
ಗಾಲೆಯಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯವನ್ನು ಟೀಂ ಇಂಡಿಯಾ 165 ರನ್‌ಗಳಿಂದ ಗೆದ್ದುಕೊಂಡಿತು. ಈ ಗೆಲುವಿನೊಂದಿಗೆ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಅಂತರದ ಮುನ್ನಡೆ ಪಡೆದುಕೊಂಡಿದೆ. ತಂಡದ ಈ ಗೆಲುವಿನಲ್ಲಿ ಯುವ ಬ್ಯಾಟರ್ ದೇವದತ್ ಪಡಿಕ್ಕಲ್ ಬ್ಯಾಟಿಂಗ್ನಲ್ಲಿ ಕೊಡುಗೆ ನೀಡಿದರೆ, ಇತ್ತ ಬೌಲಿಂಗ್ನಲ್ಲಿ ಯುವ ಸ್ಪಿನ್ನರ್ ಮಾನವ್ ಸುತಾರ್ 10 ವಿಕೆಟ್ ಪಡೆದು ಮಿಂಚಿದರು(PC-PTI).

ಎರಡೂ ಇನ್ನಿಂಗ್ಸ್ಗಳಲ್ಲಿ 45.2 ಓವರ್‌ಗಳನ್ನು ಬೌಲ್ ಮಾಡಿದ ಸುತಾರ್, 131 ರನ್ ನೀಡಿ 10 ವಿಕೆಟ್ ಕಬಳಿಸಿದರು. ಇದರಲ್ಲಿ ಮೊದಲ ಇನ್ನಿಂಗ್ಸ್‌ನಲ್ಲಿ 4 ವಿಕೆಟ್ ಸೇರಿದ್ದರೆ, ಎರಡನೇ ಇನ್ನಿಂಗ್ಸ್‌ನಲ್ಲಿ ಆರು ವಿಕೆಟ್‌ಗಳು ಸೇರಿವೆ. ಸುತಾರ್ ಅವರ ಸ್ಪಿನ್ ಮ್ಯಾಜಿಕ್ ಮುಂದೆ ಆತಿಥೇಯ ಲಂಕಾ ತಂಡ ಮಂಡಿಯೂರಿತು(PC-PTI).

ತಮ್ಮ ಅಂತರರಾಷ್ಟ್ರೀಯ ವೃತ್ತಿಜೀವನದ ಎರಡನೇ ಟೆಸ್ಟ್ ಪಂದ್ಯವನ್ನಾಡಿದ ಸುತಾರ್, ಈ ಪಂದ್ಯಕ್ಕೂ ಮುನ್ನ ಜೂನ್‌ನಲ್ಲಿ ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ ಟೆಸ್ಟ್‌ಗೆ ಪಾದಾರ್ಪಣೆ ಮಾಡಿದರು. ಆ ಪಂದ್ಯದ ಒಂದೇ ಇನ್ನಿಂಗ್ಸ್‌ನಲ್ಲಿ ಆರು ವಿಕೆಟ್‌ಗಳು ಸೇರಿದಂತೆ ಒಟ್ಟು ಏಳು ವಿಕೆಟ್‌ಗಳನ್ನು ಕಬಳಿಸಿದ್ದರು. ಇದೀಗ ಗಾಲೆ ಟೆಸ್ಟ್‌ನಲ್ಲಿ 10 ವಿಕೆಟ್ ಉರುಳಿಸಿದ ಸಾಧನೆ ಮಾಡಿದ್ದಾರೆ(PC-PTI).

ಈ ಮೂಲಕ ಮಾನವ್ ಸುತಾರ್, ಗಾಲೆ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ 10 ವಿಕೆಟ್ ಪಡೆದ ಮೂರನೇ ಭಾರತೀಯ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಮೊದಲು ಅಶ್ವಿನ್ ಮತ್ತು ಹರ್ಭಜನ್ ಸಿಂಗ್ ಈ ಮೈದಾನದಲ್ಲಿ ಈ ಸಾಧನೆ ಮಾಡಿದ್ದರು(PC-PTI).

ಆದಾಗ್ಯೂ ಈ ಮೈದಾನದಲ್ಲಿ ಟೆಸ್ಟ್ ಪಂದ್ಯದಲ್ಲಿ ಅತ್ಯುತ್ತಮ ಬೌಲಿಂಗ್ ಅಂಕಿಅಂಶಗಳನ್ನು ದಾಖಲಿಸಿದ ಮೊದಲ ಬೌಲರ್ ಎಂಬ ಹೆಗ್ಗಳಿಕೆಗೆ ಸುತಾರ್ ಪಾತ್ರರಾಗಿದ್ದಾರೆ. ಎರಡು ಇನ್ನಿಂಗ್ಸ್ಗಳಲ್ಲಿ ಬೌಲ್ ಮಾಡಿದ 45.2 ಓವರ್‌ಗಳಲ್ಲಿ ಮೂರು ಮೇಡನ್ ಓವರ್‌ಗಳು ಸೇರಿದಂತೆ 10 ವಿಕೆಟ್‌ಗಳನ್ನು ಕಬಳಿಸಿದರು ಮತ್ತು 2.88 ರ ಎಕಾನಮಿ ರೇಟ್ನಲ್ಲಿ ರನ್ ಬಿಟ್ಟುಕೊಟ್ಟರು(PC-PTI).

ಹಾಗೆಯೇ ತಮ್ಮ ವೃತ್ತಿಜೀವನದ ಎರಡನೇ ಟೆಸ್ಟ್ ಪಂದ್ಯದಲ್ಲಿ 10 ವಿಕೆಟ್‌ಗಳ ಗಡಿ ದಾಟುವ ಮೂಲಕ, ಈ ಸಾಧನೆ ಮಾಡಿದ ಒಂಬತ್ತನೇ ಭಾರತೀಯ ಎಡಗೈ ಸ್ಪಿನ್ನರ್ ಎನಿಸಿಕೊಂಡಿದ್ದಾರೆ. ಭಾರತದ ಪರ ಅತಿ ಹೆಚ್ಚು ಹತ್ತು ವಿಕೆಟ್‌ಗಳನ್ನು ಪಡೆದ ದಾಖಲೆ ರವಿಚಂದ್ರನ್ ಅಶ್ವಿನ್ ಮತ್ತು ಅನಿಲ್ ಕುಂಬ್ಳೆ ಅವರ ಹೆಸರಿನಲ್ಲಿದೆ (8). ಈ ಇಬ್ಬರ ನಂತರ ಹರ್ಭಜನ್ ಸಿಂಗ್ (5) ಮತ್ತು ರವೀಂದ್ರ ಜಡೇಜಾ (3) ಇದ್ದಾರೆ. ಇದೀಗ ಸುತಾರ್ ಟಾಪ್ 10ರೊಳಗೆ ಸ್ಥಾನ ಪಡೆದಿದ್ದಾರೆ(PC-PTI).