AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಲ್​ ಬೆನ್ನಲ್ಲೇ ಟೆಸ್ಟ್ ಸರಣಿ: ಟೀಮ್ ಇಂಡಿಯಾದ ವೇಳಾಪಟ್ಟಿ ಪ್ರಕಟ

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) ಫೈನಲ್ ಪಂದ್ಯವು ಮೇ 26 ರಂದು ನಡೆಯಲಿದೆ. ಈ ಪಂದ್ಯದೊಂದಿಗೆ ರಂಗೀನ್ ಕ್ರಿಕೆಟ್ ಟೂರ್ನಿಗೆ ತೆರೆ ಬೀಳಲಿದೆ. ಇದಾದ ಬಳಿಕ ಭಾರತೀಯ ಆಟಗಾರರು ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗಾಗಿ ಸಜ್ಜಾಗಲಿದ್ದಾರೆ. ಈ ಸರಣಿಯಲ್ಲಿ ಒಟ್ಟು 5 ಪಂದ್ಯಗಳು ನಡೆಯಲಿದ್ದು, ಇದಕ್ಕಾಗಿ ಶೀಘ್ರದಲ್ಲೇ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗುತ್ತದೆ.

ಝಾಹಿರ್ ಯೂಸುಫ್
|

Updated on: May 06, 2025 | 3:24 PM

Share
ಭಾರತ ತಂಡವು 2025 ರಲ್ಲಿ ಕೇವಲ 3 ಟೆಸ್ಟ್ ಸರಣಿಗಳನ್ನು ಆಡಲಿದೆ. ಇಂಡಿಯನ್ ಪ್ರೀಮಿಯರ್ ಲೀಗ್ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾದ ಟೆಸ್ಟ್ ವೇಳಾಪಟ್ಟಿ ಶುರುವಾಗಲಿದ್ದು, ಈ ಮೂಲಕ ಭಾರತ ತಂಡ ಒಟ್ಟು 9 ಟೆಸ್ಟ್​ ಪಂದ್ಯಗಳನ್ನಾಡಲಿದೆ. ಅಂದರೆ ಕಳೆದ ವರ್ಷಕ್ಕೆ ಹೋಲಿಸಿದರೆ, ಈ ವರ್ಷ ಭಾರತ ತಂಡವು ಕೇವಲ 9 ಟೆಸ್ಟ್ ಪಂದ್ಯಗಳನ್ನು ಮಾತ್ರ ಆಡುತ್ತಿದೆ.

1 / 5
2024 ರಲ್ಲಿ ಟೀಮ್ ಇಂಡಿಯಾ ಒಟ್ಟು 16 ಟೆಸ್ಟ್ ಪಂದ್ಯಗಳನ್ನಾಡಿತ್ತು. ಈ ಹದಿನಾರು ಮ್ಯಾಚ್​​ಗಳಲ್ಲಿ ಟೀಮ್ ಇಂಡಿಯಾ ಗೆದ್ದಿರುವುದು ಕೇವಲ 8 ಪಂದ್ಯಗಳಲ್ಲಿ ಮಾತ್ರ. ಇನ್ನುಳಿದ 7 ಪಂದ್ಯಗಳಲ್ಲಿ ಸೋಲನುಭವಿಸಿದರೆ, ಒಂದು ಮ್ಯಾಚ್​ ಡ್ರಾನಲ್ಲಿ ಅಂತ್ಯಗೊಂಡಿದೆ. ಇದೀಗ ಟೀಮ್ ಇಂಡಿಯಾದ 2025ರ ಟೆಸ್ಟ್ ಸರಣಿಗಳಿಗಾಗಿ ಸಜ್ಜಾಗಬೇಕಿದೆ. ಇಲ್ಲಿ ಭಾರತ ತಂಡದ ಎದುರಾಳಿಗಳು ಯಾರೆಂದು ನೋಡುವುದಾದರೆ...

2 / 5
ಭಾರತ vs ಇಂಗ್ಲೆಂಡ್: ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಪಂದ್ಯದ ಬಳಿಕ ಟೀಮ್ ಇಂಡಿಯಾ ಮತ್ತೆ ಟೆಸ್ಟ್ ಆಡುವುದು ಜೂನ್ ತಿಂಗಳಲ್ಲಿ. ಅಂದರೆ ಐಪಿಎಲ್ ಮುಕ್ತಾಯದ ಬೆನ್ನಲ್ಲೇ ಭಾರತ ತಂಡದ ಸರಣಿ ಆರಂಭವಾಗಲಿದೆ. ಜೂನ್ 20 ರಿಂದ ಆಂಗ್ಲರ ನಾಡಿನಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಭಾರತ vs ಇಂಗ್ಲೆಂಡ್ ಒಟ್ಟು 5 ಪಂದ್ಯಗಳನ್ನಾಡಲಿದೆ.

3 / 5
ಭಾರತ vs ವೆಸ್ಟ್ ಇಂಡೀಸ್: ಅಕ್ಟೋಬರ್​​ನಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ 2 ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ. ಈ ಸರಣಿಯ ಮೊದಲ ಪಂದ್ಯವು ಅಕ್ಟೋಬರ್ 2 ರಂದು ಶುರುವಾದರೆ, ದ್ವಿತೀಯ ಟೆಸ್ಟ್ ಪಂದ್ಯ ಅಕ್ಟೋಬರ್ 10 ರಿಂದ ಆರಂಭವಾಗಲಿದೆ.

4 / 5
ಭಾರತ vs ಸೌತ್ ಆಫ್ರಿಕಾ: ವಿಂಡೀಸ್ ವಿರುದ್ಧದ ಸರಣಿಯ ಬಳಿಕ ಟೀಮ್ ಇಂಡಿಯಾ ಸೌತ್ ಆಫ್ರಿಕಾ ವಿರುದ್ಧ 2 ಪಂದ್ಯಗಳ ಟೆಸ್ಟ್ ಸರಣಿ ಆಡಲಿದೆ. ಈ ಸರಣಿಯು ನವೆಂಬರ್ 14 ರಿಂದ ಆರಂಭವಾಗಲಿದ್ದು, ದ್ವಿತೀಯ ಟೆಸ್ಟ್ ಪಂದ್ಯವು ನವೆಂಬರ್ 22 ರಿಂದ ಶುರುವಾಗಲಿದೆ. ಇದಾದ ಬಳಿಕ ಟೀಮ್ ಇಂಡಿಯಾ ಟಿ20 ವಿಶ್ವಕಪ್​ಗಾಗಿ ಸಿದ್ಧತೆಗಳನ್ನು ಆರಂಭಿಸಲಿದೆ.

5 / 5
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!

ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್

ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ

ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ

ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್

ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್

‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ

ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್

ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು

ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