ರೆಡ್ ಬಾಲ್ ಕ್ರಿಕೆಟ್‌ಗೆ ವಿದಾಯ ಹೇಳಿದ ಟೀಂ ಇಂಡಿಯಾದ ಸ್ಟಾರ್ ಬೌಲರ್..!
Varun Aaron Retirement: ಪ್ರಸ್ತುತ ಭಾರತ ತಂಡದಿಂದ ಹೊರಗುಳಿದಿರುವ ವರುಣ್ ಆರೋನ್ ರೆಡ್ ಬಾಲ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಪ್ರಸ್ತುತ ರಣಜಿ ಟ್ರೋಫಿ ಆಡುತ್ತಿರುವ ಅವರು ತಮ್ಮ ವೃತ್ತಿಜೀವನದ ಕೊನೆಯ ಪಂದ್ಯವನ್ನು ರಾಜಸ್ಥಾನ ವಿರುದ್ಧ ಆಡಲಿದ್ದಾರೆ. 2008ರಲ್ಲಿ ಪ್ರಥಮ ದರ್ಜೆ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದ ಆ್ಯರೋನ್ 65 ಪಂದ್ಯಗಳಲ್ಲಿ 168 ವಿಕೆಟ್‌ಗಳನ್ನು ಪಡೆದಿದ್ದರು.