ಐಸಿಸಿ ರ‍್ಯಾಂಕಿಂಗ್​ನಲ್ಲಿ ಅಗ್ರಸ್ಥಾನ ಅಲಂಕರಿಸಿದ ಭಾರತದ 6 ಬೌಲರ್​ಗಳ ಪಟ್ಟಿ ಇಲ್ಲಿದೆ

ICC ODI Rankings: ಮೊಹಮ್ಮದ್ ಸಿರಾಜ್​ಗೂ ಮೊದಲು ಭಾರತದ 5 ಬೌಲರ್​ಗಳು ಏಕದಿನ ರ‍್ಯಾಂಕಿಂಗ್​ನಲ್ಲಿ ಅಗ್ರಸ್ಥಾನ ಅಲಂಕರಿಸಿದ್ದರು. ಆ ಬೌಲರ್​ಗಳು ಯಾರೆಲ್ಲಾ ಎಂಬುದರ ಕಿರು ಪರಿಚಯ ಇಲ್ಲಿದೆ...

TV9 Web
| Updated By: ಝಾಹಿರ್ ಯೂಸುಫ್

Updated on:Sep 20, 2023 | 8:30 PM

ಐಸಿಸಿ ಪ್ರಕಟಿಸಿರುವ ನೂತನ ಏಕದಿನ ಬೌಲರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಅಗ್ರಸ್ಥಾನ ಅಲಂಕರಿಸಿದ್ದಾರೆ. ಇದರೊಂದಿಗೆ ಈ ಸಾಧನೆ ಮಾಡಿದ ಭಾರತದ 6ನೇ ಬೌಲರ್ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ.

1 / 8
ಅಂದರೆ ಮೊಹಮ್ಮದ್ ಸಿರಾಜ್​ಗೂ ಮೊದಲು ಭಾರತದ 5 ಬೌಲರ್​ಗಳು ಏಕದಿನ ರ‍್ಯಾಂಕಿಂಗ್​ನಲ್ಲಿ ಅಗ್ರಸ್ಥಾನ ಅಲಂಕರಿಸಿದ್ದರು. ಆ ಬೌಲರ್​ಗಳು ಯಾರೆಲ್ಲಾ ಎಂಬುದರ ಕಿರು ಪರಿಚಯ ಇಲ್ಲಿದೆ...

2 / 8
1- ಮಣಿಂದರ್ ಸಿಂಗ್: ಟೀಮ್ ಇಂಡಿಯಾ ಪರ ಐಸಿಸಿ ರ್ಯಾಂಕಿಂಗ್​ನಲ್ಲಿ ಅಗ್ರಸ್ಥಾನ ಅಲಂಕರಿಸಿದ ಮೊದಲ ಬೌಲರ್​ ಮಣಿಂದರ್ ಸಿಂಗ್. 80 ರ ದಶಕದಲ್ಲಿ ಭಾರತದ ಪರ ಆಡಿದ್ದ ಮಣಿಂದರ್ ಅವರು 1987 ರಲ್ಲಿ ಅಗ್ರಸ್ಥಾನ ಅಲಂಕರಿಸಿದ್ದರು. ಟೀಮ್ ಇಂಡಿಯಾ ಪರ 59 ಏಕದಿನ ಪಂದ್ಯವಾಡಿದ್ದ ಎಡಗೈ ಸ್ಪಿನ್ನರ್ ಮಣಿಂದರ್ ಸಿಂಗ್ ಒಟ್ಟು 66 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.

3 / 8
2- ಕಪಿಲ್ ದೇವ್: ಮಣಿಂದರ್ ಸಿಂಗ್ ಬಳಿಕ ಈ ಸಾಧನೆ ಮಾಡಿದ ಭಾರತದ ಎರಡನೇ ಬೌಲರ್ ಕಪಿಲ್ ದೇವ್. ಟೀಮ್ ಇಂಡಿಯಾ ಪರ 225 ಏಕದಿನ ಪಂದ್ಯವಾಡಿರುವ ಕಪಿಲ್ ಪಾಜಿ ಒಟ್ಟು 253 ವಿಕೆಟ್ ಪಡೆದಿದ್ದಾರೆ. ಇದರ ನಡುವೆ 1989 ರಲ್ಲಿ ಏಕದಿನ ರ‍್ಯಾಂಕಿಂಗ್​​ನಲ್ಲಿ ನಂಬರ್ 1 ಬೌಲರ್ ಆಗಿ ಹೊರಹೊಮ್ಮಿದ್ದರು.

