AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ZIM: 21 ತಿಂಗಳ ನಂತರ ಕಮ್‌ಬ್ಯಾಕ್; ಮೊದಲ ಎಸೆತದಲ್ಲೇ ವಿಕೆಟ್ ಪಡೆದ ಮಯಾಂಕ್

Mayank Yadav comeback: ಜಿಂಬಾಬ್ವೆ ವಿರುದ್ಧದ ಮೊದಲ T20 ಪಂದ್ಯದಲ್ಲಿ ಮಯಾಂಕ್ ಯಾದವ್ 649 ದಿನಗಳ ನಂತರ ಅದ್ಭುತ ಕಂಬ್ಯಾಕ್ ಮಾಡಿದರು. ತಮ್ಮ ಮೊದಲ ಓವರ್‌ನ ಮೊದಲ ಎಸೆತದಲ್ಲೇ ವಿಕೆಟ್ ಪಡೆದು ಗಮನ ಸೆಳೆದರು. ಇದರೊಂದಿಗೆ, ಪಂದ್ಯದ ಮೊದಲ ಎಸೆತದಲ್ಲೇ ಎರಡು ಬಾರಿ ವಿಕೆಟ್ ಪಡೆದ ನಾಲ್ಕನೇ ಬೌಲರ್ ಎಂಬ ದಾಖಲೆ ಬರೆದರು. 4 ಓವರ್‌ಗಳಲ್ಲಿ 18 ರನ್‌ಗಳಿಗೆ 2 ವಿಕೆಟ್ ಕಬಳಿಸಿ ಭಾರತದ ಗೆಲುವಿಗೆ ನೆರವಾದರು.

ಪೃಥ್ವಿಶಂಕರ
|

Updated on: Jul 23, 2026 | 7:04 PM

Share
ಭಾರತ ಮತ್ತು ಜಿಂಬಾಬ್ವೆ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಜಿಂಬಾಬ್ವೆ 20 ಓವರ್‌ಗಳಲ್ಲಿ 7 ವಿಕೆಟ್‌ಗೆ 125 ರನ್ ಗಳಿಸಿತು. ತಂಡದ ಪರ ವೆಸ್ಲಿ ಮಾಧೇವೆರೆ 39 ಮತ್ತು ಮರುಮಾನಿ 27 ರನ್​ಗಳ ಇನ್ನಿಂಗ್ಸ್ ಆಡಿದರು. ಇತ್ತ ಭಾರತದ ಪರ ಪ್ರಿನ್ಸ್ ಯಾದವ್ ಮತ್ತು ಮಾಯಾಂಕ್ ಯಾದವ್ ತಲಾ ಎರಡು ವಿಕೆಟ್ ಪಡೆದರು(PC-BCCI).

1 / 6
ಅದರಲ್ಲೂ ಭಾರತದ ಪರ 2024 ರ ನಂತರ ಅಂದರೆ ಬರೋಬ್ಬರಿ 649 ದಿನಗಳ ನಂತರ ಮೈದಾನಕ್ಕೆ ಮರಳಿದ ಮಯಾಂಕ್ ಯಾದವ್ ತಾವು ಬೌಲ್ ಮಾಡಿದ ಮೊದಲ ಓವರ್​ನ ಮೊದಲ ಎಸೆತದಲ್ಲೇ ವಿಕೆಟ್ ಉರುಳಿಸುವ ಮೂಲಕ ಭರ್ಜರಿ ಕಂಬ್ಯಾಕ್ ಮಾಡಿದರು. ಮಯಾಂಕ್, ಜಿಂಬಾಬ್ವೆಯ ಆರಂಭಿಕ ಆಟಗಾರ ಬ್ರಿಯಾನ್ ಬೆನೆಟ್ ಅವರನ್ನು ತಮ್ಮ ಮೊದಲ ಎಸೆತದಲ್ಲೇ ಔಟ್ ಮಾಡಿದರು(PC-BCCI).

2 / 6
ಇದರೊಂದಿಗೆ, ಪಂದ್ಯದ ಮೊದಲ ಎಸೆತದಲ್ಲೇ ಎರಡು ಬಾರಿ ವಿಕೆಟ್ ಪಡೆದ ನಾಲ್ಕನೇ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಅವರಿಗಿಂತ ಮೊದಲು ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್ ಮತ್ತು ಹಾರ್ದಿಕ್ ಪಾಂಡ್ಯ ಈ ಸಾಧನೆ ಮಾಡಿದ್ದರು(PC-BCCI).

