AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: 2ನೇ ಪಂದ್ಯದಲ್ಲೇ 10 ವಿಕೆಟ್; ವಿಶೇಷ ಕ್ಲಬ್ ಸೇರಿದ ಮಾನವ್ ಸುತಾರ್

Manav Suthar's Historic 10-Wicket Haul at Galle Test: ಮಾನವ್ ಸುತಾರ್ ತಮ್ಮ ಎರಡನೇ ಟೆಸ್ಟ್ ಪಂದ್ಯದಲ್ಲಿಯೇ 10 ವಿಕೆಟ್ ಪಡೆದು ಇತಿಹಾಸ ನಿರ್ಮಿಸಿದ್ದಾರೆ. ಗಾಲೆ ಟೆಸ್ಟ್‌ನಲ್ಲಿ 10 ವಿಕೆಟ್ ಪಡೆದ ಮೂರನೇ ಭಾರತೀಯ ಬೌಲರ್ ಎಂಬ ದಾಖಲೆ ಬರೆದಿದ್ದಾರೆ. ಜೊತೆಗೆ, ಈ ಮೈದಾನದಲ್ಲಿ ಅತ್ಯುತ್ತಮ ಬೌಲಿಂಗ್ ಅಂಕಿಅಂಶಗಳನ್ನು ದಾಖಲಿಸಿದ ಮೊದಲ ಬೌಲರ್ ಎನಿಸಿಕೊಂಡಿದ್ದಾರೆ. ಈ ಸಾಧನೆಯ ಮೂಲಕ ಭಾರತೀಯ ಎಡಗೈ ಸ್ಪಿನ್ನರ್‌ಗಳ ಎಲೈಟ್ ಕ್ಲಬ್‌ಗೆ ಸೇರಿದ್ದಾರೆ.

ಪೃಥ್ವಿಶಂಕರ
|

Updated on: Aug 19, 2026 | 3:00 PM

Share
ಗಾಲೆಯಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯವನ್ನು ಟೀಂ ಇಂಡಿಯಾ 165 ರನ್‌ಗಳಿಂದ ಗೆದ್ದುಕೊಂಡಿತು. ಈ ಗೆಲುವಿನೊಂದಿಗೆ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಅಂತರದ ಮುನ್ನಡೆ ಪಡೆದುಕೊಂಡಿದೆ. ತಂಡದ ಈ ಗೆಲುವಿನಲ್ಲಿ ಯುವ ಬ್ಯಾಟರ್ ದೇವದತ್ ಪಡಿಕ್ಕಲ್ ಬ್ಯಾಟಿಂಗ್​ನಲ್ಲಿ ಕೊಡುಗೆ ನೀಡಿದರೆ, ಇತ್ತ ಬೌಲಿಂಗ್​ನಲ್ಲಿ ಯುವ ಸ್ಪಿನ್ನರ್ ಮಾನವ್ ಸುತಾರ್ 10 ವಿಕೆಟ್ ಪಡೆದು ಮಿಂಚಿದರು(PC-PTI).

1 / 6
ಎರಡೂ ಇನ್ನಿಂಗ್ಸ್​ಗಳಲ್ಲಿ 45.2 ಓವರ್‌ಗಳನ್ನು ಬೌಲ್ ಮಾಡಿದ ಸುತಾರ್, 131 ರನ್ ನೀಡಿ 10 ವಿಕೆಟ್ ಕಬಳಿಸಿದರು. ಇದರಲ್ಲಿ ಮೊದಲ ಇನ್ನಿಂಗ್ಸ್​ನಲ್ಲಿ 4 ವಿಕೆಟ್ ಸೇರಿದ್ದರೆ, ಎರಡನೇ ಇನ್ನಿಂಗ್ಸ್​ನಲ್ಲಿ ಆರು ವಿಕೆಟ್‌ಗಳು ಸೇರಿವೆ. ಸುತಾರ್ ಅವರ ಸ್ಪಿನ್ ಮ್ಯಾಜಿಕ್ ಮುಂದೆ ಆತಿಥೇಯ ಲಂಕಾ ತಂಡ ಮಂಡಿಯೂರಿತು(PC-PTI).

2 / 6
ತಮ್ಮ ಅಂತರರಾಷ್ಟ್ರೀಯ ವೃತ್ತಿಜೀವನದ ಎರಡನೇ ಟೆಸ್ಟ್ ಪಂದ್ಯವನ್ನಾಡಿದ ಸುತಾರ್, ಈ ಪಂದ್ಯಕ್ಕೂ ಮುನ್ನ ಜೂನ್‌ನಲ್ಲಿ ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ ಟೆಸ್ಟ್‌ಗೆ ಪಾದಾರ್ಪಣೆ ಮಾಡಿದರು. ಆ ಪಂದ್ಯದ ಒಂದೇ ಇನ್ನಿಂಗ್ಸ್‌ನಲ್ಲಿ ಆರು ವಿಕೆಟ್‌ಗಳು ಸೇರಿದಂತೆ ಒಟ್ಟು ಏಳು ವಿಕೆಟ್‌ಗಳನ್ನು ಕಬಳಿಸಿದ್ದರು. ಇದೀಗ ಗಾಲೆ ಟೆಸ್ಟ್​ನಲ್ಲಿ 10 ವಿಕೆಟ್​ ಉರುಳಿಸಿದ ಸಾಧನೆ ಮಾಡಿದ್ದಾರೆ(PC-PTI).

