Updated on: Jun 28, 2023 | 11:17 PM
ODI World Cup 2023: ಏಕದಿನ ವಿಶ್ವಕಪ್ನ ತನ್ನ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ. ಅಕ್ಟೋಬರ್ 8 ರಂದು ನಡೆಯಲಿರುವ ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ 3 ಏಕದಿನ ಪಂದ್ಯಗಳನ್ನಾಡಲು ನಿರ್ಧರಿಸಿದೆ. ಅದು ಕೂಡ ಭಾರತದಲ್ಲೇ ಎಂಬುದು ವಿಶೇಷ.
ಹೌದು, ಏಕದಿನ ವಿಶ್ವಕಪ್ ಆರಂಭಕ್ಕೂ ಮುನ್ನ ಸೆಪ್ಟೆಂಬರ್ನಲ್ಲಿ ಆಸ್ಟ್ರೇಲಿಯಾ ತಂಡ 3 ಪಂದ್ಯಗಳ ಏಕದಿನ ಸರಣಿ ಆಡಲು ಭಾರತಕ್ಕೆ ಬರಲಿದೆ. ಈ ಸರಣಿಯು ಉಭಯ ತಂಡಗಳಿಗೂ ವಿಶ್ವಕಪ್ ಪೂರ್ವಭಾವಿ ಅಭ್ಯಾಸ ಎಂದರೆ ತಪ್ಪಾಗಲಾರದು.
ಆದರೆ ಮತ್ತೊಂದೆಡೆ ತನ್ನ ಮೊದಲ ಎದುರಾಳಿ ಆಸ್ಟ್ರೇಲಿಯಾ ವಿರುದ್ಧವೇ ಸೆಪ್ಟೆಂಬರ್ನಲ್ಲಿ ಬಿಸಿಸಿಐ ಸರಣಿ ಆಯೋಜಿಸುತ್ತಿರುವುದು ಅಚ್ಚರಿಗೆ ಕಾರಣವಾಗಿದೆ. ಏಕೆಂದರೆ ಇಲ್ಲಿ ಈ ಸರಣಿಯಲ್ಲಿ ಟೀಮ್ ಇಂಡಿಯಾ ಮೇಲುಗೈ ಸಾಧಿಸುವುದಕ್ಕಿಂತಲೂ ಹೆಚ್ಚಾಗಿ ಆಸ್ಟ್ರೇಲಿಯಾ ತಂಡವು ಭಾರತದ ಪರಿಸ್ಥಿತಿಗೆ ಹೆಚ್ಚು ಹೊಂದಿಕೊಳ್ಳಲಿದೆ.
ಅದರಲ್ಲೂ ಮಾರ್ಚ್ನಲ್ಲಿ ಭಾರತದಲ್ಲಿ ನಡೆದ 3 ಪಂದ್ಯಗಳ ಸರಣಿಯನ್ನು ಆಸ್ಟ್ರೇಲಿಯಾ ತಂಡವು 2-1 ಅಂತರದಿಂದ ಗೆದ್ದುಕೊಂಡಿತು. ಇದೀಗ ಏಕದಿನ ವಿಶ್ವಕಪ್ ಆರಂಭಕ್ಕೆ ಕೆಲವೇ ದಿನಗಳಿರುವಾಗ ಸೆಪ್ಟೆಂಬರ್ನಲ್ಲಿ ಮತ್ತೆ 3 ಪಂದ್ಯಗಳ ಸರಣಿ ಆಯೋಜಿಸಲು ಬಿಸಿಸಿಐ ಮುಂದಾಗಿರುವುದು ಅಚ್ಚರಿಗೆ ಕಾರಣವಾಗಿದೆ.
ಒಟ್ಟಿನಲ್ಲಿ ವಿಶ್ವಕಪ್ಗೂ ಮುನ್ನ ಬಲಿಷ್ಠ ತಂಡದ ವಿರುದ್ಧ ಕಣಕ್ಕಿಳಿದು ಆತ್ಮ ವಿಶ್ವಾಸ ಹೆಚ್ಚಿಸಿಕೊಳ್ಳಲು ಹೊರಟಿರುವ ಟೀಮ್ ಇಂಡಿಯಾದ ಈ ಮಾಸ್ಟರ್ ಪ್ಲ್ಯಾನ್ ತಿರುಗುಬಾಣವಾಗಲಿದೆಯಾ ಕಾದು ನೋಡಬೇಕಿದೆ.