3 / 6
ಗಮನಿಸಬೇಕಾದ ಅಂಶವೆಂದರೆ, ಮಯಾಂಕ್ ಯಾದವ್ ಈ ಹಿಂದೆ 2024 ರಲ್ಲಿ ಮೊದಲ ಎಸೆತದಲ್ಲೇ ವಿಕೆಟ್ ಪಡೆದಿದ್ದರು. ಅವರು ಬಾಂಗ್ಲಾದೇಶ ವಿರುದ್ಧ ಈ ಸಾಧನೆ ಮಾಡಿದ್ದರು. ಇದೀಗ 2026 ರಲ್ಲಿ ಜಿಂಬಾಬ್ವೆ ವಿರುದ್ಧದ ಮೊದಲ ಎಸೆತದಲ್ಲೇ ವಿಕೆಟ್ ಪಡೆದಿದ್ದಾರೆ. ಇದಕ್ಕೂ ಮೊದಲು 2022 ರಲ್ಲಿ ಶ್ರೀಲಂಕಾ ವಿರುದ್ಧ ಭುವನೇಶ್ವರ್ ಕುಮಾರ್ ಈ ಸಾಧನೆ ಮಾಡಿದ ಮೊದಲಿಗರು. 2022 ರಲ್ಲಿ ಇಂಗ್ಲೆಂಡ್ ವಿರುದ್ಧವೂ ಭುವನೇಶ್ವರ್ ಈ ಸಾಧನೆ ಮಾಡಿದ್ದರು(PC-PTI).

4 / 6
2023 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಬ್ರಾಂಡನ್ ಕಿಂಗ್ ಅವರನ್ನು ಔಟ್ ಮಾಡುವ ಮೂಲಕ ಹಾರ್ದಿಕ್ ಪಾಂಡ್ಯ ಈ ಸಾಧನೆ ಮಾಡಿದ್ದರು. ನಂತರ 2025 ರಲ್ಲಿ ಪಾಕಿಸ್ತಾನ ವಿರುದ್ಧದ ಮೊದಲ ಎಸೆತದಲ್ಲೇ ಹಾರ್ದಿಕ್ ಪಾಂಡ್ಯ ಸ್ಯಾಮ್ ಅಯ್ಯೂಬ್ ಅವರನ್ನು ಔಟ್ ಮಾಡಿದ್ದರು. ಹಾಗೆಯೇ 2024 ರಲ್ಲಿ ಅರ್ಶ್ದೀಪ್ ಸಿಂಗ್ ಯುಎಸ್ಎ ವಿರುದ್ಧ ಮತ್ತು ಕಳೆದ ವರ್ಷ ಇಂಗ್ಲೆಂಡ್ ವಿರುದ್ಧ ಈ ಸಾಧನೆ ಮಾಡಿದ್ದರು(PC-PTI).

5 / 6
ಇನ್ನು 2024 ರ ನಂತರ ತಂಡಕ್ಕೆ ಮರಳಿದ ಮಯಾಂಕ್ ಯಾದವ್ ಅದ್ಭುತ ಪ್ರದರ್ಶನ ನೀಡಿದರು. ಅವರು 4 ಓವರ್‌ಗಳಲ್ಲಿ ಕೇವಲ 18 ರನ್‌ಗಳಿಗೆ 2 ವಿಕೆಟ್‌ಗಳನ್ನು ಪಡೆದರು. ಬ್ರಿಯಾನ್ ಬೆನೆಟ್, ಡಿಯೋನ್ ಮೈಯರ್ಸ್ ಅವರನ್ನು ಔಟ್ ಮಾಡಿದ ಮಯಾಂಕ್ ಅವರ ಎಕಾನಮಿ ದರ ಪ್ರತಿ ಓವರ್‌ಗೆ ಕೇವಲ 4.5 ರನ್‌ಗಳು. ಮಯಾಂಕ್ ಯಾದವ್ 17 ಡಾಟ್ ಬಾಲ್‌ಗಳನ್ನು ಎಸೆದರು(PC-PTI).

6 / 6
Follow Us
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ

‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?

‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...

‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ

ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ

ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..

ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ

ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ

ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು

ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು