
ಶನಿವಾರ ನಡೆದ ಪಂದ್ಯದಲ್ಲಿ ಭಾರತ ಮಹಿಳಾ ತಂಡ ವೆಸ್ಟ್ ಇಂಡೀಸ್ ತಂಡವನ್ನು 155 ರನ್ ಗಳ ಬೃಹತ್ ಅಂತರದಿಂದ ಸೋಲಿಸಿತ್ತು. ಈ ಪಂದ್ಯದಲ್ಲಿ ಭಾರತದ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಅಬ್ಬರಿಸಿದ್ದು, ಭಾರತದ ಮುಂದೆ ವೆಸ್ಟ್ ಇಂಡೀಸ್ ತಂಡಕ್ಕೆ ಏನೂ ಮಾಡಲು ಸಾಧ್ಯವಾಗಲಿಲ್ಲ. ಸ್ಮೃತಿ ಮಂಧಾನ ಮತ್ತು ಹರ್ಮನ್‌ಪ್ರೀತ್ ಕೌರ್ ಅವರ ಶತಕಗಳ ನೆರವಿನಿಂದ ಭಾರತ 50 ಓವರ್‌ಗಳಲ್ಲಿ ಎಂಟು ವಿಕೆಟ್‌ಗಳ ನಷ್ಟಕ್ಕೆ 317 ರನ್ ಗಳಿಸಿತು. ವೆಸ್ಟ್ ಇಂಡೀಸ್ ತಂಡ 162 ರನ್‌ಗಳಿಗೆ ಆಲೌಟ್ ಆಯಿತು. ಈ ಗೆಲುವಿನೊಂದಿಗೆ ಭಾರತ ಅಂಕಪಟ್ಟಿಯಲ್ಲಿ ಭಾರಿ ಲಾಭ ಪಡೆದಿದೆ. ಪಂದ್ಯದ ನಂತರ ಪಾಯಿಂಟ್ಸ್ ಪಟ್ಟಿಯ ಸ್ಥಿತಿ ಹೇಗಿದೆ

ಈ ಪಂದ್ಯಕ್ಕೂ ಮುನ್ನ ನ್ಯೂಜಿಲೆಂಡ್ ವಿರುದ್ಧ ಭಾರತ ಸೋಲನುಭವಿಸಿತ್ತು.ಕಿವೀ ತಂಡದೆದೂರು ಸೋತು ಐದನೇ ಸ್ಥಾನಕ್ಕೆ ಬಂದಿದ್ದ ಟೀಂ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ಧದ ಭರ್ಜರಿ ಗೆಲುವಿನೊಂದಿಗೆ ಭರ್ಜರಿ ಲಾಭ ಪಡೆದಿದೆ. ವಿಂಡೀಸ್ ತಂಡವನ್ನು ಸೋಲಿಸಿ ಭಾರತ ನಂಬರ್ ಒನ್ ತಲುಪಿದೆ.



Published On - 2:54 pm, Sat, 12 March 22