ಏಕಕಾಲದಲ್ಲಿ ಎರಡು ಸರಣಿಗಳನ್ನು ಆಡಲಿದೆ ಟೀಂ ಇಂಡಿಯಾ

Updated on: Mar 13, 2026 | 8:33 PM

Indian cricket schedule: ಟಿ20 ವಿಶ್ವಕಪ್ ಗೆಲುವಿನ ನಂತರ ಟೀಂ ಇಂಡಿಯಾ ಬಿಡುವಿಲ್ಲದ ವೇಳಾಪಟ್ಟಿ ಎದುರಿಸಲಿದೆ. ಐಪಿಎಲ್ ಬಳಿಕ ಭಾರತ ಅಫ್ಘಾನಿಸ್ತಾನ ವಿರುದ್ಧ ಕಣಕ್ಕಿಳಿಯಲಿದ್ದು, ಅಕ್ಟೋಬರ್‌ನಲ್ಲಿ ಏಕಕಾಲದಲ್ಲಿ ಎರಡು ಸರಣಿಗಳನ್ನು ಆಡಲಿದೆ. ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಸರಣಿ ಮತ್ತು ಏಷ್ಯನ್ ಗೇಮ್ಸ್‌ನಲ್ಲಿ ಟಿ20 ತಂಡ ಭಾಗವಹಿಸಲಿದೆ. ಬಿಸಿಸಿಐ 30 ಆಟಗಾರರನ್ನು ಆಯ್ಕೆ ಮಾಡಿ, ಎರಡು ತಂಡಗಳನ್ನು ಕಣಕ್ಕಿಳಿಸಲು ಸಜ್ಜಾಗಿದೆ.

1 / 6
ಟಿ20 ವಿಶ್ವಕಪ್ ಗೆದ್ದ ಸಂತಸದಲ್ಲಿರುವ ಟೀಂ ಇಂಡಿಯಾ ಪ್ರಸ್ತುತ ವಿಶ್ರಾಂತಿ ಮೂಡ್​ನಲ್ಲಿದೆ. ತಂಡದ ಎಲ್ಲಾ ಆಟಗಾರರು ತಮ್ಮ ತಮ್ಮ ಮನೆಗೆ ಮರಳಿದ್ದು, ಇನ್ನು ಕೆಲವೇ ದಿನಗಳಲ್ಲಿ ಆರಂಭವಾಗಲಿರುವ ಐಪಿಎಲ್‌ನಲ್ಲಿ ಕಾಣಿಸಿಕೊಳ್ಳಳಿದ್ದಾರೆ. ಸುಮಾರು 2 ತಿಂಗಳ ಕಾಲ ನಡೆಯಲಿರುವ ಈ ಐಪಿಎಲ್ ಮುಗಿದ ಬಳಿಕ ಎಲ್ಲಾ ಆಟಗಾರರು ರಾಷ್ಟ್ರೀಯ ಕರ್ತವ್ಯಕ್ಕೆ ವಾಪಸ್ಸಾಗಲಾಗಿದೆ.

2 / 6
ಟಿ20 ವಿಶ್ವಕಪ್ ಆಡಿ ಮುಗಿಸಿರುವ ಟೀಂ ಇಂಡಿಯಾ ಮತ್ತೆ ಕಣಕ್ಕಿಳಿಯುವುದು ಅಫ್ಘಾನಿಸ್ತಾನದ ವಿರುದ್ಧ. ಅದು ಜೂನ್ ತಿಂಗಳಲ್ಲಿ. ಉಭಯ ತಂಡಗಳ ನಡುವಿನ ಏಕದಿನ ಸರಣಿಯೊಂದಿಗೆ ಭಾರತದ ಅಭಿಯಾನವು ಶುರುವಾಗಲಿದೆ. ಇಲ್ಲಿಂದ ಮತ್ತೆ ಟೀಂ ಇಂಡಿಯಾ ಬ್ಯುಸಿಯಾಗಲಿದೆ. ಇದರ ನಡುವೆ ಭಾರತ ತಂಡ ಏಕ ಕಾಲದಲ್ಲಿ ಎರಡು ಸರಣಿಗಳಲ್ಲಿ ಕಣಕ್ಕಿಳಿಯಲಿದೆ ಎಂದು ವರದಿಯಾಗಿದೆ.