3 / 6
ಈ ಮೂಲಕ ಮಾನವ್ ಸುತಾರ್, ಗಾಲೆ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ 10 ವಿಕೆಟ್ ಪಡೆದ ಮೂರನೇ ಭಾರತೀಯ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಮೊದಲು ಅಶ್ವಿನ್ ಮತ್ತು ಹರ್ಭಜನ್ ಸಿಂಗ್ ಈ ಮೈದಾನದಲ್ಲಿ ಈ ಸಾಧನೆ ಮಾಡಿದ್ದರು(PC-PTI).

4 / 6
 ಆದಾಗ್ಯೂ ಈ ಮೈದಾನದಲ್ಲಿ ಟೆಸ್ಟ್ ಪಂದ್ಯದಲ್ಲಿ ಅತ್ಯುತ್ತಮ ಬೌಲಿಂಗ್ ಅಂಕಿಅಂಶಗಳನ್ನು ದಾಖಲಿಸಿದ ಮೊದಲ ಬೌಲರ್ ಎಂಬ ಹೆಗ್ಗಳಿಕೆಗೆ ಸುತಾರ್ ಪಾತ್ರರಾಗಿದ್ದಾರೆ. ಎರಡು ಇನ್ನಿಂಗ್ಸ್​ಗಳಲ್ಲಿ ಬೌಲ್ ಮಾಡಿದ 45.2 ಓವರ್‌ಗಳಲ್ಲಿ ಮೂರು ಮೇಡನ್ ಓವರ್‌ಗಳು ಸೇರಿದಂತೆ 10 ವಿಕೆಟ್‌ಗಳನ್ನು ಕಬಳಿಸಿದರು ಮತ್ತು 2.88 ರ ಎಕಾನಮಿ ರೇಟ್​ನಲ್ಲಿ ರನ್ ಬಿಟ್ಟುಕೊಟ್ಟರು(PC-PTI).

5 / 6
ಹಾಗೆಯೇ ತಮ್ಮ ವೃತ್ತಿಜೀವನದ ಎರಡನೇ ಟೆಸ್ಟ್ ಪಂದ್ಯದಲ್ಲಿ 10 ವಿಕೆಟ್‌ಗಳ ಗಡಿ ದಾಟುವ ಮೂಲಕ, ಈ ಸಾಧನೆ ಮಾಡಿದ ಒಂಬತ್ತನೇ ಭಾರತೀಯ ಎಡಗೈ ಸ್ಪಿನ್ನರ್ ಎನಿಸಿಕೊಂಡಿದ್ದಾರೆ. ಭಾರತದ ಪರ ಅತಿ ಹೆಚ್ಚು ಹತ್ತು ವಿಕೆಟ್‌ಗಳನ್ನು ಪಡೆದ ದಾಖಲೆ ರವಿಚಂದ್ರನ್ ಅಶ್ವಿನ್ ಮತ್ತು ಅನಿಲ್ ಕುಂಬ್ಳೆ ಅವರ ಹೆಸರಿನಲ್ಲಿದೆ (8). ಈ ಇಬ್ಬರ ನಂತರ ಹರ್ಭಜನ್ ಸಿಂಗ್ (5) ಮತ್ತು ರವೀಂದ್ರ ಜಡೇಜಾ (3) ಇದ್ದಾರೆ. ಇದೀಗ ಸುತಾರ್ ಟಾಪ್ 10ರೊಳಗೆ ಸ್ಥಾನ ಪಡೆದಿದ್ದಾರೆ(PC-PTI).

6 / 6
Follow Us
ಮೈಸೂರು ಯುವ ದಸರಾ ಉದ್ಘಾಟಕರಾಗಿ ನೃತ್ಯ ನಿರ್ದೇಶಕ ಪ್ರಭುದೇವ್ ಆಯ್ಕೆ

ಕೆಪಿಎಸ್​​ಸಿ ಹಗರಣ: ಆರೋಪಿ ಬಸವರಾಜ ಬಗ್ಗೆ ಸ್ಫೋಟ ಅಂಶ ಬಿಚ್ಚಿಟ್ಟ ಖಂಡ್ರೆ

ಮೋಡ ಬಿತ್ತನೆ ಕಾರ್ಯಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ

ಜಗದೊದ್ಧಾರನ ಆಡಿಸಿದಳೆಶೋದೆ ಕೀರ್ತನೆ ಹುಟ್ಟಿದ ತಾಣದಲ್ಲಿ ಜನ್ಮಾಷ್ಟಮಿಸಂಭ್ರಮ

ಸದ್ದಿಲ್ಲದೆ ತಮಿಳುನಾಡಿಗೆ ಹರಿಯುತ್ತಿದೆ ಕಾವೇರಿ ನೀರು!

ಬರಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ ಡಿಕೆಶಿ

ನಿರುದ್ಯೋಗಿ ಯುವಕ ಯುವತಿಯರೇ ಟಾರ್ಗೆಟ್: ಈತನ ಮೊಬೈಲ್​​​ನಲ್ಲಿ ಶಾಕಿಂಗ್ ಅಂಶ

ಕೃಷ್ಣ ಜನ್ಮಾಷ್ಟಮಿ; ಗೋಪೂಜೆ ಸಲ್ಲಿಸಿದ ಬಿಜೆಪಿ ಅಧ್ಯಕ್ಷ ವಿಜಯೇಂದ್ರ

ಲಕ್ಷ್ಮೇಶ್ವರ ತಾಲೂಕು ಘೋಷಣೆಯಾಗಿ 9 ವರ್ಷ ಕಳೆದರೂ ಜನರಿಗೆ ತಪ್ಪದ ಪರದಾಟ!

15 ಸಾವಿರ ಶಿಕ್ಷಕರ ನೇಮಕಾತಿ: ಸರ್ವರ್ ಸಮಸ್ಯೆಯಿಂದ ಆಕಾಂಕ್ಷಿಗಳ ಪರದಾಟ