AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐರ್ಲೆಂಡ್ ವಿರುದ್ಧ ಸೋತ ಟೀಂ ಇಂಡಿಯಾಕ್ಕೆ ಡಬ್ಲ್ಯೂಟಿಸಿಯಲ್ಲಿ ಮುಂಬಡ್ತಿ

ICC World Test Championship: ಇತ್ತೀಚಿನ ಐರ್ಲೆಂಡ್ ವಿರುದ್ಧದ ಟಿ20 ಸರಣಿ ಸೋಲಿನಿಂದ ಭಾರತ ತಂಡ ಟೀಕೆಗೆ ಗುರಿಯಾಗಿತ್ತು. ಆದರೆ, ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ 2025-27ರ ಅಂಕಪಟ್ಟಿಯಲ್ಲಿ ಮಹತ್ವದ ಬದಲಾವಣೆಯು ಭಾರತಕ್ಕೆ ಸಮಾಧಾನ ತಂದಿದೆ. ಶ್ರೀಲಂಕಾ ವೆಸ್ಟ್ ಇಂಡೀಸ್ ವಿರುದ್ಧ ಹೀನಾಯವಾಗಿ ಸೋತ ಕಾರಣ, ಭಾರತ ಅಂಕಪಟ್ಟಿಯಲ್ಲಿ ಐದನೇ ಸ್ಥಾನಕ್ಕೆ ಜಿಗಿದಿದೆ. ಇದು ತಂಡಕ್ಕೆ ಸ್ವಲ್ಪ ಮಟ್ಟಿನ ಸಕಾರಾತ್ಮಕ ಸುದ್ದಿಯಾಗಿದೆ.

ಪೃಥ್ವಿಶಂಕರ
|

Updated on: Jun 29, 2026 | 7:22 PM

Share
ಭಾರತ ಮತ್ತು ಐರ್ಲೆಂಡ್ ನಡುವಿನ ಟಿ20 ಸರಣಿ ಮುಕ್ತಾಯಗೊಂಡಿದೆ. ಎರಡು ಪಂದ್ಯಗಳ ಸರಣಿಯನ್ನು ಆತಿಥೇಯ ಐರಿಶ್ ತಂಡ 2-0 ಅಂತರದಿಂದ ಗೆದ್ದುಕೊಂಡಿದೆ. ಇದಾದ ನಂತರ, ಭಾರತ ತಂಡದ ಮೇಲೆ ಸಾಕಷ್ಟು ಟೀಕೆಗಳು ವ್ಯಕ್ತವಾಗಿವೆ. ಸತತ ಎರಡು ಬಾರಿ ವಿಶ್ವಕಪ್ ಗೆದ್ದ ತಂಡದ ಈ ಸ್ಥಿತಿಯನ್ನು ನೋಡಿ ಅಭಿಮಾನಿಗಳಿಂದ ಹಿಡಿದು ಅನುಭವಿಗಳವರೆಗೆ ಎಲ್ಲರೂ ಆಕ್ರೋಶ ಹೊರಹಾಕುತ್ತಿದ್ದಾರೆ. ಈ ನಡುವೆ ಟೀಂ ಇಂಡಿಯಾಕ್ಕೆ ಕೊಂಚ ಸಮಾಧಾನಕರ ಸುದ್ದಿ ಸಿಕ್ಕಿದೆ (PC-ICC).

1 / 5
2025-27 ರ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿಯಲ್ಲಿ ಪ್ರಮುಖ ಬದಲಾವಣೆ ಕಂಡುಬಂದಿದೆ. ಆಂಟಿಗುವಾದಲ್ಲಿ ವೆಸ್ಟ್ ಇಂಡೀಸ್ ಮತ್ತು ಶ್ರೀಲಂಕಾ ನಡುವೆ ನಡೆದ ಮೊದಲ ಟೆಸ್ಟ್ ಪಂದ್ಯದ ಫಲಿತಾಂಶವು ಪಾಯಿಂಟ್ ಪಟ್ಟಿಯಲ್ಲಿ ಸಂಪೂರ್ಣ ಬದಲಾವಣೆಗಳನ್ನು ತಂದಿದೆ. ಈ ಪಂದ್ಯದಲ್ಲಿ, ವೆಸ್ಟ್ ಇಂಡೀಸ್ ಅದ್ಭುತ ಪ್ರದರ್ಶನ ನೀಡಿ ಶ್ರೀಲಂಕಾವನ್ನು ಇನ್ನಿಂಗ್ಸ್ ಮತ್ತು 217 ರನ್‌ಗಳ ಬೃಹತ್ ಅಂತರದಿಂದ ಸೋಲಿಸಿತು (PC-ICC).

