AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND-W vs SL-W: ಶತಕ ವಂಚಿತರಾದರೂ ತಮ್ಮದೇ ಹಳೆಯ ದಾಖಲೆ ಮುರಿದ ಸ್ಮೃತಿ- ಶಫಾಲಿ

India Women Set New T20I Record: ತಿರುವನಂತಪುರಂನಲ್ಲಿ ಶ್ರೀಲಂಕಾ ವಿರುದ್ಧ ಭಾರತ ಮಹಿಳಾ ತಂಡ ಟಿ20ಯಲ್ಲಿ 221 ರನ್ ಗಳಿಸಿ ಹೊಸ ದಾಖಲೆ ನಿರ್ಮಿಸಿತು. ಸ್ಮೃತಿ ಮಂಧಾನ ಮತ್ತು ಶಫಾಲಿ ವರ್ಮಾ 162 ರನ್​ಗಳ ಐತಿಹಾಸಿಕ ಜೊತೆಯಾಟ ನಡೆಸಿ, ಇದು ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಭಾರತದ ಗರಿಷ್ಠ ಮೊದಲ ವಿಕೆಟ್ ಜೊತೆಯಾಟವಾಯಿತು. ಇಬ್ಬರೂ ಮಹಿಳಾ ಟಿ20ಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಜೋಡಿಯೂ ಹೌದು.

ಪೃಥ್ವಿಶಂಕರ
|

Updated on: Dec 28, 2025 | 9:15 PM

Share
ತಿರುವನಂತಪುರಂನಲ್ಲಿ ಶ್ರೀಲಂಕಾ ವಿರುದ್ಧ ನಡೆದ ನಾಲ್ಕನೇ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ನಿಗದಿತ 20 ಓವರ್​ಗಳಲ್ಲಿ ದಾಖಲೆಯ 221 ರನ್ ಕಲೆಹಾಕಿತು. ಇದು ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಟೀಂ ಇಂಡಿಯಾ ಕಲೆಹಾಕಿದ ಅತ್ಯಧಿಕ ಮೊತ್ತ ಎಂಬ ದಾಖಲೆಯನ್ನು ಬರೆಯಿತು. ಟೀಂ ಇಂಡಿಯಾದ ಈ ಸಾಧನೆಗೆ ಕಾರಣವಾಗಿದ್ದು, ತಂಡದ ಆರಂಭಿಕ ಜೋಡಿ.

1 / 6
ಈ ಪಂದ್ಯದಲ್ಲಿ ಆರಂಭದಿಂದಲೂ ಅಬ್ಬರಿಸಿದ ಸ್ಮೃತಿ ಮಂಧಾನ ಹಾಗೂ ಶಫಾಲಿ ವರ್ಮಾ ಮೊದಲ ವಿಕೆಟ್​ಗೆ ದಾಖಲೆಯ 162 ರನ್​ಗಳ ಜೊತೆಯಾಟ ಕಟ್ಟಿದರು. ಇದು ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಭಾರತದ ಆರಂಭಿಕ ಜೋಡಿ ಮೊದಲ ವಿಕೆಟ್​ಗೆ ಕಲೆಹಾಕಿದ ಅತ್ಯಧಿಕ ರನ್​ಗಳ ಜೊತೆಯಾಟ ಎಂಬ ದಾಖಲೆಯನ್ನು ಬರೆಯಿತು.

2 / 6
ಇದು ಮಾತ್ರವಲ್ಲದೆ ಸ್ಮೃತಿ ಮಂಧಾನ ಹಾಗೂ ಶಫಾಲಿ ವರ್ಮಾಗೆ ಶತಕ ಬಾರಿಸುವ ಅವಕಾಶವಿತ್ತು ಆದರೆ ಅದು ಸಾಧ್ಯವಾಗಲಿಲ್ಲ. ಆದಾಗ್ಯೂ, ಸ್ಮೃತಿ ಮತ್ತು ಶಫಾಲಿ ವರ್ಮಾ ಅಮೋಘ ಜೊತೆಯಾಟದ ಮೂಲಕ ತಮ್ಮದೇ ಆದ ದಾಖಲೆಯನ್ನು ಮುರಿದು ಹೊಸ ದಾಖಲೆ ಸೃಷ್ಟಿಸಿದರು.

3 / 6
ಈ ಪಂದ್ಯದಲ್ಲಿ ಶಫಾಲಿ 46 ಎಸೆತಗಳಲ್ಲಿ 12 ಬೌಂಡರಿ ಮತ್ತು ಒಂದು ಸಿಕ್ಸರ್‌ ಸಹಿತ 79 ರನ್ ಬಾರಿಸಿದರೆ, ಏತನ್ಮಧ್ಯೆ, ಸ್ಮೃತಿ ಮಂಧಾನ 48 ಎಸೆತಗಳಲ್ಲಿ 11 ಬೌಂಡರಿ ಮತ್ತು ಮೂರು ಸಿಕ್ಸರ್‌ಗಳೊಂದಿಗೆ 80 ರನ್​ಗಳ ಇನ್ನಿಂಗ್ಸ್ ಆಡಿದರು.

4 / 6
ಈ ಮೂಲಕ ಇವರಿಬ್ಬರು ಮೊದಲ ವಿಕೆಟ್‌ಗೆ 162 ರನ್‌ಗಳನ್ನು ಸೇರಿಸುವ ಮೂಲಕ ತಮ್ಮ ಹಿಂದಿನ ದಾಖಲೆಯನ್ನು ಮುರಿದರು. ಈ ಪಾಲುದಾರಿಕೆಯು ಮಹಿಳಾ ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಯಾವುದೇ ವಿಕೆಟ್‌ಗೆ ಭಾರತದ ಅತ್ಯಧಿಕ ಪಾಲುದಾರಿಕೆಯಾಗಿದೆ. ಇದಕ್ಕೂ ಮೊದಲು, ಇಬ್ಬರಿಬ್ಬರು 2019 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 142 ರನ್‌ಗಳ ಜೊತೆಯಾಟ ಕಟ್ಟಿದ್ದರು.

5 / 6
ಇದರ ಜೊತೆಗೆ ಮಹಿಳಾ ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದ ಜೋಡಿಗಳ ಪಟ್ಟಿಯಲ್ಲಿ ಮಂಧಾನ ಮತ್ತು ಶಫಾಲಿ ನಂ. 1 ಸ್ಥಾನವನ್ನು ಹೊಂದಿದ್ದಾರೆ. ಒಟ್ಟಾಗಿ, ಇವರಿಬ್ಬರು 3,107 ರನ್ ಕಲೆಹಾಕಿದ್ದಾರೆ. ಈ ಜೋಡಿಯ ನಂತರ ಆಸ್ಟ್ರೇಲಿಯಾದ ಅಲಿಸಾ ಹೀಲಿ ಮತ್ತು ಬೆತ್ ಮೂನಿ ತಲಾ 2,720 ರನ್​ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.

6 / 6
Follow Us
10 ಸಾವಿರ ಜನರಿಗೆ ವಿಷ್ಣುವರ್ಧನ್ ಅಭಿಮಾನಿಗಳಿಂದ ವೆಜ್, ನಾನ್-ವೆಜ್ ಊಟ

ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್

ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!

ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ

ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ

‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ

ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ

ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು

ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು

ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು