India Women vs Pakistan Women: ಇಂದು ಟೀಮ್ ಇಂಡಿಯಾಗೆ ನಿರ್ಣಾಯಕ ಪಂದ್ಯ

| Updated By: ಝಾಹಿರ್ ಯೂಸುಫ್

Updated on: Oct 06, 2024 | 8:48 AM

India Women vs Pakistan Women: ಮಹಿಳಾ ಟಿ20 ವಿಶ್ವಕಪ್​ನ 7ನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ದುಬೈನಲ್ಲಿ ನಡೆಯಲಿರುವ ಈ ಪಂದ್ಯವು ಸಂಜೆ 3.30 ರಿಂದ ಶುರುವಾಗಲಿದೆ. ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್​ವರ್ಕ್ ಚಾನೆಲ್​ಗಳಲ್ಲಿ ಹಾಗೂ ಡಿಸ್ನಿ ಹಾಟ್ ಸ್ಟಾರ್ ಆ್ಯಪ್​ನಲ್ಲಿ ಲೈವ್ ವೀಕ್ಷಿಸಬಹುದು.

1 / 6
ಭಾರತ ಮತ್ತು ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ. ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು (ಅ.6) ನಡೆಯಲಿರುವ ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ. ಏಕೆಂದರೆ ಭಾರತ ತಂಡವು ಮೊದಲ ಮ್ಯಾಚ್​ನಲ್ಲಿ ನ್ಯೂಝಿಲೆಂಡ್ ವಿರುದ್ಧ 58 ರನ್​ಗಳ ಹೀನಾಯ ಸೋಲನುಭವಿಸಿದೆ.

2 / 6
ಈ ಸೋಲಿನೊಂದಿಗೆ ಗ್ರೂಪ್-ಎ ಅಂಕ ಪಟ್ಟಿಯಲ್ಲಿ 	-2.900 ನೆಟ್​ ರನ್ ರೇಟ್​ನೊಂದಿಗೆ ಕೊನೆಯ ಸ್ಥಾನದಲ್ಲಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ಧ ಭರ್ಜರಿ ಜಯ ಸಾಧಿಸಿದರೆ ಮಾತ್ರ ಟೀಮ್ ಇಂಡಿಯಾ ಸೆಮಿಫೈನಲ್​ ರೇಸ್​ನಲ್ಲಿ ಉಳಿಯಬಹುದು.

3 / 6
ಅತ್ತ ಮೊದಲ ಪಂದ್ಯದಲ್ಲಿ ಶ್ರೀಲಂಕಾ ತಂಡಕ್ಕೆ ಸೋಲುಣಿಸಿರುವ ಪಾಕಿಸ್ತಾನ್ 2 ಅಂಕಗಳೊಂದಿಗೆ +1.550 ನೆಟ್ ರನ್ ರೇಟ್ ಹೊಂದಿದೆ. ಹೀಗಾಗಿ ಇಂದಿನ ಮ್ಯಾಚ್​ನಲ್ಲಿ ಪಾಕ್ ಪಡೆಯನ್ನು ಬಗ್ಗು ಬಡಿದು ಟೀಮ್ ಇಂಡಿಯಾ ಅಂಕ ಪಟ್ಟಿಯಲ್ಲಿ ಮೇಲೇರಬೇಕಾದ ಅನಿವಾರ್ಯತೆ ಇದೆ.

4 / 6
ಒಂದು ವೇಳೆ ಭಾರತ ತಂಡವು ಪಾಕಿಸ್ತಾನ್ ವಿರುದ್ಧ ಕೂಡ ಸೋತರೆ ಸೆಮಿಫೈನಲ್ ಹಾದಿ ಕಠಿಣವಾಗಲಿದೆ. ಏಕೆಂದರೆ ಟೀಮ್ ಇಂಡಿಯಾಗೆ ಇನ್ನುಳಿದಿರುವುದು ಕೇವಲ 2 ಮ್ಯಾಚ್​ಗಳು ಮಾತ್ರ. ಈ ಪಂದ್ಯಗಳಲ್ಲಿ ಜಯ ಸಾಧಿಸಿದರೂ ಒಟ್ಟು 4 ಅಂಕಗಳನ್ನು ಮಾತ್ರ ಸಂಪಾದಿಸಬಹುದು. ಅತ್ತ ಎರಡು ತಂಡಗಳು 6 ಅಂಕಗಳನ್ನು ಕಲೆಹಾಕಿದರೆ ಟೀಮ್ ಇಂಡಿಯಾ ಸೆಮಿಫೈನಲ್​ ರೇಸ್​ನಿಂದ ಹೊರಬೀಳಲಿದೆ. ಹೀಗಾಗಿಯೇ ಇಂದಿನ ಪಂದ್ಯವು ಭಾರತದ ಪಾಲಿಗೆ ನಿರ್ಣಾಯಕ.

5 / 6
ಇನ್ನು ಪಾಕಿಸ್ತಾನ್ ವಿರುದ್ಧ ಟೀಮ್ ಇಂಡಿಯಾ ಜಯ ಸಾಧಿಸಿ ಉಳಿದೆರಡು ಪಂದ್ಯಗಳಲ್ಲೂ ಜಯಭೇರಿ ಬಾರಿಸಿದರೆ ಒಟ್ಟು 6 ಅಂಕಗಳೊಂದಿಗೆ ನೇರವಾಗಿ ಸೆಮಿಫೈನಲ್​ಗೆ ಪ್ರವೇಶಿಸಬಹುದು. ಹಾಗಾಗಿ ಪಾಕ್ ವಿರುದ್ಧದ ಪಂದ್ಯದಲ್ಲಿ ಭಾರತ ತಂಡವು ಅಮೋಘ ಗೆಲುವು ದಾಖಲಿಸುವ ಮೂಲಕ ಸೆಮಿಫೈನಲ್ ರೇಸ್​ನಲ್ಲಿ ಉಳಿಯಬಹುದು.

6 / 6
ಅಂದಹಾಗೆ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಈವರೆಗೆ 15 ಟಿ20 ಪಂದ್ಯಗಳಲ್ಲಿ ಮುಖಾಮುಖಿಯಾಗಿದೆ. ಈ ವೇಳೆ ಟೀಮ್ ಇಂಡಿಯಾ 12 ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೆ, ಪಾಕಿಸ್ತಾನ್ ಗೆದ್ದಿರುವುದು ಕೇವಲ 3 ಪಂದ್ಯಗಳಲ್ಲಿ ಮಾತ್ರ. ಹೀಗಾಗಿ ಇಂದಿನ ಪಂದ್ಯದಲ್ಲೂ ಭಾರತ ತಂಡದ ಗೆಲುವನ್ನು ನಿರೀಕ್ಷಿಸಬಹುದು.

Published On - 8:43 am, Sun, 6 October 24