T20 World Cup: ಟಿ20 ವಿಶ್ವಕಪ್ 7 ಆವೃತ್ತಿಗಳಲ್ಲಿ ಟೀಂ ಇಂಡಿಯಾದ ಪ್ರದರ್ಶನ ಹೇಗಿತ್ತು ಗೊತ್ತಾ?
TV9 Web | Updated By: ಪೃಥ್ವಿಶಂಕರ
Updated on:
Oct 22, 2022 | 7:06 AM
T20 World Cup: 2007ರ ಟಿ20 ವಿಶ್ವಕಪ್ ದಕ್ಷಿಣ ಆಫ್ರಿಕಾದಲ್ಲಿ ನಡೆದಿತ್ತು. ಟಿ20 ವಿಶ್ವಕಪ್ನ ಮೊದಲ ಆವೃತ್ತಿಯಲ್ಲಿ ಟೀಂ ಇಂಡಿಯಾ ಆಡಿದ 7 ಪಂದ್ಯಗಳಲ್ಲಿ 5 ರಲ್ಲಿ ಗೆಲುವು ಸಾಧಿಸಿದರೆ, ಒಂದು ಪಂದ್ಯದಲ್ಲಿ ಸೋಲನುಭವಿಸಿತ್ತು.
1 / 7
2007ರ ಟಿ20 ವಿಶ್ವಕಪ್ ದಕ್ಷಿಣ ಆಫ್ರಿಕಾದಲ್ಲಿ ನಡೆದಿತ್ತು. ಟಿ20 ವಿಶ್ವಕಪ್ನ ಮೊದಲ ಆವೃತ್ತಿಯಲ್ಲಿ ಟೀಂ ಇಂಡಿಯಾ ಆಡಿದ 7 ಪಂದ್ಯಗಳಲ್ಲಿ 5 ರಲ್ಲಿ ಗೆಲುವು ಸಾಧಿಸಿದರೆ, ಒಂದು ಪಂದ್ಯದಲ್ಲಿ ಸೋಲನುಭವಿಸಿತ್ತು. ಇನ್ನುಳಿದಂತೆ ಒಂದು ಪಂದ್ಯದ ರಿಸಲ್ಟ್ ಹೊರಬೀಳಲಿಲ್ಲ. ಇ ಆವೃತ್ತಿಯಲ್ಲಿ ಫೈನಲ್‌ನಲ್ಲಿ ಧೋನಿ ಪಡೆ 5 ರನ್‌ಗಳಿಂದ ಪಾಕಿಸ್ತಾನವನ್ನು ಸೋಲಿಸಿ ಚಾಂಪಿಯನ್ ಪಟ್ಟಕ್ಕೇರಿತ್ತು.
2 / 7
ಇನ್ನು ಇಂಗ್ಲೆಂಡ್ನಲ್ಲಿ ನಡೆದ 2009 ರ ಆವೃತ್ತಿಯ ಟಿ20 ವಿಶ್ವಕಪ್ನಲ್ಲಿ 5 ಪಂದ್ಯಗಳನ್ನಾಡಿದ ಭಾರತ, 3 ಪಂದ್ಯಗಳಲ್ಲಿ ಸೋತು, 2 ರಲ್ಲಿ ಗೆಲುವು ಸಾಧಿಸಿತ್ತು. ಹೀಗಾಗಿ ತಂಡದ ಪ್ರಯಾಣವು ಗುಂಪು ಹಂತದಲ್ಲಿಯೇ ಕೊನೆಗೊಂಡಿತು. ಈ ಆವೃತ್ತಿಯಲ್ಲಿ ಪಾಕಿಸ್ತಾನ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.
3 / 7
2010 ರ ಟಿ20 ವಿಶ್ವಕಪ್ ವೆಸ್ಟ್ ಇಂಡೀಸ್‌ನಲ್ಲಿ ನಡೆದಿತ್ತು. ಈ ಆವೃತ್ತಿಯಲ್ಲಿ 5 ಪಂದ್ಯಗಳನ್ನಾಡಿದ ಭಾರತ, ಮತ್ತೆ 5 ಪಂದ್ಯಗಳಲ್ಲಿ 2 ರಲ್ಲಿ ಮಾತ್ರ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿತ್ತು. ಹೀಗಾಗಿ ಟೀಂ ಇಂಡಿಯಾ ಮತ್ತೆ ಗ್ರೂಪ್ ಹಂತದಲ್ಲೇ ಟೂರ್ನಿಯಿಂದ ಹೊರಬಿದ್ದಿತ್ತು. ಈ ಬಾರಿ ಇಂಗ್ಲೆಂಡ್ ತಂಡ ಚಾಂಪಿಯನ್ ಪಟ್ಟಕ್ಕೇರಿತ್ತು.
