AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಆಸ್ಟ್ರೇಲಿಯಾದಲ್ಲಿ ಅಬ್ಬರಿಸಿ ದಾಖಲೆ ಬರೆದ ಸ್ಮೃತಿ ಮಂಧಾನ

Smriti Mandhana T20 Record: ಭಾರತ-ಆಸ್ಟ್ರೇಲಿಯಾ ಮಹಿಳಾ ಟಿ20 ಸರಣಿಯ ನಿರ್ಣಾಯಕ ಪಂದ್ಯದಲ್ಲಿ ಸ್ಮೃತಿ ಮಂಧಾನ ಅಬ್ಬರದ 82 ರನ್ ಸಿಡಿಸಿ ದಾಖಲೆ ಬರೆದಿದ್ದಾರೆ. ಆಸ್ಟ್ರೇಲಿಯಾ ನೆಲದಲ್ಲಿ 80+ ರನ್ ಗಳಿಸಿದ ಮೊದಲ ಭಾರತೀಯ ಬ್ಯಾಟರ್ ಹಾಗೂ 500ಕ್ಕೂ ಹೆಚ್ಚು ರನ್ ಕಲೆಹಾಕಿದ ಮೊದಲ ಮಹಿಳಾ ಆಟಗಾರ್ತಿ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಅವರ ಈ ಅಮೋಘ ಇನ್ನಿಂಗ್ಸ್ ತಂಡಕ್ಕೆ ಬಲ ನೀಡಿದೆ.

ಪೃಥ್ವಿಶಂಕರ
|

Updated on: Feb 21, 2026 | 4:29 PM

Share
2026 ರ ಐಸಿಸಿ ಮಹಿಳಾ ಟಿ20 ವಿಶ್ವಕಪ್‌ಗೆ ತಯಾರಿ ನಡೆಸುತ್ತಿರುವ ಟೀಂ ಇಂಡಿಯಾ, ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡುತ್ತಿದೆ. ಸರಣಿಯಲ್ಲಿ ಈಗಾಗಲೇ 2 ಪಂದ್ಯಗಳು ನಡೆದಿದ್ದು ಉಭಯ ತಂಡಗಳು ತಲಾ ಒಂದೊಂದು ಪಂದ್ಯವನ್ನು ಗೆದ್ದಿವೆ. ಇದೀಗ ಸರಣಿ ನಿರ್ಧಾರಕ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಪರ ಸ್ಟಾರ್ ಓಪನರ್ ಸ್ಮೃತಿ ಮಂಧಾನ ಅಬ್ಬರದ ಇನ್ನಿಂಗ್ಸ್ ಆಡಿ ದಾಖಲೆ ಬರೆದಿದ್ದಾರೆ.

1 / 7
ಟಿ20 ಸರಣಿಯಲ್ಲಿ ದೊಡ್ಡ ಸ್ಕೋರ್ ಗಳಿಸಲು ವಿಫಲರಾಗಿದ್ದ ಮಂಧಾನ ಅಡಿಲೇಡ್‌ನಲ್ಲಿ ನಡೆದ ಮೂರನೇ ಪಂದ್ಯದಲ್ಲಿ ಅದ್ಭುತ ಅರ್ಧಶತಕ ಗಳಿಸುವ ಮೂಲಕ ತಮ್ಮ ಛಾಪು ಮೂಡಿಸಿದರು. ಈ ಪಂದ್ಯದಲ್ಲಿ ಸ್ಮೃತಿಗೆ ಶತಕ ಬಾರಿಸುವ ಅವಕಾಶವೂ ಸಿಕ್ಕಿತ್ತು. ಆದರೆ 82 ರನ್​ಗಳಿಗೆ ವಿಕೆಟ್ ಒಪ್ಪಿಸಿ ಶತಕ ವಂಚಿತರಾದರು. ಆದಾಗ್ಯೂ 82 ರನ್ ಬಾರಿಸುವ ಮೂಲಕ ವಿಶೇಷ ದಾಖಲೆಯನ್ನು ನಿರ್ಮಿಸಿದರು.

2 / 7
ಫೆಬ್ರವರಿ 21 ರ ಶನಿವಾರ ಅಡಿಲೇಡ್ ಓವಲ್‌ನಲ್ಲಿ ನಡೆದ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ಮತ್ತೆ ಮೊದಲು ಬ್ಯಾಟಿಂಗ್ ಮಾಡಿತು. ಹಿಂದಿನ ಪಂದ್ಯದಲ್ಲಿ ಮಂಧಾನಾ ಕೇವಲ 31 ರನ್ ಗಳಿಸಿದ್ದರು, ಆದರೆ ಈ ಬಾರಿ ಅಮೋಘ ಪ್ರದರ್ಶನ ನೀಡಿದ ಮಂಧಾನ ತಮ್ಮ 35ನೇ ಟಿ20 ಅರ್ಧಶತಕವನ್ನೂ ಪೂರ್ಣಗೊಳಿಸಿದರು. ಮಾತ್ರವಲ್ಲದೆ ಮಂಧಾನ, ಜೆಮಿಮಾ ರೊಡ್ರಿಗಸ್ ಜೊತೆಗೂಡಿ ಉತ್ತಮಜೊತೆಯಾಟವನ್ನು ಕಟ್ಟಿದರು.

