- Kannada News Photo gallery Cricket photos Indian Cricket Team will play approximately 16 test matches in a year 2024-25 kannada news
ಒಂದು ವರ್ಷದೊಳಗೆ 16 ಟೆಸ್ಟ್ ಪಂದ್ಯ; ಗೌತಮ್ ಗಂಭೀರ್‌ಗೆ ಆರಂಭದಲ್ಲೇ ಅಗ್ನಿ ಪರೀಕ್ಷೆ
Team India: ಪ್ರಸ್ತುತ ರಜೆಯಲ್ಲಿರುವ ಟೀಂ ಇಂಡಿಯಾ ಆ ಬಳಿಕ ಒಂದರ ಹಿಂದೆ ಒಂದರಂತೆ ಹಲವು ಟೆಸ್ಟ್ ಸರಣಿಗಳನ್ನು ಆಡಲಿದೆ. ಬಿಸಿಸಿಐ ಇಂದು ಪ್ರಕಟಿಸಿರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯೂ ಸೇರಿದಂತೆ ಭಾರತ ತಂಡ ಸುಮಾರು 1 ವರ್ಷದೊಳಗೆ ಒಟ್ಟು 16 ಟೆಸ್ಟ್ ಪಂದ್ಯಗಳನ್ನು ಆಡಬೇಕಿದೆ.
Updated on: Aug 22, 2024 | 6:07 PM

ರಾಹುಲ್ ದ್ರಾವಿಡ್ ನಂತರ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ಅಧಿಕಾರ ವಹಿಸಿಕೊಂಡ ಗೌತಮ್ ಗಂಭೀರ್‌ಗೆ ಸೋಲು ಗೆಲುವಿನ ಆರಂಭ ಸಿಕ್ಕಿದೆ. ಶ್ರೀಲಂಕಾ ಪ್ರವಾಸದೊಂದಿಗೆ ತಮ್ಮ ಅಧಿಕಾರಾವಧಿಯನ್ನು ಪ್ರಾರಂಭಿಸಿದ ಗಂಭೀರ್‌ಗೆ ಟಿ20 ಸರಣಿಯಲ್ಲಿ ಗೆಲುವಿನ ಶುಭಾರಂಭ ಸಿಕ್ಕರೆ, ಏಕದಿನ ಸರಣಿಯಲ್ಲಿ ಸೋಲಿನ ಆಘಾತ ಎದುರಾಯಿತು.

ಇಂತಹ ಪರಿಸ್ಥಿತಿಯಲ್ಲಿ ಮುಂಬರುವ ಸರಣಿಗಳು ಗೌತಮ್ ಗಂಭೀರ್‌ಗೆ ಬಹಳ ಮಹತ್ವದ್ದಾಗಿದೆ. ಪ್ರಸ್ತುತ ರಜೆಯಲ್ಲಿರುವ ಟೀಂ ಇಂಡಿಯಾ ಆ ಬಳಿಕ ಒಂದರ ಹಿಂದೆ ಒಂದರಂತೆ ಹಲವು ಟೆಸ್ಟ್ ಸರಣಿಗಳನ್ನು ಆಡಲಿದೆ. ಬಿಸಿಸಿಐ ಇಂದು ಪ್ರಕಟಿಸಿರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯೂ ಸೇರಿದಂತೆ ಭಾರತ ತಂಡ ಸುಮಾರು 1 ವರ್ಷದೊಳಗೆ ಒಟ್ಟು 16 ಟೆಸ್ಟ್ ಪಂದ್ಯಗಳನ್ನು ಆಡಬೇಕಿದೆ.

ಟೀಂ ಇಂಡಿಯಾದ ಮುಂದಿನ ಸರಣಿಯು ಬಾಂಗ್ಲಾದೇಶದ ವಿರುದ್ಧ ನಡೆಯಲಿದೆ. ಉಭಯ ತಂಡಗಳ ನಡುವೆ ಎರಡು ಪಂದ್ಯಗಳ ಟೆಸ್ಟ್ ಸರಣಿ ನಡೆಯಲ್ಲಿದೆ. ಈ ಸರಣಿಯು ಸೆಪ್ಟೆಂಬರ್ 19 ರಿಂದ ಆರಂಭವಾಗಲಿದ್ದು, ಸರಣಿಯ ಮೊದಲ ಪಂದ್ಯ ಚೆನ್ನೈನಲ್ಲಿ ಸೆಪ್ಟೆಂಬರ್ 19 ರಿಂದ 23 ರವರೆಗೆ ಮತ್ತು ಎರಡನೇ ಟೆಸ್ಟ್ ಪಂದ್ಯ ಕಾನ್ಪುರದಲ್ಲಿ ಸೆಪ್ಟೆಂಬರ್ 27 ರಿಂದ ಅಕ್ಟೋಬರ್ 1 ರವರೆಗೆ ನಡೆಯಲಿದೆ.

