- TV9 Kannada Photo gallery Cricket photos Asian Games Cricket: India Women Clinch Gold! Smriti Mandhana First Woman to Score 11,000 Runs
ಏಷ್ಯನ್ ಗೇಮ್ಸ್ ಫೈನಲ್; ವಿಶ್ವದಾಖಲೆ ಸೃಷ್ಟಿಸಿದ ಸ್ಮೃತಿ ಮಂಧಾನ
ಏಷ್ಯನ್ ಗೇಮ್ಸ್ ಕ್ರಿಕೆಟ್‌ನಲ್ಲಿ ಭಾರತ ಮಹಿಳಾ ತಂಡ ಸತತ ಎರಡನೇ ಚಿನ್ನ ಗೆದ್ದಿದೆ. ಶ್ರೀಲಂಕಾ ವಿರುದ್ಧ 147 ರನ್‌ಗಳ ಭರ್ಜರಿ ಜಯ ಸಾಧಿಸಿದ ಭಾರತ ತಂಡ, ಹಾಲಿ ಚಾಂಪಿಯನ್ ಪಟ್ಟ ಉಳಿಸಿಕೊಂಡಿತು. ಸ್ಮೃತಿ ಮಂಧಾನ 79 ರನ್ ಗಳಿಸಿ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 11,000 ರನ್‌ಗಳ ವಿಶ್ವದಾಖಲೆ ಸೃಷ್ಟಿಸಿದರು. ಶಫಾಲಿ ವರ್ಮಾ ಕೂಡ ಉತ್ತಮ ಇನ್ನಿಂಗ್ಸ್ ಆಡಿದರು. ಇದು ಭಾರತಕ್ಕೆ ಹೆಮ್ಮೆಯ ಕ್ಷಣ.
Updated on: Sep 22, 2026 | 2:56 PM

ಜಪಾನ್‌ನಲ್ಲಿ ನಡೆದ ಏಷ್ಯನ್ ಗೇಮ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಹಾಲಿ ಚಾಂಪಿಯನ್ ಭಾರತ ಮಹಿಳಾ ತಂಡ, ಶ್ರೀಲಂಕಾ ಮಹಿಳಾ ತಂಡವನ್ನು ಬರೋಬ್ಬರಿ 147 ರನ್ಗಳಿಂದ ಮಣಿಸಿ ಸತತ ಎರಡನೇ ಬಾರಿಗೆ ಏಷ್ಯನ್ ಗೇಮ್ಸ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 216 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಶ್ರೀಲಂಕಾ ಕೇವಲ 69 ರನ್ ಕಲೆಹಾಕಲಷ್ಟೇ ಶಕ್ತವಾಯಿತು(PC-BCCI Women x).

ಟೀಂ ಇಂಡಿಯಾದ ಈ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಸ್ಟಾರ್ ಓಪನರ್ ಸ್ಮೃತಿ ಮಂಧಾನ ಅದ್ಭುತ ಪ್ರದರ್ಶನ ನೀಡುವ ಮೂಲಕ ಇತಿಹಾಸ ಸೃಷ್ಟಿಸಿದರು. ಈ ಚಿನ್ನದ ಪದಕದ ಪಂದ್ಯದಲ್ಲಿ 79 ರನ್‌ಗಳ ಇನ್ನಿಂಗ್ಸ್ ಆಡಿದ ಸ್ಮೃತಿ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 11,000 ರನ್‌ಗಳ ಮೈಲಿಗಲ್ಲನ್ನು ದಾಟಿದರು(PC-BCCI Women x).

ಈ ಮೂಲಕ ಮಹಿಳಾ ಅಂತರರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ ಈ ಸಾಧನೆ ಮಾಡಿದ ವಿಶ್ವದ ಮೊದಲ ಮಹಿಳಾ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಸ್ಮೃತಿ ಮಂಧಾನ ಪಾತ್ರರಾದರು. ಈ ಪಂದ್ಯಕ್ಕೂ ಮುನ್ನ, ಈ ಅಪರೂಪದ ದಾಖಲೆಯನ್ನು ತಲುಪಲು ಸ್ಮೃತಿ ಮಂಧಾನ ಅವರಿಗೆ ಕೇವಲ 13 ರನ್‌ಗಳು ಬೇಕಾಗಿದ್ದವು. ಕೇವಲ 10 ಎಸೆತಗಳಲ್ಲಿ 13 ರನ್ಗಳನ್ನ ಕಲೆಹಾಕುವ ಮೂಲಕ ಸ್ಮೃತಿ ಈ ಐತಿಹಾಸಿಕ ಸಾಧನೆ ಮಾಡಿದರು(PC-BCCI Women x).

ಈ ಪಂದ್ಯದಲ್ಲಿ, ಸ್ಮೃತಿ ಮಂಧಾನಾ 79 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದರು. ಅವರ ಈ ಇನ್ನಿಂಗ್ಸ್‌ನಲ್ಲಿ 5 ಬೌಂಡರಿಗಳು ಮತ್ತು 7 ಬೃಹತ್ ಸಿಕ್ಸರ್‌ಗಳು ಸೇರಿದ್ದವು. ಈ ಮೂಲಕ ಸ್ಮೃತಿ ತಮ್ಮ ವೃತ್ತಿಜೀವನದಲ್ಲಿ 37 ನೇ ಟಿ20 ಅಂತರರಾಷ್ಟ್ರೀಯ ಅರ್ಧಶತಕವನ್ನು ಪೂರ್ಣಗೊಳಿಸಿದರು(PC-BCCI Women x).

ಈ ಪಂದ್ಯದಲ್ಲಿ ಸ್ಮೃತಿ ಜೊತೆಗೆ ಮತ್ತೊಬ್ಬ ಆರಂಭಿಕ ಆಟಗಾರ್ತಿ ಶಫಾಲಿ ವರ್ಮಾ ಕೂಡ ಸ್ಫೋಟಕ ಇನ್ನಿಂಗ್ಸ್ ಕಟ್ಟಿದರು. ಸೆಮಿಫೈನಲ್ ಪಂದ್ಯದಲ್ಲಿ ಅಬ್ಬರದ ಶತಕ ಬಾರಿಸಿದ್ದ ಶಫಾಲಿ ಈ ಪಂದ್ಯದಲ್ಲಿ ಕೇವಲ 29 ಎಸೆತಗಳಲ್ಲಿ 48 ರನ್ ಕಲೆಹಾಕಿದರು. ಇದರ ಜೊತೆಗೆ ಮೊದಲ ವಿಕೆಟ್‌ಗೆ 99 ರನ್‌ಗಳ ಬೃಹತ್ ಪಾಲುದಾರಿಕೆಯನ್ನು ಹಂಚಿಕೊಂಡರು(PC-BCCI Women x).




