AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯದಲ್ಲಿ ಗುರುತಿಸಿಕೊಂಡ ಟೀಮ್ ಇಂಡಿಯಾದ 10 ಆಟಗಾರರು..!

Team India: ಟೀಮ್ ಇಂಡಿಯಾ ಪರ ಆಡಿದ ಅನೇಕ ಆಟಗಾರರು ರಾಜಕೀಯದಲ್ಲೂ ಗುರುತಿಸಿಕೊಂಡಿದ್ದಾರೆ. ಹೀಗೆ ಬಿಜೆಪಿ ಪಕ್ಷದಿಂದ ಸಂಸದರಾಗಿ ಆಯ್ಕೆಯಾಗಿರುವ ಗೌತಮ್ ಗಂಭೀರ್ ಇದೀಗ ರಾಜಕೀಯದಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ. ಅಲ್ಲದೆ ಮುಂಬರುವ ದಿನಗಳಲ್ಲಿ ಐಪಿಎಲ್​ ಮತ್ತು ಇತರೆ ಲೀಗ್​ಗಳಲ್ಲಿ ತೊಡಗಿಸಿಕೊಳ್ಳಲು ಬಯಸಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್|

Updated on: Mar 02, 2024 | 12:35 PM

Share
ಟೀಮ್ ಇಂಡಿಯಾದ ಮಾಜಿ ಆಟಗಾರ ಗೌತಮ್ ಗಂಭೀರ್ (Gautam Gambhir) ರಾಜಕೀಯಕ್ಕೆ ವಿದಾಯ ಹೇಳಿದ್ದಾರೆ. 2019 ರಲ್ಲಿ ಪೂರ್ವ ದೆಹಲಿ ಕ್ಷೇತ್ರದಿಂದ ಬಿಜೆಪಿ ಸಂಸದರಾಗಿ ಆಯ್ಕೆಯಾಗಿದ್ದ ಗಂಭೀರ್ ಇದೀಗ ರಾಜಕೀಯ ಚಟುವಟಿಕೆಗಳಿಂದ ದೂರ ಉಳಿಯುವುದಾಗಿ ತಿಳಿಸಿದ್ದಾರೆ. ಇದರೊಂದಿಗೆ ಗೌತಮ್ ಗಂಭೀರ್ ಅವರ ರಾಜಕೀಯ ಇನಿಂಗ್ಸ್​ ಕೊನೆಗೊಳ್ಳಲಿರುವುದು ಖಚಿತವಾಗಿದೆ.

1 / 12
ಗೌತಮ್ ಗಂಭೀರ್ ಅಲ್ಲದೆ ಟೀಮ್ ಇಂಡಿಯಾದ ಅನೇಕ ಆಟಗಾರರು ರಾಜಕೀಯದಲ್ಲಿ 2ನೇ ಇನಿಂಗ್ಸ್ ಆರಂಭಿಸಿದ್ದರು. ಆ ಆಟಗಾರರು ಯಾರು? ಯಾವ ಕ್ಷೇತ್ರದಿಂದ ಸ್ಪರ್ಧಿಸಿದ್ದರು ಎಂಬುದರ ಸಂಕ್ಷಿಪ್ತ ಮಾಹಿತಿ ಇಲ್ಲಿದೆ...

2 / 12
ಮನೋಜ್ ತಿವಾರಿ: ಟೀಮ್ ಇಂಡಿಯಾ ಪರ 15 ಪಂದ್ಯಗಳನ್ನಾಡಿರುವ ಮನೋಜ್ ತಿವಾರಿ ಪಶ್ಚಿಮ ಬಂಗಾಳದ ಕ್ರೀಡಾ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2021 ರ ವಿಧಾನಸಭೆ ಚುನಾವಣೆಯಲ್ಲಿ ತೃಣಮೂಲ್ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ಅವರು ಶಿಬ್‌ಪುರ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ.

3 / 12
ನವಜೋತ್ ಸಿಂಗ್ ಸಿಧು: 2019 ರಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ನವಜೋತ್ ಸಿಂಗ್ ಸಿಧು, ಪಂಜಾಬ್​ ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ವ್ಯವಹಾರಗಳ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಇದಕ್ಕೂ ಮುನ್ನ ಸಿಧು ಭಾರತದ ಪರ 187 ಪಂದ್ಯಗಳನ್ನಾಡಿದ್ದರು.

4 / 12
ಮನ್ಸೂರ್ ಅಲಿ ಖಾನ್ ಪಟೌಡಿ: ಭಾರತದ ಮಾಜಿ ನಾಯಕ ಮನ್ಸೂರ್ ಅಲಿ ಖಾನ್ ಪಟೌಡಿ ರಾಜಕೀಯದಲ್ಲಿ ಇನಿಂಗ್ಸ್ ಆರಂಭಿಸಿದ ಮೊದಲಿಗರಲ್ಲಿ ಒಬ್ಬರು. ಹರಿಯಾಣದ ಭಿವಾನಿ ಮತ್ತು ಮಧ್ಯಪ್ರದೇಶದ ಭೋಪಾಲ್‌ನಿಂದ ಎರಡು ಬಾರಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಅವರು 2 ಬಾರಿ ಕೂಡ ಸೋಲುಂಡಿದ್ದರು.