2 / 5
ಶ್ರೀಲಂಕಾದ ಈ ಅವಮಾನಕರ ಸೋಲಿನಿಂದ ಟೀಂ ಇಂಡಿಯಾ ನೇರ ಲಾಭ ಪಡೆದಿದ್ದು ಅಂಕಪಟ್ಟಿಯಲ್ಲಿ ಒಂದು ಸ್ಥಾನ ಮೇಲಕ್ಕೇರಿದೆ. 2025-27ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಶ್ರೀಲಂಕಾ ಇದುವರೆಗೆ ಒಟ್ಟು ಮೂರು ಪಂದ್ಯಗಳನ್ನು ಆಡಿದ್ದು, ಒಂದನ್ನು ಗೆದ್ದು ಒಂದು ಡ್ರಾ ಮಾಡಿಕೊಂಡಿದೆ. ಈ ಪಂದ್ಯಕ್ಕೂ ಮೊದಲು, ಶ್ರೀಲಂಕಾ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಾಯಿಂಟ್‌ಗಳ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿತ್ತು (PC-BCCI).

3 / 5
 ಆದಾಗ್ಯೂ, ಈ ಹೀನಾಯ ಸೋಲಿನ ನಂತರ, ಶ್ರೀಲಂಕಾದ ಪಾಯಿಂಟ್‌ಗಳ ಶೇಕಡಾವಾರು ಗಮನಾರ್ಹವಾಗಿ ಕುಸಿದಿದೆ. 44.44 ರ ಶೇಕಡಾವಾರು ಅಂಕಗಳೊಂದಿಗೆ ಶ್ರೀಲಂಕಾ ಆರನೇ ಸ್ಥಾನಕ್ಕೆ ಕುಸಿದಿದ್ದಾರೆ. ಏತನ್ಮಧ್ಯೆ, ಈ ಪಂದ್ಯಕ್ಕೂ ಮೊದಲು ಭಾರತ ತಂಡ ಆರನೇ ಸ್ಥಾನದಲ್ಲಿತ್ತು. ಆದರೆ ಟೀಂ ಇಂಡಿಯಾದ ಗೆಲುವಿನ ಶೇಕಡಾವಾರು 48.15 ಆಗಿರುವ ಕಾರಣ ಪಾಯಿಂಟ್ ಪಟ್ಟಿಯಲ್ಲಿ ಐದನೇ ಸ್ಥಾನಕ್ಕೇರಿದೆ (PC-BCCI).

4 / 5
ಮತ್ತೊಂದೆಡೆ, ವೆಸ್ಟ್ ಇಂಡೀಸ್‌ಗೆ ಇದು ಒಂಬತ್ತು ಪಂದ್ಯಗಳಲ್ಲಿ ಮೊದಲ ಗೆಲುವಾಗಿದ್ದು, 14.81 ಗೆಲುವಿನ ಶೇಕಡಾವಾರುವಿನೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದೆ. ಉಳಿದಂತೆ ಆಸ್ಟ್ರೇಲಿಯಾ 87.50 ರ ಗೆಲುವಿನ ಶೇಕಡಾವಾರುವಿನೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ದಕ್ಷಿಣ ಆಫ್ರಿಕಾ 2ನೇ ಸ್ಥಾನ, ನ್ಯೂಜಿಲೆಂಡ್ 3ನೇ ಸ್ಥಾನ ಹಾಗೂ ಬಾಂಗ್ಲಾದೇಶ 4ನೇ ಸ್ಥಾನದಲ್ಲಿದೆ (PC-ICC).

5 / 5
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ನಾನಾ ಪಾಟೇಕರ್ ಜೊತೆ ಕರಿ ಸುಬ್ಬು ಒಡನಾಟ ಶುರು ಆಗಿದ್ದು ಹೇಗೆ? ವಿವರಿಸಿದ ನಟ

ಮುಂಬೈನ ಮುಲುಂಡ್ ಕಾರ್ಮಿಕರ ಕ್ಯಾಂಪ್‌ನಲ್ಲಿ ಭೀಕರ ಬೆಂಕಿ ದುರಂತ

ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ

ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ

ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ

ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ

ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ

ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