ಬಾಂಗ್ಲಾದೇಶದ ನಂತರ ಟೀಂ ಇಂಡಿಯಾ ತನ್ನ ತವರಿನಲ್ಲಿ ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿಯನ್ನು ಆಡಬೇಕಿದೆ. ಅಕ್ಟೋಬರ್ 16 ರಿಂದ ಎರಡು ತಂಡಗಳ ನಡುವೆ 3 ಪಂದ್ಯಗಳು ನಡೆಯಲಿವೆ. ಸರಣಿಯ ಮೊದಲ ಟೆಸ್ಟ್ ಪಂದ್ಯ ಬೆಂಗಳೂರಿನಲ್ಲಿ ಅಕ್ಟೋಬರ್ 16 ರಿಂದ 20 ರವರೆಗೆ ನಡೆಯಲಿದೆ. ಇದರ ನಂತರ ಎರಡನೇ ಟೆಸ್ಟ್ ಅಕ್ಟೋಬರ್ 24 ರಿಂದ 28 ರವರೆಗೆ ಪುಣೆಯಲ್ಲಿ ನಡೆಯಲಿದೆ. ಮೂರನೇ ಮತ್ತು ಕೊನೆಯ ಟೆಸ್ಟ್ ನವೆಂಬರ್ 1 ರಿಂದ 5 ರವರೆಗೆ ಮುಂಬೈನಲ್ಲಿ ನಡೆಯಲಿದೆ.

ಗೌತಮ್ ಗಂಭೀರ್ ಅವರ ಅತಿದೊಡ್ಡ ಟೆಸ್ಟ್ ಈ ವರ್ಷದ ಕೊನೆಯಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿದ್ದು, ಅಲ್ಲಿ ಎರಡು ತಂಡಗಳ ನಡುವೆ 5 ಟೆಸ್ಟ್ ಪಂದ್ಯಗಳ ಬಾರ್ಡರ್ ಗವಾಸ್ಕರ್ ಸರಣಿ ನಡೆಯಲಿದೆ. ಇದರಲ್ಲಿ ಡೇ ನೈಟ್ ಟೆಸ್ಟ್ ಪಂದ್ಯವೂ ಸೇರಿದೆ. ಈ ಸರಣಿಯು ನವೆಂಬರ್ 22 ರಿಂದ ಪ್ರಾರಂಭವಾಗಲಿದ್ದು, ಮುಂದಿನ ವರ್ಷದ ಆರಂಭದವರೆಗೆ ನಡೆಯಲಿದೆ. ಈ ಅವಧಿಯಲ್ಲಿ ಟೀಂ ಇಂಡಿಯಾ ಪರ್ತ್, ಅಡಿಲೇಡ್, ಬ್ರಿಸ್ಬೇನ್, ಮೆಲ್ಬೋರ್ನ್ ಮತ್ತು ಸಿಡ್ನಿ ಮೈದಾನಗಳಲ್ಲಿ ಟೆಸ್ಟ್ ಪಂದ್ಯಗಳನ್ನು ಆಡಲಿದೆ.

ಟೀಂ ಇಂಡಿಯಾ ಮುಂದಿನ ವರ್ಷ ಇಂಗ್ಲೆಂಡ್‌ನಲ್ಲಿ ತನ್ನ ಮೊದಲ ಟೆಸ್ಟ್ ಸರಣಿಯನ್ನು ಆಡಲಿದೆ. ಉಭಯ ತಂಡಗಳ ನಡುವೆ 5 ಟೆಸ್ಟ್ ಪಂದ್ಯಗಳು ನಡೆಯಲಿವೆ. ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಜೂನ್ 20 ರಿಂದ ಲೀಡ್ಸ್‌ನಲ್ಲಿ ನಡೆಯಲಿದ್ದು, ಕೊನೆಯ ಟೆಸ್ಟ್ ಜುಲೈ 31 ರಂದು ನಡೆಯಲಿದೆ.

ಆದರೆ ಈ ಸರಣಿಗೂ ಮುನ್ನ 2023-25ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯ ನಡೆಯಲ್ಲಿದ್ದು, ಒಂದು ವೇಳೆ ಟೀಂ ಇಂಡಿಯಾ ಫೈನಲ್ಗೆ ಅರ್ಹತೆ ಪಡೆದರೆ, ಗಂಭೀರ್ ಸಾರಥ್ಯದಲ್ಲಿ ಟೀಂ ಇಂಡಿಯಾಕ್ಕೆ ಐಸಿಸಿ ಟ್ರೋಫಿ ಗೆಲ್ಲುವ ಅವಕಾಶ ಒದಗಿಬರಲಿದೆ.