5 / 12
ಮೊಹಮ್ಮದ್ ಕೈಫ್: ಟೀಮ್ ಇಂಡಿಯಾದ ಮಾಜಿ ಆಟಗಾರ ಮೊಹಮ್ಮದ್ ಕೈಫ್ 2014 ರ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದ ಫುಲ್‌ಪುರದಿಂದ ಕಾಂಗ್ರೆಸ್​ನಿಂದ ಸ್ಪರ್ಧಿಸಿದ್ದರು. ಆದರೆ ಮೊದಲ ಪ್ರಯತ್ನದಲ್ಲೇ ಸೋಲುಂಡಿದ್ದ ಅವರು ಆ ಬಳಿಕ ರಾಜಕೀಯದಿಂದ ದೂರ ಉಳಿದರು.

6 / 12
ಮೊಹಮ್ಮದ್ ಅಝರುದ್ದೀನ್: ಟೀಮ್ ಇಂಡಿಯಾದ ಮಾಜಿ ನಾಯಕ ಮೊಹಮ್ಮದ್ ಅಝರುದ್ದೀನ್, 2009 ರಲ್ಲಿ ಉತ್ತರ ಪ್ರದೇಶದ ಮೊರಾದಾಬಾದ್‌ ಕ್ಷೇತ್ರದಿಂದ ಕಾಂಗ್ರೆಸ್ ಸಂಸದರಾಗಿ ಆಯ್ಕೆಯಾಗಿದ್ದರು. ಇದೀಗ ಹೈದರಾಬಾದ್​ ಕಾಂಗ್ರೆಸ್​ನಲ್ಲಿ ಗುರುತಿಸಿಕೊಂಡಿರುವ ಅವರು ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಜುಬಿಲಿ ಹಿಲ್ಸ್‌ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋಲನುಭವಿಸಿದ್ದರು.

7 / 12
ಕೀರ್ತಿ ಆಝಾದ್: ಟೀಮ್ ಇಂಡಿಯಾದ ಮಾಜಿ ಆಲ್‌ರೌಂಡರ್ ಕೀರ್ತಿ ಆಝಾದ್ ಬಿಹಾರದ ದರ್ಭಾಂಗಾ ಕ್ಷೇತ್ರದಿಂದ ಬಿಜೆಪಿ ಪಕ್ಷದಿಂದ ಮೂರು ಬಾರಿ ಗೆದ್ದಿದ್ದಾರೆ. ಇದಾದ ಬಳಿಕ ಅವರು ಕಾಂಗ್ರೆಸ್ ಪಕ್ಷ ಸೇರಿದ್ದರು. 1983 ರ ವಿಶ್ವಕಪ್ ವಿಜೇತ ತಂಡದ ಭಾಗವಾಗಿದ್ದ ಆಝಾದ್ ಈಗ ರಾಜಕೀಯದಿಂದ ದೂರ ಉಳಿದಿದ್ದಾರೆ.

8 / 12
ಚೇತನ್ ಚೌಹಾಣ್: ಟೀಮ್ ಇಂಡಿಯಾದ ಮಾಜಿ ಟೆಸ್ಟ್ ಬ್ಯಾಟರ್ ಚೇತನ್ ಚೌಹಾಣ್ ಅವರು ಉತ್ತರ ಪ್ರದೇಶದ ಅಮ್ರೋಹಾ ಕ್ಷೇತ್ರದಿಂದ ಎರಡು ಬಾರಿ ಬಿಜೆಪಿ ಸಂಸದರಾಗಿದ್ದಾರೆ. 2004 ರ ಸೋಲಿನ ಬಳಿಕ ಅವರು ರಾಜಕೀಯಕ್ಕೆ ಗುಡ್ ಬೈ ಹೇಳಿದ್ದರು.

9 / 12
ವಿನೋದ್ ಕಾಂಬ್ಳಿ: ಭಾರತ ತಂಡದ ಮಾಜಿ ಬ್ಯಾಟ್ಸ್‌ಮನ್ ವಿನೋದ್ ಕಾಂಬ್ಳಿ ಲೋಕ ಭಾರತಿ ಪಕ್ಷದಿಂದ 2009 ರಲ್ಲಿ ಮುಂಬೈನ ವಿಖ್ಕ್ರೋಲಿಯಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಆ ಚುನಾವಣೆಯಲ್ಲಿ ಸೋತ ಬಳಿಕ ಅವರು ರಾಜಕೀಯದಿಂದ ದೂರ ಉಳಿದರು.

10 / 12
ಮನೋಜ್ ಪ್ರಭಾಕರ್: ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿ ಹೊಂದಿದ ಬಳಿಕ ಮನೋಜ್ ಪ್ರಭಾಕರ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಟೀಮ್ ಇಂಡಿಯಾ 169 ಪಂದ್ಯಗಳನ್ನಾಡಿರುವ ಅವರು ಈಗಲೂ ಭಾರತೀಯ ಜನತಾ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದಾರೆ.

11 / 12
ಪ್ರಕಾಶ್ ರಾಥೋಡ್: ಕರ್ನಾಟಕ ಪರ 14 ಪ್ರಥಮ ದರ್ಜೆ ಪಂದ್ಯಗಳನ್ನಾಡಿರುವ ಪ್ರಕಾಶ್ ರಾಥೋಡ್ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದಾರೆ. ಅಲ್ಲದೆ 2018 ರಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

12 / 12
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ

ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ

ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!

ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!

ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!

ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ

ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?

ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್