3 / 6
ವರದಿಗಳ ಪ್ರಕಾರ, ಅಕ್ಟೋಬರ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯ ಜೊತೆಗೆ ಭಾರತೀಯ ಕ್ರಿಕೆಟ್ ತಂಡ ಏಷ್ಯನ್ ಕ್ರೀಡಾಕೂಟದಲ್ಲಿ ಭಾಗವಹಿಸಲಿದೆ ಎಂದು ವರದಿಯಾಗಿದೆ. ವೆಸ್ಟ್ ಇಂಡೀಸ್ ವಿರುದ್ಧದ ಸರಣಿ ಅಕ್ಟೋಬರ್‌ನಲ್ಲಿ ನಡೆಯಲಿದೆ. ಈ ಸಮಯದಲ್ಲಿ, ಏಷ್ಯನ್ ಕ್ರೀಡಾಕೂಟ ಜಪಾನ್‌ನಲ್ಲಿ ನಡೆಯಲಿದ್ದು, ಅಲ್ಲಿ ಭಾರತದ ಟಿ20 ತಂಡವೂ ಭಾಗವಹಿಸಲಿದೆ ಎಂದು ವರದಿಯಾಗಿದೆ. ಕಳೆದ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತ ಚಿನ್ನದ ಪದಕ ಗೆದ್ದಿತ್ತು ಎಂಬುದು ಇಲ್ಲಿ ಉಲ್ಲೇಖಾರ್ಹ.

4 / 6
ಕ್ರಿಕ್‌ಬಜ್ ವರದಿಯ ಪ್ರಕಾರ, ಈ ಎರಡೂ ಸರಣಿಗಳಿಗಾಗಿ ಬಿಸಿಸಿಐ 30 ಭಾರತೀಯ ಆಟಗಾರರನ್ನು ಆಯ್ಕೆ ಮಾಡಲಿದ್ದು, ಈ ಪೈಕಿ 15 ಮಂದಿ ಏಷ್ಯನ್ ಕ್ರೀಡಾಕೂಟದಲ್ಲಿ ಕಣಕ್ಕಿಳಿದರೆ, ಉಳಿದ 15 ಮಂದಿ ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಸರಣಿಯನ್ನು ಆಡುತ್ತಾರೆ. ಟೀಂ ಇಂಡಿಯಾ ಈ ಹಿಂದೆ ಎರಡು ಸರಣಿಗಳನ್ನು ಏಕಕಾಲದಲ್ಲಿ ಆಡಿದೆ ಎಂಬುದು ಗಮನಿಸಬೇಕಾದ ಸಂಗತಿ.

5 / 6
 2021 ರಲ್ಲಿ, ವಿರಾಟ್ ಕೊಹ್ಲಿ ನೇತೃತ್ವದ ಒಂದು ತಂಡ ಇಂಗ್ಲೆಂಡ್‌ನಲ್ಲಿ ಡಬ್ಲ್ಯೂಟಿಸಿ ಫೈನಲ್ ಮತ್ತು ನಂತರ ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಿದರೆ, ಶಿಖರ್ ಧವನ್ ನೇತೃತ್ವದ ಇನ್ನೊಂದು ತಂಡ ಶ್ರೀಲಂಕಾದಲ್ಲಿ ಏಕದಿನ ಮತ್ತು ಟಿ20 ಸರಣಿಯನ್ನು ಆಡಿತ್ತು. ಭಾರತದಲ್ಲಿ ಪ್ರತಿಭಾನ್ವಿತ ಆಟಗಾರರಿಗೆ ಕೊರತೆಯಿಲ್ಲ. ಹೀಗಾಗಿ ಆಟಗಾರರನ್ನು ಆಯ್ಕೆ ಮಾಡಲು ಬಿಸಿಸಿಐಗೆ ಯಾವುದೇ ಸಮಸ್ಯೆ ಇರುವುದಿಲ್ಲ.

6 / 6
2026 ರ ಏಷ್ಯನ್ ಕ್ರೀಡಾಕೂಟವು ಸೆಪ್ಟೆಂಬರ್ 19 ರಿಂದ ಅಕ್ಟೋಬರ್ 4 ರವರೆಗೆ ಜಪಾನ್‌ನಲ್ಲಿ ನಡೆಯಲಿದೆ. ಏಷ್ಯನ್ ಕ್ರೀಡಾಕೂಟವನ್ನು ಟಿ20 ಸ್ವರೂಪದಲ್ಲಿ ಆಡಲಾಗುವುದರಿಂದ ನಾಯಕ ಸೂರ್ಯಕುಮಾರ್ ಯಾದವ್ ನೇತೃತ್ವದ ಭಾರತ ತಂಡ ಕಣಕ್ಕಿಳಿಯಲಿದೆ. ಚೀನಾದಲ್ಲಿ ನಡೆದ 2022 ರ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತ ತಂಡ ರುತುರಾಜ್ ಗಾಯಕ್ವಾಡ್ ನಾಯಕತ್ವದಲ್ಲಿ ಚಿನ್ನದ ಪದಕ ಗೆದ್ದಿತ್ತು.

Follow Us