IND vs WI, WWC 2022: ಸ್ಮೃತಿ- ಹರ್ಮನ್‌ಪ್ರೀತ್ ಶತಕ! ಪಾಯಿಂಟ್ ಪಟ್ಟಿಯಲ್ಲಿ ನಂ.1 ಪಟ್ಟಕ್ಕೇರಿದ ಭಾರತ

IND vs WI, WWC 2022: ಎರಡನೇ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ಸೋಲನ್ನು ಎದುರಿಸಬೇಕಾಯಿತು, ಆದರೆ ಈ ತಂಡವು ಮೂರನೇ ಪಂದ್ಯದಲ್ಲಿ ಪ್ರಬಲ ಪುನರಾಗಮನ ಮಾಡುವ ಮೂಲಕ ತನ್ನ ಪಾರಮ್ಯವನ್ನು ತೋರಿತು.

ಪೃಥ್ವಿಶಂಕರ
|

Updated on:Mar 12, 2022 | 3:04 PM

ಶನಿವಾರ ನಡೆದ ಪಂದ್ಯದಲ್ಲಿ ಭಾರತ ಮಹಿಳಾ ತಂಡ ವೆಸ್ಟ್ ಇಂಡೀಸ್ ತಂಡವನ್ನು 155 ರನ್ ಗಳ ಬೃಹತ್ ಅಂತರದಿಂದ ಸೋಲಿಸಿತ್ತು. ಈ ಪಂದ್ಯದಲ್ಲಿ ಭಾರತದ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಅಬ್ಬರಿಸಿದ್ದು, ಭಾರತದ ಮುಂದೆ ವೆಸ್ಟ್ ಇಂಡೀಸ್ ತಂಡಕ್ಕೆ ಏನೂ ಮಾಡಲು ಸಾಧ್ಯವಾಗಲಿಲ್ಲ. ಸ್ಮೃತಿ ಮಂಧಾನ ಮತ್ತು ಹರ್ಮನ್‌ಪ್ರೀತ್ ಕೌರ್ ಅವರ ಶತಕಗಳ ನೆರವಿನಿಂದ ಭಾರತ 50 ಓವರ್‌ಗಳಲ್ಲಿ ಎಂಟು ವಿಕೆಟ್‌ಗಳ ನಷ್ಟಕ್ಕೆ 317 ರನ್ ಗಳಿಸಿತು. ವೆಸ್ಟ್ ಇಂಡೀಸ್ ತಂಡ 162 ರನ್‌ಗಳಿಗೆ ಆಲೌಟ್ ಆಯಿತು. ಈ ಗೆಲುವಿನೊಂದಿಗೆ ಭಾರತ ಅಂಕಪಟ್ಟಿಯಲ್ಲಿ ಭಾರಿ ಲಾಭ ಪಡೆದಿದೆ. ಪಂದ್ಯದ ನಂತರ ಪಾಯಿಂಟ್ಸ್ ಪಟ್ಟಿಯ ಸ್ಥಿತಿ ಹೇಗಿದೆ

1 / 5
ಈ ಪಂದ್ಯಕ್ಕೂ ಮುನ್ನ ನ್ಯೂಜಿಲೆಂಡ್ ವಿರುದ್ಧ ಭಾರತ ಸೋಲನುಭವಿಸಿತ್ತು.ಕಿವೀ ತಂಡದೆದೂರು ಸೋತು ಐದನೇ ಸ್ಥಾನಕ್ಕೆ ಬಂದಿದ್ದ ಟೀಂ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ಧದ ಭರ್ಜರಿ ಗೆಲುವಿನೊಂದಿಗೆ ಭರ್ಜರಿ ಲಾಭ ಪಡೆದಿದೆ. ವಿಂಡೀಸ್ ತಂಡವನ್ನು ಸೋಲಿಸಿ ಭಾರತ ನಂಬರ್ ಒನ್ ತಲುಪಿದೆ.

