ಅಡಿಲೇಡ್​ನಲ್ಲಿ ದಾಖಲೆಗಳ ಮಳೆ ಸುರಿಸಿದ ಟೀಂ ಇಂಡಿಯಾ; ರೋಹಿತ್- ಕೊಹ್ಲಿ ಮುಂಚೂಣಿಯಲ್ಲಿ..!

Edited By:

Updated on: Nov 02, 2022 | 7:28 PM

T20 World Cup 2022: ಇದು ಟಿ20 ವಿಶ್ವಕಪ್‌ನಲ್ಲಿ ಭಾರತಕ್ಕೆ 26ನೇ ಜಯವಾಗಿದ್ದು, ವಿಶ್ವಕಪ್‌ನಲ್ಲಿ ಈ ಅತಿ ಕಡಿಮೆ ಮಾದರಿಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಗೆಲುವು ಸಾಧಿಸಿದ ವಿಷಯದಲ್ಲಿ ಭಾರತ ಎರಡನೇ ಸ್ಥಾನಕ್ಕೇರಿದೆ.

1 / 7
ಬುಧವಾರ ಅಡಿಲೇಡ್ ಓವಲ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಸೋಲಿಸಿದ ಟೀಂ ಇಂಡಿಯಾ ಐಸಿಸಿ ಟಿ20 ವಿಶ್ವಕಪ್-2022 ರಲ್ಲಿ ಸೆಮಿಫೈನಲ್ ಭರವಸೆಯನ್ನು ಜೀವಂತವಾಗಿರಿಸಿಕೊಂಡಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ರೋಚಕ ಜಯ ಸಾಧಿಸುವುದರೊಂದಿಗೆ ಕೆಲವು ದಾಖಲೆಗಳನ್ನೂ ಸಹ ನಿರ್ಮಾಣ ಮಾಡಿದೆ.

ಬುಧವಾರ ಅಡಿಲೇಡ್ ಓವಲ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಸೋಲಿಸಿದ ಟೀಂ ಇಂಡಿಯಾ ಐಸಿಸಿ ಟಿ20 ವಿಶ್ವಕಪ್-2022 ರಲ್ಲಿ ಸೆಮಿಫೈನಲ್ ಭರವಸೆಯನ್ನು ಜೀವಂತವಾಗಿರಿಸಿಕೊಂಡಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ರೋಚಕ ಜಯ ಸಾಧಿಸುವುದರೊಂದಿಗೆ ಕೆಲವು ದಾಖಲೆಗಳನ್ನೂ ಸಹ ನಿರ್ಮಾಣ ಮಾಡಿದೆ.

2 / 7

ಇದು ಟಿ20 ವಿಶ್ವಕಪ್‌ನಲ್ಲಿ ಭಾರತಕ್ಕೆ 26ನೇ ಜಯವಾಗಿದ್ದು, ವಿಶ್ವಕಪ್‌ನಲ್ಲಿ ಈ ಅತಿ ಕಡಿಮೆ ಮಾದರಿಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಗೆಲುವು ಸಾಧಿಸಿದ ವಿಷಯದಲ್ಲಿ ಭಾರತ ಎರಡನೇ ಸ್ಥಾನಕ್ಕೇರಿದೆ.

3 / 7

2007ರಲ್ಲಿ ಆರಂಭವಾದ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಇದುವರೆಗೆ ಶ್ರೀಲಂಕಾ ತಂಡ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದು ಮುಂಚೂಣಿಯಲ್ಲಿದೆ. ಶ್ರೀಲಂಕಾ ಇದುವರೆಗೆ 31 ಪಂದ್ಯಗಳನ್ನು ಗೆದ್ದಿದ್ದರೆ, ಭಾರತ 26 ಮತ್ತು ಪಾಕಿಸ್ತಾನ 25 ಪಂದ್ಯಗಳನ್ನು ಗೆದ್ದಿವೆ.

4 / 7

ಈ ಪಂದ್ಯವನ್ನು ಗೆಲ್ಲುವ ಮೂಲಕ ರೋಹಿತ್ ಕೂಡ ದಾಖಲೆ ಬರೆದಿದ್ದು, ಇದು ಕ್ಯಾಲೆಂಡರ್ ವರ್ಷದಲ್ಲಿ ಭಾರತಕ್ಕೆ 20ನೇ ಟಿ20 ಅಂತಾರಾಷ್ಟ್ರೀಯ ಗೆಲುವಾಗಿದೆ. ಹೀಗಾಗಿ ಈ ಸಾಧನೆ ಮಾಡಿದ ಭಾರತದ ಮೊದಲ ಹಾಗೂ ಎರಡನೇ ನಾಯಕ ಎಂಬ ಕೀರ್ತಿಗೆ ರೋಹಿತ್ ಪಾತ್ರರಾಗಿದ್ದಾರೆ.

5 / 7

ಜೊತೆಗೆ ಒಂದು ಕ್ಯಾಲೆಂಡರ್ ವರ್ಷದಲ್ಲಿ ಟಿ20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ ಅತಿ ಹೆಚ್ಚು ಗೆಲುವುಗಳನ್ನು ಗಳಿಸಿದ ನಾಯಕರ ಪಟ್ಟಿಯಲ್ಲಿ ಪಾಕಿಸ್ತಾನದ ಬಾಬರ್ ಅಜಮ್ ಇದ್ದು, ಅವರು 2021 ರಲ್ಲಿ ತಮ್ಮ ತಂಡವನ್ನು ಹೆಚ್ಚು ಗೆಲುವಿನತ್ತ ಮುನ್ನಡೆಸಿದ ದಾಖಲೆ ಬರೆದಿದ್ದಾರೆ.

6 / 7

ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅಜೇಯ 64 ರನ್ ಗಳಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಈ ಮೂಲಕ ಐಸಿಸಿ ಈವೆಂಟ್‌ಗಳಲ್ಲಿ ಅತಿ ಹೆಚ್ಚು ಪಂದ್ಯ ಶ್ರೇಷ್ಠ ಪ್ರಶಸ್ತಿಗಳನ್ನು ಗೆದ್ದವರ ಪಟ್ಟಿಯಲ್ಲಿ ಅವರು ಸಚಿನ್ ತೆಂಡೂಲ್ಕರ್ ಅವರೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ. ಇಬ್ಬರೂ ತಲಾ 10 ಬಾರಿ ಈ ಪ್ರಶಸ್ತಿಗಳನ್ನು ಗೆದ್ದಿದ್ದಾರೆ.

7 / 7

ಈ ಇನ್ನಿಂಗ್ಸ್ ನಂತರ, ಕೊಹ್ಲಿ ಐಸಿಸಿ ಪಂದ್ಯಾವಳಿಗಳಲ್ಲಿ ಒಟ್ಟು 3350 ರನ್ ಗಳಿಸಿದ್ದು ಈ ವಿಷಯದಲ್ಲಿ ಅವರು ಸಚಿನ್ ಅವರನ್ನು ಹಿಂದಿಕ್ಕಿದ್ದಾರೆ. ಆದರೆ ಸಚಿನ್ ಯಾವುದೇ ಟಿ20 ವಿಶ್ವಕಪ್ ಆಡಿಲ್ಲ. ಬದಲಿಗೆ ಅವರು ಏಕದಿನ ವಿಶ್ವಕಪ್ ಮಾತ್ರ ಆಡಿದ್ದಾರೆ.

Published On - 7:28 pm, Wed, 2 November 22

Loading...
Unable to load recommendations.
Follow Us