ಯಾಟಿಂಗ್‌ ಮಾಡುತ್ತಿದೆ. ಈ ಸುದ್ದಿ ಬರೆಯುವ ಹೊತ್ತಿಗೆ ಟೀಂ ಇಂಡಿಯಾ ಇನ್ನಿಂಗ್ಸ್​ನ 10 ಓವರ್​ಗಳು ಪೂರ್ಣಗೊಂಡಿದ್ದು, ಪ್ರಮುಖ 3 ವಿಕೆಟ್‌ಗಳನ್ನು ಕಳೆದುಕೊಂಡು 95 ರನ್ ಕಲೆಹಾಕಿದೆ(PC-BCCI).

Published On - 5:21 pm, Sat, 25 July 26

Follow Us