India Women vs West Indies Women: ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಮ್ಯಾಚ್ನಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಸ್ಮೃತಿ ಮಂಧಾನ (91) ಅವರ ಅರ್ಧಶತಕದ ನೆರವಿನಿಂದ 314 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ವೆಸ್ಟ್ ಇಂಡೀಸ್ ತಂಡವು ರೇಣುಕಾ ಸಿಂಗ್ (5 ವಿಕೆಟ್) ಅವರ ಮಾರಕ ದಾಳಿಗೆ ತತ್ತರಿಸಿ ಕೇವಲ 103 ರನ್ಗಳಿಗೆ ಆಲೌಟ್ ಆಗಿದೆ.