4 / 8
3- ಅನಿಲ್ ಕುಂಬ್ಳೆ: ಕನ್ನಡಿಗ ಅನಿಲ್ ಕುಂಬ್ಳೆ ಕೂಡ ಈ ಪಟ್ಟಿಯಲ್ಲಿದ್ದಾರೆ. 271 ಪಂದ್ಯಗಳಿಂದ 337 ವಿಕೆಟ್ ಪಡೆದಿರುವ ಅನಿಲ್ ಕುಂಬ್ಳೆ ಭಾರತದ ಪರ ಅತಿ ಹೆಚ್ಚು ಏಕದಿನ ವಿಕೆಟ್ ಪಡೆದ ದಾಖಲೆ ಹೊಂದಿದ್ದಾರೆ. ವಿಶೇಷ ಎಂದರೆ 1996 ರಲ್ಲಿ ಅನಿಲ್ ಕುಂಬ್ಳೆ ಐಸಿಸಿ ರ‍್ಯಾಂಕಿಂಗ್​ನಲ್ಲಿ ಅಗ್ರಸ್ಥಾನ ಅಲಂಕರಿಸಿ ಮಿಂಚಿದ್ದರು.

5 / 8
4- ರವೀಂದ್ರ ಜಡೇಜಾ: ಟೀಮ್ ಇಂಡಿಯಾ ಆಲ್​ರೌಂಡರ್ ರವೀಂದ್ರ ಜಡೇಜಾ 2013 ರಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಈ ಮೂಲಕ ಐಸಿಸಿ ಬೌಲರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ ನಂಬರ್ 1 ಸ್ಥಾನದಲ್ಲಿ ಕಾಣಿಸಿಕೊಂಡಿದ್ದರು.

6 / 8
5- ಜಸ್​ಪ್ರೀತ್ ಬುಮ್ರಾ: ಟೀಮ್ ಇಂಡಿಯಾ ಯಾರ್ಕರ್ ಸ್ಪೆಷಲಿಸ್ಟ್ ಜಸ್​ಪ್ರೀತ್ ಬುಮ್ರಾ 2018 ರಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಐಸಿಸಿ ರ‍್ಯಾಂಕಿಂಗ್​ನಲ್ಲಿ ನಂಬರ್​ 1 ಬೌಲರ್ ಎನಿಸಿಕೊಂಡಿದ್ದರು.

7 / 8
6- ಮೊಹಮ್ಮದ್ ಸಿರಾಜ್: ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಇದೀಗ ಅದ್ಭುತ ಲಯದಲ್ಲಿದ್ದಾರೆ. ಏಷ್ಯಾಕಪ್​ನಲ್ಲಿ ಒಟ್ಟು 10 ವಿಕೆಟ್ ಕಬಳಿಸುವ ಮೂಲಕ ಇದೀಗ ಐಸಿಸಿ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಭಾರತದ 6ನೇ ಬೌಲರ್ ಹಾಗೂ 3ನೇ ವೇಗಿ​ ಎನಿಸಿಕೊಂಡಿದ್ದಾರೆ.

8 / 8

Published On - 8:30 pm, Wed, 20 September 23

Follow us
ಪ್ರಧಾನಿ ಮೋದಿಯನ್ನು ಬುಡಕಟ್ಟು ಸಂಪ್ರದಾಯದಂತೆ ವಿಶಿಷ್ಟವಾಗಿ ಬರಮಾಡಿಕೊಂಡ ಜನ

ಯೋಗೇಶ್ವರ್ ನಿರಾಶೆಗೆ ಡಿಕೆ ಸುರೇಶ್ ಸಮಂಜಸ ಪ್ರತಿಕ್ರಿಯೆ ನೀಡಲಿಲ್ಲ

ಜಮೀರ್ ಅಹ್ಮದ್ ಜನಾಂಗೀಯ ನಿಂದನೆ ಮಾಡುವ ಜೊತೆ ಸುಳ್ಳನ್ನೂ ಹೇಳಿದರೇ?

ಬಸವರಾಜ ಹೊರಟ್ಟಿನ ಹೊಡೆಯಲು ಹೋಗಿದ್ದ ಜಮೀರ್
ಬಸವರಾಜ ಹೊರಟ್ಟಿನ ಹೊಡೆಯಲು ಹೋಗಿದ್ದ ಜಮೀರ್
ಮಾಲೂರು ಹತ್ತಿರದ ಪ್ರಸನ್ನ ವೆಂಕಟರಮಣ ದೇವಸ್ಥಾನ ಪ್ರಾಚೀನ ಇತಿಹಾಸದ ಪ್ರತೀಕ

ಸಂಚಾರಕ್ಕೆ ಅನುಮತಿ ನೀಡಿದರೆ ಸುವರ್ಣ ಸೌಧದ ಮುಂದೆ ಪ್ರತಿಭಟನೆ: ವಾಟಾಳ್

‘ಭೈರತಿ ರಣಗಲ್’ ಸಿನಿಮಾ ನೋಡಿದ ಗೀತಾ ಶಿವರಾಜ್ ಕುಮಾರ್ ಮೊದಲ ರಿಯಾಕ್ಷನ್

ಮಂಡ್ಯ: ಪಾಂಡವಪುರ ಪುರಸಭೆ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ

‘ಭೈರತಿ ರಣಗಲ್’ ಲುಕ್​ನಲ್ಲೇ ಶಿವಣ್ಣನ ಸಿನಿಮಾ ನೋಡಲು ಬಂದ ಡಾಲಿ ಧನಂಜಯ್

ಜವಾರಿ ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ಹನುಮಂತ
ಜವಾರಿ ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ಹನುಮಂತ