IND vs WI: ವೆಸ್ಟ್ ಇಂಡೀಸ್ ವಿರುದ್ಧ ಅತೀ ಹೆಚ್ಚು ಶತಕ ಸಿಡಿಸಿದ್ದು ಯಾರು ಗೊತ್ತಾ?

Edited By:

Updated on: Jul 17, 2023 | 8:41 PM

India vs West Indies: ಭಾರತ-ವೆಸ್ಟ್ ಇಂಡೀಸ್ ನಡುವಣ 2ನೇ ಟೆಸ್ಟ್ ಪಂದ್ಯವು ಜುಲೈ 20 ರಿಂದ ಶುರುವಾಗಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದರೆ ಅಥವಾ ಡ್ರಾ ಮಾಡಿಕೊಂಡರೆ ಸರಣಿಯನ್ನು ವಶಪಡಿಸಿಕೊಳ್ಳಬಹುದು.

1 / 6
ಡೊಮಿನಿಕಾದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಶತಕ ಸಿಡಿಸಿ ಮಿಂಚಿದ್ದರು. ಈ ಶತಕದೊಂದಿಗೆ ವಿಂಡೀಸ್ ವಿರುದ್ಧ ಅತೀ ಹೆಚ್ಚು ಸೆಂಚುರಿ ಬಾರಿಸಿದ ಸಕ್ರೀಯ ಆಟಗಾರರಲ್ಲಿ ಹಿಟ್​ಮ್ಯಾನ್ 2ನೇ ಸ್ಥಾನಕ್ಕೇರಿದರು.

2 / 6
ಇಲ್ಲಿ ಇಂಟ್ರೆಸ್ಟಿಂಗ್ ವಿಷಯ ಎಂದರೆ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಯಾವುದೇ ಬ್ಯಾಟರ್​ ಅಲ್ಲ. ಬದಲಾಗಿ ಟೀಮ್ ಇಂಡಿಯಾ ಆಲ್​ರೌಂಡರ್. ಹಾಗಿದ್ರೆ ವೆಸ್ಟ್ ಇಂಡೀಸ್ ವಿರುದ್ಧ ಅತೀ ಹೆಚ್ಚು ಶತಕ ಬಾರಿಸಿರುವ ಭಾರತದ ಅಕ್ಟೀವ್ ಪ್ಲೇಯರ್​ಗಳು ಯಾರೆಲ್ಲಾ ಎಂದು ನೋಡೋಣ...

3 / 6
1- ರವಿಚಂದ್ರನ್ ಅಶ್ವಿನ್: ವೆಸ್ಟ್ ಇಂಡೀಸ್ ವಿರುದ್ಧ ಇದುವರೆಗೆ 12 ಇನಿಂಗ್ಸ್ ಆಡಿರುವ ರವಿಚಂದ್ರನ್ ಅಶ್ವಿನ್ ಒಟ್ಟು 4 ಶತಕ ಸಿಡಿಸಿದ್ದಾರೆ. ಈ ಮೂಲಕ ಪ್ರಸ್ತುತ ಭಾರತದ ಪರ ಆಡುತ್ತಿರುವ ಆಟಗಾರರಲ್ಲಿ ವಿಂಡೀಸ್ ವಿರುದ್ಧ ಅತೀ ಹೆಚ್ಚು ಶತಕ ಬಾರಿಸಿದ ಪ್ಲೇಯರ್ ಎನಿಸಿಕೊಂಡಿದ್ದಾರೆ.

4 / 6
2- ರೋಹಿತ್ ಶರ್ಮಾ: ವೆಸ್ಟ್ ಇಂಡೀಸ್ ವಿರುದ್ಧ 5 ಟೆಸ್ಟ್ ಪಂದ್ಯಗಳನ್ನಾಡಿರುವ ರೋಹಿತ್ ಶರ್ಮಾ 3 ಶತಕಗಳನ್ನು ಸಿಡಿಸಿದ್ದಾರೆ. ಈ ಮೂಲಕ ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ.

5 / 6
3- ವಿರಾಟ್ ಕೊಹ್ಲಿ: ವಿಂಡೀಸ್ ವಿರುದ್ಧ 20 ಟೆಸ್ಟ್ ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ ಬಾರಿಸಿರುವುದು ಕೇವಲ 2 ಶತಕಗಳು ಮಾತ್ರ.

6 / 6
4- ಅಜಿಂಕ್ಯ ರಹಾನೆ: ವೆಸ್ಟ್ ಇಂಡೀಸ್ ವಿರುದ್ಧ ಒಟ್ಟು 11 ಟೆಸ್ಟ್ ಇನಿಂಗ್ಸ್ ಆಡಿರುವ ಅಜಿಂಕ್ಯ ರಹಾನೆ 2 ಶತಕಗಳನ್ನು ಬಾರಿಸಿದ್ದಾರೆ.