IND vs ENG 2nd Test: ಟೀಮ್ ಇಂಡಿಯಾದ ನಾಲ್ವರು ಸ್ಟಾರ್ ಆಟಗಾರರು ಅಲಭ್ಯ
TV9 Web | Updated By: ಝಾಹಿರ್ ಯೂಸುಫ್
Updated on:
Jan 30, 2024 | 11:06 AM
India vs England 2nd Test: ಭಾರತ ಮತ್ತು ಇಂಗ್ಲೆಂಡ್ ನಡುವಣ ಐದು ಪಂದ್ಯಗಳ ಟೆಸ್ಟ್ ಸರಣಿಯ ದ್ವಿತೀಯ ಮ್ಯಾಚ್ ಫೆಬ್ರವರಿ 2 ರಿಂದ ಶುರುವಾಗಲಿದೆ. ವಿಶಾಖಪಟ್ಟಣದಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಭಾರತ ತಂಡದ ನಾಲ್ವರು ಸ್ಟಾರ್ ಆಟಗಾರರು ಅಲಭ್ಯರಾಗಿದ್ದಾರೆ.
1 / 7
ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಸೋತಿರುವ ಟೀಮ್ ಇಂಡಿಯಾ ಇದೀಗ ದ್ವಿತೀಯ ಪಂದ್ಯಕ್ಕೆ ಸಜ್ಜಾಗುತ್ತಿದೆ. ಶುಕ್ರವಾರದಿಂದ ಶುರುವಾಗಲಿರುವ ಈ ಪಂದ್ಯಕ್ಕೆ ವಿಶಾಖಪಟ್ಟಣದ ವೈಸ್ಎಸ್ ರಾಜಶೇಖರ ರೆಡ್ಡಿ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವಹಿಸಲಿದೆ. ಆದರೆ ಈ ಪಂದ್ಯಕ್ಕೆ ಟೀಮ್ ಇಂಡಿಯಾದ ನಾಲ್ವರು ಆಟಗಾರರು ಅಲಭ್ಯರಾಗಿದ್ದಾರೆ. ಆ ಆಟಗಾರರು ಯಾರೆಂದರೆ....
2 / 7
1- ವಿರಾಟ್ ಕೊಹ್ಲಿ: ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಮೊದಲೆರಡು ಟೆಸ್ಟ್ ಪಂದ್ಯಗಳಿಂದ ಹೊರಗುಳಿದಿದ್ದಾರೆ. ವೈಯುಕ್ತಿಕ ಕಾರಣಗಳಿಂದಾಗಿ ಕಿಂಗ್ ಕೊಹ್ಲಿ ದ್ವಿತೀಯ ಟೆಸ್ಟ್ ಪಂದ್ಯಕ್ಕೂ ಅಲಭ್ಯರಾಗಿದ್ದಾರೆ.
3 / 7
2- ಮೊಹಮ್ಮದ್ ಶಮಿ: ಪಾದದ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಮೊಹಮ್ಮದ್ ಶಮಿ ದ್ವಿತೀಯ ಟೆಸ್ಟ್ ಪಂದ್ಯದಲ್ಲೂ ಕಾಣಿಸಿಕೊಳ್ಳುವುದಿಲ್ಲ. ಸದ್ಯ ಚಿಕಿತ್ಸೆ ಪಡೆಯುತ್ತಿರುವ ಶಮಿ 3ನೇ ಅಥವಾ 4ನೇ ಟೆಸ್ಟ್ ಪಂದ್ಯದ ವೇಳೆ ಟೀಮ್ ಇಂಡಿಯಾವನ್ನು ಕೂಡಿಕೊಳ್ಳಬಹುದು.
4 / 7
3- ರವೀಂದ್ರ ಜಡೇಜಾ: ಮೊದಲ ಟೆಸ್ಟ್ ಪಂದ್ಯದ ವೇಳೆ ಮಂಡಿರಜ್ಜು ಗಾಯದ ಸಮಸ್ಯೆಗೆ ಒಳಗಾಗಿರುವ ರವೀಂದ್ರ ಜಡೇಜಾ ಇದೀಗ ದ್ವಿತೀಯ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ. ಹೀಗಾಗಿ ಅವರು ಕೂಡ ಫೆಬ್ರವರಿ 2 ರಿಂದ ಶುರುವಾಗುವ 2ನೇ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.
5 / 7
4- ಕೆಎಲ್ ರಾಹುಲ್: ತೊಡೆಸಂಧು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಕೆಎಲ್ ರಾಹುಲ್ ಕೂಡ ದ್ವಿತೀಯ ಟೆಸ್ಟ್ ಪಂದ್ಯದಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ವಿಶಾಖಪಟ್ಟಣ ಟೆಸ್ಟ್ನಲ್ಲಿ ಟೀಮ್ ಇಂಡಿಯಾ ಪರ ಹೊಸ ಆಟಗಾರ ಕಣಕ್ಕಿಳಿಯಲಿದ್ದಾರೆ.
6 / 7
ಇಲ್ಲಿ ವಿರಾಟ್ ಕೊಹ್ಲಿ ಬದಲಿಗೆ ರಜತ್ ಪಾಟಿದಾರ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಹಾಗೆಯೇ ಮೊಹಮ್ಮದ್ ಶಮಿ ಸ್ಥಾನದಲ್ಲಿ ಅವೇಶ್ ಖಾನ್ ತಂಡದಲ್ಲಿದ್ದಾರೆ. ಹಾಗೆಯೇ ಕೆಎಲ್ ರಾಹುಲ್ ಹಾಗೂ ರವೀಂದ್ರ ಜಡೇಜಾ ಸ್ಥಾನಗಳಲ್ಲಿ ಸರ್ಫರಾಝ್ ಖಾನ್ ಮತ್ತು ವಾಷಿಂಗ್ಟನ್ ಸುಂದರ್ ಟೀಮ್ ಇಂಡಿಯಾಗೆ ಆಯ್ಕೆಯಾಗಿದ್ದಾರೆ. ಇವರ ಜೊತೆಗೆ ಹೆಚ್ಚುವರಿ ಸ್ಪಿನ್ನರ್ ಆಗಿ ಸೌರಭ್ ಕುಮಾರ್ ಕೂಡ ದ್ವಿತೀಯ ಟೆಸ್ಟ್ಗೂ ಮುನ್ನ ಟೀಮ್ ಇಂಡಿಯಾವನ್ನು ಕೂಡಿಕೊಳ್ಳಲಿದ್ದಾರೆ.
7 / 7
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಕೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ, ಸರ್ಫರಾಝ್ ಖಾನ್, ವಾಷಿಂಗ್ಟನ್ ಸುಂದರ್, ಸೌರಭ್ ಕುಮಾರ್.
Published On - 7:33 am, Tue, 30 January 24