- Kannada News Photo gallery Cricket photos India will lock horns against South Africa today in the 3rd ODI match at the Arun Jaitley Stadium, Delhi
IND vs SA 3rd ODI: ನಿರ್ಣಾಯಕ ಕದನಕ್ಕೆ ಟೀಮ್ ಇಂಡಿಯಾ ಭರ್ಜರಿ ತಯಾರಿ: ಫೋಟೋ ನೋಡಿ
ಹೆಚ್ಚು ಯುವ ಆಟಗಾರರಿಂದಲೇ ಕೂಡಿರುವ ಟೀಮ್ ಇಂಡಿಯಾಕ್ಕೆ (Team India) ಇದೊಂದು ಅಗ್ನಿಪರೀಕ್ಷೆಯಾಗಿದೆ. ಅಲ್ಲದೆ ಸತತ ವೈಫಲ್ಯ ಅನುಭವಿಸುತ್ತಿರುವ ನಾಯಕ ಶಿಖರ್ ಧವನ್ (Shikhar Dhawan) ಮೇಲೂ ಒತ್ತಡವಿದೆ.
Updated on:Oct 11, 2022 | 9:59 AM

ದಕ್ಷಿಣ ಆಫ್ರಿಕಾ ವಿರುದ್ಧದ ಪ್ರಥಮ ಏಕದಿನ ಪಂದ್ಯದಲ್ಲಿ ಸೋಲು ಕಂಡ ಭಾರತ (India vs South Africa) ತಂಡ ಬಳಿಕ ದ್ವಿತೀಯ ಪಂದ್ಯದಲ್ಲಿ 7 ವಿಕೆಟ್ಗಳ ಭರ್ಜರಿ ಜಯದೊಂದಿಗೆ ಕಮ್ಬ್ಯಾಕ್ ಮಾಡಿತ್ತು. ಈ ಮೂಲಕ 1-1 ಅಂಕಗಳ ಸಮಬಲ ಸಾಧಿಸಿತ್ತು. ಇದೀಗ ನಿರ್ಣಾಯಕ ಕದನಕ್ಕೆ ಉಭಯ ತಂಡಗಳು ಸಜ್ಜಾಗುತ್ತಿದೆ. ಇಂದು ಡೆಲ್ಲಿಯ ಅರುಣ್ ಜೆಟ್ಲಿ ಸ್ಟೇಡಿಯಂನಲ್ಲಿ ಮೂರನೇ ಏಕದಿನ ಪಂದ್ಯ ಆಯೋಜಿಸಲಾಗಿದೆ.

ಭಾರತ ಬ್ಯಾಟಿಂಗ್ ವಿಭಾಗ ಬಲಿಷ್ಠವಾಗಿದ್ದರೂ ಓಪನರ್ಗಳು ಸಂಪೂರ್ಣ ಎಡವುತ್ತಿದ್ದಾರೆ. ನಾಯಕ ಶಿಖರ್ ಧವನ್ ಹಾಗೂ ಶುಭ್ಮನ್ ಗಿಲ್ ಆಡಿದ ಎರಡೂ ಪಂದ್ಯಗಳಲ್ಲಿ ಉತ್ತಮ ಆರಂಭ ಒದಗಿಸಿಲ್ಲ. ಇಂದು ಇವರಿಬ್ಬರಿಗೂ ಒತ್ತಡವಿದೆ.

ಇಶಾನ್ ಕಿಶನ್ ತಮಗೆ ಸಿಕ್ಕ ಮತ್ತೊಂದು ಅವಕಾಶವನ್ನು ಚೆನ್ನಾಗಿ ಉಪಯೋಗಿಸಿಕೊಂಡಿದ್ದಾರೆ.

ಶ್ರೇಯಸ್ ಅಯ್ಯರ್ ಮತ್ತು ಸಂಜು ಸ್ಯಾಮ್ಸನ್ ಭರ್ಜರಿ ಫಾರ್ಮ್ನಲ್ಲಿದ್ದಾರೆ. ಅಯ್ಯರ್ ಕಳೆದ ಪಂದ್ಯದಲ್ಲಿ ಶತಕ ಸಿಡಿಸಿ ಮಿಂಚಿದ್ದರು.

ಇಂದಿನ ಪಂದ್ಯಕ್ಕೆ ಫಾರ್ಮ್ನಲ್ಲಿ ಇಲ್ಲದ ಶುಭ್ಮನ್ ಗಿಲ್ ಜಾಗಕ್ಕೆ ರುತುರಾಜ್ ಗಾಯಕ್ವಾಡ್ ಆಯ್ಕೆಯಾದರೆ ಅಚ್ಚರಿ ಪಡಬೇಕಿಲ್ಲ.

ಶಾರ್ದೂಲ್ ಥಾಕೂರ್ ಕೈಲಾದಷ್ಟು ಕೊಡುಗೆ ನೀಡುತ್ತಿದ್ದಾರೆ. ಮೊಹಮ್ಮದ್ ಸಿರಾಜ್ ಮಾರಕವಾಗಿ ಗೋಚರಿಸುತ್ತಿದ್ದಾರೆ.

ಕುಲ್ದೀಪ್ ಯಾದವ್ ಹಾಗೂ ವಾಷಿಂಗ್ಟನ್ ಸುಂದರ್ ಸ್ಪಿನ್ ಕೆಲಸ ಮಾಡಬೇಕಿದೆ.

ಅಂಕಿಅಂಶಗಳನ್ನು ಗಮನಿಸುವುದಾದರೆ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಭಾರತ 3 ನೇ ಸ್ಥಾನದಲ್ಲಿದರೆ, ದಕ್ಷಿಣ ಆಫ್ರಿಕಾ 6 ನೇ ಸ್ಥಾನದಲ್ಲಿದೆ. ಈ ಎರಡೂ ತಂಡಗಳು ಇದುವರೆಗೆ 89 ಏಕದಿನ ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ದಕ್ಷಿಣ ಆಫ್ರಿಕಾ 50 ಪಂದ್ಯಗಳನ್ನು ಗೆದ್ದಿದರೆ, ಭಾರತ 36 ಪಂದ್ಯಗಳನ್ನು ಗೆದ್ದಿದೆ. ಉಳಿದ 3 ಪಂದ್ಯಗಳು ಮಳೆಯಿಂದ ರದ್ದಾಗಿವೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಈ ಪಂದ್ಯ ಮಧ್ಯಾಹ್ನ 1.30ಕ್ಕೆ ಆರಂಭವಾಗಲಿದೆ. ಇದಕ್ಕೂ ಅರ್ಧ ಗಂಟೆ ಮೊದಲು ಅಂದರೆ ಮಧ್ಯಾಹ್ನ 1 ಗಂಟೆಗೆ ಟಾಸ್ ನಡೆಯಲಿದೆ. ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ವಿವಿಧ ಭಾಷೆಗಳಲ್ಲಿ ವೀಕ್ಷಿಸಬಹುದು.

ಭಾರತ: ಶಿಖರ್ ಧವನ್ (ನಾಯಕ), ರುತುರಾಜ್ ಗಾಯಕ್ವಾಡ್, ಶುಭ್ಮನ್ ಗಿಲ್, ಶ್ರೇಯಸ್ ಅಯ್ಯರ್, ರಜತ್ ಪಾಟಿದಾರ್, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ರವಿ ಬಿಷ್ಣೋಯ್, ಮುಖೇಶ್ ಕುಮಾರ್, ಅವೇಶ್ ಖಾನ್, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್.
Published On - 9:59 am, Tue, 11 October 22