4 / 7
2012 ರಲ್ಲಿ ಶ್ರೀಲಂಕಾದಲ್ಲಿ ನಡೆದ ಟಿ20 ವಿಶ್ವಕಪ್ ಟೂರ್ನಿಯಲ್ಲಿ, ಟೀಂ ಇಂಡಿಯಾ ಆಡಿದ 5 ಪಂದ್ಯಗಳಲ್ಲಿ 4ರಲ್ಲಿ ಗೆಲುವು ಸಾಧಿಸಿತ್ತು. ಆದರೂ ಸಹ ಈ ಆವೃತ್ತಿಯಲ್ಲೂ ಟೀಂ ಇಂಡಿಯಾ ಮತ್ತೆ ಗುಂಪು ಹಂತದಿಂದಲೇ ಟೂರ್ನಿಯಿಂದ ಹೊರಬಿತ್ತು. ಈ ಬಾರಿ ನೆಟ್ ರನ್ ರೇಟ್‌ನಿಂದಾಗಿ ಸೆಮಿಫೈನಲ್‌ಗೆ ಅರ್ಹತೆ ಪಡೆಯಲು ಸಾಧ್ಯವಾಗಲಿಲ್ಲ. ಈ ಆವೃತ್ತಿಯಲ್ಲಿ ವೆಸ್ಟ್ ಇಂಡೀಸ್ ಚಾಂಪಿಯನ್ ಆಯಿತು.
5 / 7
2014ರಲ್ಲಿ ಬಾಂಗ್ಲಾದೇಶದಲ್ಲಿ ಟಿ20 ವಿಶ್ವಕಪ್ ಟೂರ್ನಿಯನ್ನು ಆಯೋಜಿಸಲಾಗಿತ್ತು. ಈ ಟೂರ್ನಿಯಲ್ಲಿ ಫೈನಲ್ಗೆ ಲಗ್ಗೆ ಇಟ್ಟಿದ್ದ ಟೀಂ ಇಂಡಿಯಾ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಲಂಕಾ ಎದುರು ಸೋಲು ಕಂಡಿತ್ತು. ಈ ಆವೃತ್ತಿಯಲ್ಲಿ ಟೀಂ ಇಂಡಿಯಾ 6 ಪಂದ್ಯಗಳಲ್ಲಿ 5ರಲ್ಲಿ ಗೆಲುವು ಸಾಧಿಸಿತ್ತು.
6 / 7
2016ರ ಟಿ20 ವಿಶ್ವಕಪ್ ಭಾರತದಲ್ಲಿ ನಡೆದಿದ್ದು, ಈ ಆವೃತ್ತಿಯಲ್ಲಿ ಭಾರತ ತಂಡ ಸೆಮಿಫೈನಲ್‌ನಲ್ಲಿ ಹೊರಬಿದ್ದಿತ್ತು. ಈ ಬಾರಿ ಭಾರತ ತಂಡ 5 ಪಂದ್ಯಗಳಲ್ಲಿ 3ರಲ್ಲಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿತ್ತು. ಸೆಮಿಫೈನಲ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 7 ವಿಕೆಟ್ಗಳಿಂದ ಸೋಲನುಭವಿಸಿತ್ತು.
7 / 7
2016ರ ಟಿ20 ವಿಶ್ವಕಪ್ ಭಾರತದಲ್ಲಿ ನಡೆದಿದ್ದು, ಈ ಆವೃತ್ತಿಯಲ್ಲಿ ಭಾರತ ತಂಡ ಸೆಮಿಫೈನಲ್‌ನಲ್ಲಿ ಹೊರಬಿದ್ದಿತ್ತು. ಈ ಬಾರಿ ಭಾರತ ತಂಡ 5 ಪಂದ್ಯಗಳಲ್ಲಿ 3ರಲ್ಲಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿತ್ತು. ಸೆಮಿಫೈನಲ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 7 ವಿಕೆಟ್ಗಳಿಂದ ಸೋಲನುಭವಿಸಿತ್ತು.