2 / 5
IND vs WI, WWC 2022: ಸ್ಮೃತಿ- ಹರ್ಮನ್‌ಪ್ರೀತ್ ಶತಕ! ಪಾಯಿಂಟ್ ಪಟ್ಟಿಯಲ್ಲಿ ನಂ.1 ಪಟ್ಟಕ್ಕೇರಿದ ಭಾರತ

ಭಾರತ ಮೂರು ಪಂದ್ಯಗಳಲ್ಲಿ ಎರಡು ಗೆಲುವು ಮತ್ತು ಒಂದು ಸೋಲಿನೊಂದಿಗೆ ನಾಲ್ಕು ಅಂಕಗಳನ್ನು ಹೊಂದಿದೆ. ಆಸ್ಟ್ರೇಲಿಯಾ, ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾ ಮತ್ತು ವೆಸ್ಟ್ ಇಂಡೀಸ್ ಸಹ ನಾಲ್ಕು ಅಂಕಗಳನ್ನು ಹೊಂದಿವೆ ಆದರೆ ಭಾರತದ ನಿವ್ವಳ ರನ್ ದರವು +1.333 ನಲ್ಲಿ ಎಲ್ಲಕ್ಕಿಂತ ಹೆಚ್ಚು. ಅದಕ್ಕಾಗಿಯೇ ಅವರು ನಂಬರ್-1 ಆಗಿದ್ದಾರೆ.

3 / 5
IND vs WI, WWC 2022: ಸ್ಮೃತಿ- ಹರ್ಮನ್‌ಪ್ರೀತ್ ಶತಕ! ಪಾಯಿಂಟ್ ಪಟ್ಟಿಯಲ್ಲಿ ನಂ.1 ಪಟ್ಟಕ್ಕೇರಿದ ಭಾರತ

ಆಸ್ಟ್ರೇಲಿಯ ತಂಡ +1.061 ನೆಟ್ ರನ್ ರೇಟ್‌ನೊಂದಿಗೆ ಎರಡನೇ ಸ್ಥಾನದಲ್ಲಿದೆ. ನ್ಯೂಜಿಲೆಂಡ್ ಮೂರನೇ ಸ್ಥಾನದಲ್ಲಿದೆ ಮತ್ತು ದಕ್ಷಿಣ ಆಫ್ರಿಕಾ ನಾಲ್ಕನೇ ಸ್ಥಾನದಲ್ಲಿದೆ. ವೆಸ್ಟ್ ಇಂಡೀಸ್ ತಂಡ ಈಗ ಐದನೇ ಸ್ಥಾನಕ್ಕೆ ಬಂದಿದೆ.

4 / 5
IND vs WI, WWC 2022: ಸ್ಮೃತಿ- ಹರ್ಮನ್‌ಪ್ರೀತ್ ಶತಕ! ಪಾಯಿಂಟ್ ಪಟ್ಟಿಯಲ್ಲಿ ನಂ.1 ಪಟ್ಟಕ್ಕೇರಿದ ಭಾರತ

ಭಾರತ ತನ್ನ ಮುಂದಿನ ಪಂದ್ಯವನ್ನು ಮಾರ್ಚ್ 16 ರಂದು ಇಂಗ್ಲೆಂಡ್ ವಿರುದ್ಧ ಆಡಬೇಕಾಗಿದೆ. ತಂಡವು ಪಾಯಿಂಟ್ ಪಟ್ಟಿಯಲ್ಲಿ ಮೊದಲ ಸ್ಥಾನವನ್ನು ಕಾಯ್ದುಕೊಳ್ಳಲು ಮತ್ತು ನಾಕೌಟ್ ಸುತ್ತಿಗೆ ಪ್ರವೇಶಿಸಲು ಪ್ರಯತ್ನಿಸುತ್ತದೆ.

5 / 5

Published On - 2:54 pm, Sat, 12 March 22

Follow us
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