3 / 7
38 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಬಳಿಕ ಬ್ಯಾಟಿಂಗ್ ಗೇರ್ ಬದಲಿಸಿದ ಮಂಧಾನ, ಮುಂದಿನ 15 ಎಸೆತಗಳಲ್ಲಿ 30 ರನ್‌ ಕಲೆಹಾಕಿದರು. 17 ನೇ ಓವರ್‌ನಲ್ಲಿ ಒಂದು ಸಿಕ್ಸರ್‌ನೊಂದಿಗೆ, ಮಂಧಾನ 80 ರನ್‌ಗಳ ಗಡಿ ದಾಟಿದರು. ಆದರೆ ಮುಂದಿನ ಎಸೆತದಲ್ಲಿ ಮತ್ತೊಂದು ಸಿಕ್ಸ್‌ಗೆ ಪ್ರಯತ್ನಿಸುವಾಗ ಬೌಂಡರಿ ಬಳಿ ಕ್ಯಾಚಿತ್ತು ನಿರ್ಗಮಿಸಿದರು.

4 / 7
ಹೀಗಾಗಿ ಮಂಧಾನಾ ಆಸ್ಟ್ರೇಲಿಯಾ ನೆಲದಲ್ಲಿ ತಮ್ಮ ಮೊದಲ ಟಿ20 ಶತಕವನ್ನು ತಪ್ಪಿಸಿಕೊಂಡರು. 55 ಎಸೆತಗಳಲ್ಲಿ 82 ರನ್ ಬಾರಿಸಿದ ಸ್ಮೃತಿ ಅವರ ಇನ್ನಿಂಗ್ಸ್ ಎಂಟು ಬೌಂಡರಿಗಳು ಮತ್ತು ಮೂರು ಸಿಕ್ಸರ್‌ಗಳನ್ನು ಒಳಗೊಂಡಿತ್ತು. ಹಾಗೆಯೇ ಮಂಧಾನ, ರೋಡ್ರಿಗಸ್ ಜೊತೆಗೆ ಎರಡನೇ ವಿಕೆಟ್‌ಗೆ 121 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡರು.

5 / 7
ಈ ಇನ್ನಿಂಗ್ಸ್‌ ಮೂಲಕ ಸ್ಮೃತಿ ವಿಶೇಷ ದಾಖಲೆಯನ್ನೂ ಬರೆದರು. ಆಸ್ಟ್ರೇಲಿಯಾ ನೆಲದಲ್ಲಿ ಅಂತರರಾಷ್ಟ್ರೀಯ ಟಿ20ಇನ್ನಿಂಗ್ಸ್‌ನಲ್ಲಿ 80 ಕ್ಕೂ ಹೆಚ್ಚು ರನ್ ಗಳಿಸಿದ ಮೊದಲ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. 2016 ರಲ್ಲಿ ಆಸ್ಟ್ರೇಲಿಯಾದಲ್ಲಿ ಮೊದಲ ಬಾರಿಗೆ ಟಿ20 ಪಂದ್ಯವನ್ನಾಡಿದ್ದ ಮಂಧಾನ, 10 ವರ್ಷಗಳ ನಂತರ ಆಸ್ಟ್ರೇಲಿಯಾದಲ್ಲಿ ತಮ್ಮ ಅತಿದೊಡ್ಡ ಟಿ20 ಇನ್ನಿಂಗ್ಸ್ ಆಡಿದರು.

6 / 7
ಇದಲ್ಲದೆ, ಆಸ್ಟ್ರೇಲಿಯಾದಲ್ಲಿ ಅಂತರರಾಷ್ಟ್ರೀಯ ಟಿ20ಕ್ರಿಕೆಟ್​ನಲ್ಲಿ 500 ಕ್ಕೂ ಹೆಚ್ಚು ರನ್ ಗಳಿಸಿದ ಮೊದಲ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾದರು. ಕಾಂಗರೂಗಳ ನಾಡಲ್ಲಿ 18 ಇನ್ನಿಂಗ್ಸ್‌ಗಳನ್ನಾಡಿರುವ ಮಂಧಾನ ನಾಲ್ಕು ಅರ್ಧಶತಕಗಳು ಸೇರಿದಂತೆ 529 ರನ್ ಕಲೆಹಾಕಿದ್ದಾರೆ.

7 / 7
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್

ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!

ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ

ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್

ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ

‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ

ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ

ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!

Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ

ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?